2016ರಿಂದ ದೇಶದಲ್ಲಿ ಮಕ್ಕಳ ಅತ್ಯಾಚಾರ ಪ್ರಕರಣ ಶೇ.96 ಹೆಚ್ಚಳ

Date:

ಎಲ್ಲ ರೀತಿಯ ಅಮಾನುಷ ಲೈಂಗಿಕ ದೌರ್ಜನ್ಯಗಳು ಒಳಗೊಂಡು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು 2016ರಿಂ 2022ರ ಅವಧಿಯವರೆಗೆ ಶೇ.96 ರಷ್ಟು ಹೆಚ್ಚಳವಾಗಿದೆ ಎಂದು ಮಕ್ಕಳ ಹಕ್ಕುಗಳ ಸರ್ಕಾರೇತರ ಸಂಸ್ಥೆ ಸಿಆರ್‌ವೈ ಕೈಗೊಂಡ ಸಮೀಕ್ಷೆಯನ್ನು ಉಲ್ಲೇಖಿಸಿ ಎನ್‌ಸಿಆರ್‌ಬಿ ಅಂಕಿಅಂಶಗಳು ತಿಳಿಸಿದೆ.

- Advertisement -

ಸಿಆರ್‌ವೈ ನಿರ್ದೇಶಕರಾದ ಸುಬೆಂದೋ ಭಟ್ಟಾಚಾರ್ಜಿ ಅವರ ಹೇಳಿಕೆಯ ಪ್ರಕಾರ ಸುಧಾರಿತ ಸಾರ್ವಜನಿಕ ಅರಿವು ಹೆಚ್ಚಾಗುತ್ತಿರುವುದರಿಂದ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳ ದಾಖಲಾತಿ ಹೆಚ್ಚಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ವರದಿ ಮಾಡುತ್ತಿರುವ ಕಾರ್ಯವಿಧಾನಗಳಲ್ಲಿ ಹೆಚ್ಚುತ್ತಿರುವ ವಿಶ್ವಾಸ, ನಿಖರ ಸಹಾಯವಾಣಿಗಳು, ಆನ್‌ಲೈನ್‌ ಪೋರ್ಟಲ್‌ಗಳು ಹಾಗೂ ವಿಶೇಷವಾದ ಏಜನ್ಸಿಗಳು ಸಂತ್ರಸ್ತರು ಹಾಗೂ ಅವರ ಪೋಷಕರನ್ನು ಇಂತಹ ಪ್ರಕರಣಗಳನ್ನು ಹೆಚ್ಚು ದಾಖಲಿಸಲು ಪ್ರೋತ್ಸಾಹ ನೀಡುತ್ತಿವೆ.

2016ರಿಂದ 2020 ಹೊರತುಪಡಿಸಿ ಅತ್ಯಾಚಾರ ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿವೆ ಎಂದು ಸಿಆರ್‌ಐ ವರದಿಯಲ್ಲಿ ತಿಳಿಸಲಾಗಿದೆ. 2021 ಹಾಗೂ 2022ರಲ್ಲಿ ಇಂತಹ ಪ್ರಕರಣಗಳು ಶೇ. 6.9 ರಷ್ಟು ಏರಿಕೆಯಾಗಿದೆ.

ಎಲ್ಲ ರೀತಿಯ ಲೈಂಗಿಕ ಅಮಾನುಷ ಕೃತ್ಯಗಳು ಐಪಿಸಿ ಮತ್ತು ವಿಶೇಷ ಸ್ಥಳೀಯ ಕಾನೂನುಗಳನ್ನು ಒಳಗೊಂಡಿರುವುದರೊಂದಿಗೆ ಒಟ್ಟಾರೆ 2016 ರಿಂದ 2022ರವರೆಗೆ ಶೇ.96.8 ರಷ್ಟು ಏರಿಕೆಯಾಗಿವೆ ಎಂದು ಸಿಆರ್‌ವೈ ಅಂಕಿಅಂಶಗಳಲ್ಲಿ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

2022ರಲ್ಲಿ ಒಂದರಲ್ಲಿಯೇ 38,911 ಮಕ್ಕಳ ಅತ್ಯಾಚಾರ ಹಾಗೂ ಅಮಾನುಷ ಲೈಂಗಿಕ ದುಷ್ಕೃತ್ಯ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ ಈ ಸಂಖ್ಯೆ 36,381 ನಷ್ಟಿತ್ತು.

2020ರಲ್ಲಿ 30,705, 2019ರಲ್ಲಿ 31132, 2018ರಲ್ಲಿ 30917 ಪ್ರಕರಣಗಳು ದಾಖಲಾಗಿವೆ.2017ರಲ್ಲಿ 27,616 ಹಾಗೂ 2016ರಲ್ಲಿ 19,765 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ.

ಉನ್ನತ ಮಟ್ಟದ ಪ್ರಕರಣಗಳಿಗೆ ವ್ಯಾಪಕವಾದ ಮಾಧ್ಯಮ ಪ್ರಚಾರ ಹಾಗೂ ಸಮುದಾಯಗಳು ಹಾಗೂ ನಾಗರಿಕ ಸೇವಾ ಸಂಸ್ಥೆಗಳ ಸಕ್ರಿಯ ಭಾಗಿಯಾಗುವಿಕೆ ಕೂಡ ಪ್ರಕರಣ ದಾಖಲಿಸುವುದಕ್ಕೆ ಪೂರಕವಾದ ಅಂಶವಾಗಿದೆ.

ಮಕ್ಕಳ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮುಕ್ತ ಸಂಭಾಷಣೆಗಳನ್ನು ಪ್ರೋತ್ಸಾಹಿಸುವುದು ಸಂತ್ರಸ್ತರಿಗೆ ಮಾತನಾಡಲು ಮತ್ತು ಕಳಂಕದ ಭಯವಿಲ್ಲದೆ ನಿಂದನೆಯನ್ನು ವರದಿ ಮಾಡಲು ಅಧಿಕಾರ ನೀಡುತ್ತಿದೆ ಎಂದು ಸಿಆರ್‌ವೈ ನಿರ್ದೇಶಕರಾದ ಸುಬೆಂದೋ ಭಟ್ಟಾಚಾರ್ಜಿ ಹೇಳಿದ್ದಾರೆ.

ಇದಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಾನೂನು ಅವಶ್ಯಕತೆಗಳ ಅನುಗುಣವಾಗಿ ಮಕ್ಕಳ ಸುರಕ್ಷತೆಯ ಬಗ್ಗೆ ಬಲವಾದ ಕಾರ್ಯ ವಿಧಾನಗಳನ್ನು ಅನುಷ್ಠಾನಗೊಳಿರುವುದು ಕೂಡ ಪ್ರಕರಣಗಳನ್ನು ದಾಖಲಿಸಲು ಪ್ರಮುಖ ಕಾರಣಗಳಾಗಿವೆ.

ಪ್ರತಿ ವರ್ಷ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಪರಾಧ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ, ಇದು ಐಪಿಸಿ ಅಡಿಯಲ್ಲಿ ದಾಖಲಾದ ಅಪರಾಧಗಳ ಬಗ್ಗೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಂತಹ ವಿಶೇಷ ಕಾನೂನುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ.

2016ರ ಮುನ್ನ ಮಕ್ಕಳ ಅತ್ಯಾಚಾರ ಪ್ರಕರಣಗಳು ಪೋಕ್ಸೊ ಕಾಯ್ದೆಯಡಿಯಲ್ಲಿ 19,756 ಪ್ರಕರಣಗಳು ಮಾತ್ರ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...