ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳಿಸಿದ ಮಕ್ಕಳ ಕಲ್ಯಾಣ ಸಮಿತಿ; ಮತ್ತೆ ದೌರ್ಜನ್ಯ

Date:

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯನ್ನು ರಕ್ಷಣೆ ಮಾಡಬೇಕಾದ ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಯೇ (ಸಿಡಬ್ಲ್ಯೂಸಿ) ಆಕೆಯ ಮೇಲೆ ಮತ್ತೊಮ್ಮೆ ದೌರ್ಜನ್ಯ ಎಸಗಲು ಆರೋಪಿಗೆ ಸಹರಿಸಿದೆ. ಸಿಡಬ್ಲ್ಯೂಸಿ ಸದಸ್ಯರು ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳುಹಿಸಿದ್ದು, ಅಲ್ಲಿ ಆರೋಪಿ ಆಕೆಯ ಮೇಲೆ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

- Advertisement -

ಘಟನೆಯು ಮಧ್ಯಪ್ರದೇಶದ ಪನ್ನಾ ಛತ್ತರ್‌ಪುರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ 10 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

2025ರ ಜನವರಿ 16ರಂದು ಶಾಲೆಗೆ ತೆರಳಿದ್ದ ಸಂತ್ರಸ್ತ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯನ್ನು ಆರೋಪಿಯು ಅಪಹರಿಸಿದ್ದನೆಂದು ಆರೋಪಿಸಲಾಗಿದೆ. ಆಕೆಯ ಪೋಷಕರು ಮಗಳ ನಾಪತ್ತೆ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬರೋಬ್ಬರಿ ಒಂದು ತಿಂಗಳ ನಂತರ, ಫೆಬ್ರವರಿ 17ರಂದು ಹರಿಯಾಣದ ಗುರುಗ್ರಾಮದಲ್ಲಿ ಆರೋಪಿ ಮತ್ತು ಸಂತ್ರಸ್ತೆಯನ್ನು ಪೊಲೀಸರು ಪತ್ತೆ ಹಚ್ಚಿಸಿದ್ದರು. ಬಾಲಕಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದರು. ಸಂತ್ರಸ್ತೆಗೆ ಆರೋಪಿ ಸಂಬಂಧಿಯೇ ಆಗಿದ್ದನೆಂದು ಹೇಳಲಾಗಿದೆ.

ಆರೋಪಿ ವಿರುದ್ಧ ಅಪಹರಣ, ಅತ್ಯಾಚಾರ ಆರೋಪದ ಮೇಲೆ ಬಿಎನ್‌ಎಸ್‌ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪನ್ನಾ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಕೆಲ ದಿನಗಳ ಬಳಿಕ, ಛತ್ತರ್‌ಪುರ ಜಿಲ್ಲೆಯ ಜುಜಾರ್ ನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಸಂತ್ರಸ್ತ ಬಾಲಕಿಯನ್ನು ಪನರ್ವಸತಿಗಾಗಿ ಪನ್ನಾ ಸಿಡಬ್ಲ್ಯೂಸಿ ಕೇಂದ್ರದಲ್ಲಿ ಇರಿಸಲಾಗಿತ್ತು. ಆದಾಗ್ಯೂ, ಸಮಿತಿಯು ನಿಯಮಗಳನ್ನು ಉಲ್ಲಂಘಿಸಿ ಸಂತ್ರಸ್ತೆಯನ್ನು ಆರೋಪಿಯ ಅತ್ತಿಗೆ ಮನೆಗೆ ಕಳುಹಿಸಿದೆ ಎಂದು ಆರೋಪಿಸಲಾಗಿದೆ. ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಆರೋಪಿಯು ತನ್ನ ಅತ್ತಿಗೆಯ ಮನೆಯಲ್ಲಿ ಸಂತ್ರಸ್ತೆಯ ಮೇಲೆ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ, ಆರೋಪಿಯ ಜಾಮೀನನ್ನು ರದ್ದುಗೊಳಿಸಿ, ಆತನನ್ನು ಬಂಧಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಉಮರ್ ಖಾಲಿದ್ ಸೆರೆವಾಸಕ್ಕೆ ಐದು ವರ್ಷಗಳು: ಮುಕ್ತಿ ಎಂದು?

ಸಂತ್ರಸ್ತೆಯನ್ನು ಆರೋಪಿಯ ಸಂಬಂಧಿಯ ಮನೆಗೆ ಕಳಿಸುವಾಗ ಆಕೆಯ ಸುರಕ್ಷತೆಯ ಬಗ್ಗೆ ನಿರ್ಣಯಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿಡಬ್ಲ್ಯೂಸಿ ಸಾಮಾಜಿಕ ತನಿಖಾ ವರದಿಯನ್ನು ಪಡೆದಿಲ್ಲ ಎಂಬುದು ಬೆಳಕಿಗೆ ಬಂದಿದೆ. ಈ ನಿರ್ಲಕ್ಷ್ಯವು ಬಾಲಕಿಯ ಹಿತಾಸಕ್ತಿ ಮತ್ತು ರಕ್ಷಣೆಗೆ ಅಪಾಯವೊಡ್ಡುತ್ತದೆ ಎಂದು ವರದಿಯಾಗಿದೆ.

“ಅಪ್ರಾಪ್ತ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳುಹಿಸುವ ತಪ್ಪು ನಿರ್ಧಾರ ತೆಗೆದುಕೊಂಡವರು, ನಿರ್ಧಾರವನ್ನು ಇಲಾಖೆಯ ಗಮನಕ್ಕೆ ಬಾರದಂತೆ ಮುಚ್ಚಿಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಸೂಕ್ಷ್ಮವಾಗಿ ತನಿಖೆ ನಡೆಸುತ್ತಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಗಳ ವಿರುದ್ಧವೂ ಪೋಕ್ಸೋ ಕಾಯ್ದೆಯ ಸೆಕ್ಷನ್ 21, SC/ST ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 4 ಹಾಗೂ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 199 ಮತ್ತು 239ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...