‘ಗಲ್ಲದ ಸನ್ನೆ’ ವಿವಾದ; ವಿಜಯ್ ವಿರುದ್ಧ ‘ಬಾಡಿ ಶೇಮಿಂಗ್’ ಆರೋಪ: ಇಂದಿಗೂ ಗಾಯದ ಕಲೆಗಳಿವೆ ಎಂದ ಸ್ಟ್ಯಾಲಿನ್

Date:

ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡು ವಿಧಾನಸಭೆಯಲ್ಲಿ ಮಾಡಿದ ‘ಗಲ್ಲದ ಸನ್ನೆ’ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ತಮಿಳುನಾಡಿನ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮತ್ತು ಎಂ.ಕೆ. ಸ್ಟ್ಯಾಲಿನ್ ನಡುವಿನ ಜಟಾಪಟಿ ತೀವ್ರಗೊಂಡಿದೆ.

- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಪೋಲಿಸ್ ಅನುದಾನ ಕುರಿತ ಚರ್ಚೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ವಿಜಯ್ ತಮ್ಮ ಗಲ್ಲಕ್ಕೆ (Jaw) ಕೈಯಿಟ್ಟು ಮಾಡಿದ ಭಂಗಿಯು ಕಾಯ್ದೆಯಡಿ (MISA) ಜೈಲು ಶಿಕ್ಷೆ ಅನುಭವಿಸಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟ್ಯಾಲಿನ್ ಅವರನ್ನು ಹೀಯಾಳಿಸುವ ಅಥವಾ ‘ಬಾಡಿ ಶೇಮಿಂಗ್’ ಮಾಡುವಂತಿದೆ ಎಂಬ ಆರೋಪಗಳು ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್ ಜಿಗಣೆ, ಇನ್ನೆಂದೂ ನಂಬಲ್ಲ: ಉದಯನಿಧಿ ಸ್ಟ್ಯಾಲಿನ್

ಈ ವಿವಾದಕ್ಕೆ ಪ್ರತಿಕ್ರಿಯಿಸಿರುವ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟ್ಯಾಲಿನ್, “ಸಹೋದರ ವಿಜಯ್, ನೀವು ಹೇಳಿದ್ದು ನಿಜ. 1976ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಎಂಐಎಸ್‌ಎ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದಾಗ ನಾನು ಅನುಭವಿಸಿದ ಲಾಠಿ ಏಟುಗಳಿಂದ ನನ್ನ ದವಡೆ ಮೂಳೆ ಮುರಿದಿತ್ತು. ಇಂದು ಕೂಡ ನನ್ನ ದೇಹದ ಮೇಲೆ ಆ ಹೊಡೆತಗಳ ಗಾಯದ ಕಲೆಗಳಿವೆ. ಅದನ್ನು ನಾನು ನಿರಾಕರಿಸುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಲ್ಲದೆ, ಮುಖ್ಯಮಂತ್ರಿಯ ಸ್ಥಾನದಲ್ಲಿದ್ದುಕೊಂಡು ಮಾತನಾಡುವಾಗ ಶಾಸನಸಭೆಯ ಘನತೆ ಹಾಗೂ ರಾಜಕೀಯ ಸೌಜನ್ಯವನ್ನು ಕಾಯ್ದುಕೊಳ್ಳಬೇಕು ಎಂದು ವಿಜಯ್ ಅವರಿಗೆ ಸಲಹೆ ನೀಡಿದ್ದಾರೆ.

ಅತ್ತ, ವಿಧಾನಸಭೆಯಲ್ಲಿ ತಮ್ಮ ಹಾವಭಾವದ ಸುತ್ತ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ವಿಜಯ್, “ನನ್ನ ಶರೀರ ಭಾಷೆ ಅಥವಾ ಗಲ್ಲದ ಮೇಲಿನ ಕೈಸನ್ನೆ ಸಂಪೂರ್ಣವಾಗಿ ಆಕಸ್ಮಿಕವಾಗಿದ್ದು, ಯಾರ ವೈಯಕ್ತಿಕ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶ ಹೊಂದಿರಲಿಲ್ಲ. ಇದನ್ನು ರಾಜಕೀಯವಾಗಿ ಯಾರ ವಿರುದ್ಧದ ನಿಂದನೆ ಎಂದು ಅರ್ಥೈಸಬಾರದು” ಎಂದು ಎಕ್ಸ್ (X) ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಆದರೆ, ಎಡಪಕ್ಷಗಳು ಮತ್ತು ಡಿಎಂಕೆ ನಾಯಕರು ಈ ಭಂಗಿಯನ್ನು ತೀವ್ರವಾಗಿ ಖಂಡಿಸಿದ್ದು, ಸದನವನ್ನು ವೈಯಕ್ತಿಕ ವಿಡಿಯೋ ರೀಲ್ಸ್ ಸೆಟ್‌ನಂತೆ ಬಳಸಬಾರದು ಎಂದು ಆಕ್ಷೇಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...