ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಗಸ್ತು ತಡೆದ ಚೀನಾ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

Date:

ಅರುಣಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಭಾರತೀಯ ಸೇನೆ ಗಸ್ತು ತಿರುಗುವುದನ್ನು ಚೀನಾ ತಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇದೊಂದು ಆತಂಕಕಾರಿ ಬೆಳವಣಿಗೆ ಎಂದಿರುವ ಅವರು, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಚೀನಾ ನಮ್ಮ ಸೇನೆಯನ್ನು ಗಸ್ತು ತಿರುಗದಂತೆ ತಡೆಯುತ್ತಿರುವುದು ಅತ್ಯಂತ ಆತಂಕಕಾರಿ. ಅದಕ್ಕಿಂತಲೂ ಆತಂಕಕಾರಿಯಾದದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೌನ. ಚೀನಾವನ್ನು ತಡೆಯುವ ಬದಲು, ಮೋದಿ ಸರ್ಕಾರವು ಈ ಸುದ್ದಿಯನ್ನು ಮುಚ್ಚಿಹಾಕಲು ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿದೆ” ಎಂದು ಆರೋಪಿಸಿದ್ದಾರೆ. ಗಾಲ್ವಾನ್ ಸಂಘರ್ಷದ ಬಳಿಕ ಪ್ರಧಾನಿಯವರು ನೀಡಿದ್ದ ‘ಚೀನಾ ನಮ್ಮ ಒಂದು ಇಂಚು ಭೂಮಿಯನ್ನೂ ವಶಪಡಿಸಿಕೊಂಡಿಲ್ಲ’ ಎಂಬ ಹೇಳಿಕೆಯನ್ನು ನೆನಪಿಸಿರುವ ರಾಹುಲ್, “ಪ್ರಧಾನಿಯವರು ದೇಶದ ಭದ್ರತೆಗಿಂತ ತಮ್ಮ ನಕಲಿ ವರ್ಚಸ್ಸನ್ನು ಉಳಿಸಿಕೊಳ್ಳಲು ಆದ್ಯತೆ ನೀಡುತ್ತಿರುವುದು ದೇಶಕ್ಕೆ ಅತ್ಯಂತ ಅಪಾಯಕಾರಿ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಈ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಗಾಲ್ವಾನ್ ನಂತರ ಈಗ ಅರುಣಾಚಲ ಪ್ರದೇಶವೇ? ಭಾರತದ ಅವಿಭಾಜ್ಯ ಅಂಗವಾಗಿರುವ ಅರುಣಾಚಲ ಪ್ರದೇಶದ ಒಳಗೆ ಚೀನಾ ನುಗ್ಗಲು ಯತ್ನಿಸುತ್ತಿರುವ ವರದಿಗಳು ಕಳವಳಕಾರಿಯಾಗಿವೆ. ಸಾಂಪ್ರದಾಯಿಕ ಗಸ್ತು ಕೇಂದ್ರಗಳು ಹಾಗೂ ಹುಲ್ಲುಗಾವಲು ಪ್ರದೇಶಗಳಿಗೆ ಭಾರತೀಯರಿಗೆ ಪ್ರವೇಶವಿದೆಯೇ ಎಂಬುದಕ್ಕೆ ಮೋದಿ ಸರ್ಕಾರ ತಕ್ಷಣವೇ ಉತ್ತರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ ಎಂಬುದು ಸ್ವಯಂ ವೇದ್ಯ ಸತ್ಯ. ಇದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು. ಚೀನಾದ ಕುತಂತ್ರಕ್ಕೆ ತಿರುಗೇಟು ನೀಡಿದ್ದ ಭಾರತ, ‘ಸರ್ವೇ ಆಫ್ ಇಂಡಿಯಾ’ ನಕ್ಷೆಯಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ತನ್ನದೇ ಆದ ಅಧಿಕೃತ ಹೆಸರುಗಳೊಂದಿಗೆ ಗುರುತಿಸಿತ್ತು.

ಈ ಬೆಳವಣಿಗೆಗಳ ನಡುವೆ, ಅರುಣಾಚಲ ಪ್ರದೇಶದಲ್ಲಿ ಚೀನಾದಿಂದ ಯಾವುದೇ ರೀತಿಯ ಒತ್ತುವರಿಯಾಗಿಲ್ಲ ಎಂದು ಅಧಿಕೃತ ಮೂಲಗಳು ಸುದ್ದಿಸಂಸ್ಥೆಗೆ ಸ್ಪಷ್ಟಪಡಿಸಿವೆ. “ಗಡಿರೇಖೆ ನಿಖರವಾಗಿ ಗುರುತಿಸಲ್ಪಡದ ಕಾರಣ, ಗಸ್ತು ತಿರುಗುವಾಗ ಕೆಲವೊಮ್ಮೆ ಎರಡೂ ಕಡೆಯ ಸೇನೆಗಳು ಮುಖಾಮುಖಿಯಾಗುತ್ತವೆ. ಇದನ್ನು ಚಾಲ್ತಿಯಲ್ಲಿರುವ ಶಿಷ್ಟಾಚಾರಗಳ ಮೂಲಕ ಬಗೆಹರಿಸಿಕೊಳ್ಳಲಾಗುತ್ತದೆ. ಗಡಿಯಲ್ಲಿ ಚೀನಾದ ಚಟುವಟಿಕೆಗಳನ್ನು ಕಣ್ಗಾವಲಿಡಲು ಮತ್ತು ತಡೆಯಲು ಸೇನೆ ಹಾಗೂ ಐಟಿಬಿಪಿ ಸನ್ನದ್ಧವಾಗಿವೆ. ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲದೆ ಕೇವಲ ಗಮನ ಸೆಳೆಯುವ ಉದ್ದೇಶದಿಂದ ಇಂತಹ ಆರೋಪಗಳನ್ನು ಮಾಡಲಾಗುತ್ತಿದೆ” ಎಂದು ಮೂಲಗಳು ತಿಳಿಸಿವೆ.

ಚೀನಾ 1960ರ ಗಡಿ ಮಾತುಕತೆಯ ಕಾಲದಿಂದಲೂ ಅರುಣಾಚಲ ಪ್ರದೇಶವನ್ನು ‘ದಕ್ಷಿಣ ಟಿಬೆಟ್’ ಎಂದು ಕರೆದುಕೊಂಡು, ರಾಜ್ಯದ ಸುಮಾರು 69,000 ಚದರ ಕಿ.ಮೀ. ಪ್ರದೇಶದ ಮೇಲೆ ಹಕ್ಕು ಸಾಧಿಸಲು ಯತ್ನಿಸುತ್ತಿದೆ. 1959ರಲ್ಲಿ ಅಸ್ಸಾಂ ರೈಫಲ್ಸ್‌ನ ಲಾಂಗ್‌ಜು ಔಟ್‌ಪೋಸ್ಟ್ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದ್ದ ಚೀನಾ, ಅಲ್ಲಿ ನಿರಂತರವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. 1962ರ ಯುದ್ಧದ ಸಮಯದಲ್ಲಿ ಚೀನಾ ಸೇನೆಯು ಕಾಮೆಂಗ್, ಸುಬಾನ್ಸಿರಿ, ಸಿಯೋಮ್ ಮತ್ತು ಲೋಹಿತ್ ಕಣಿವೆಗಳಲ್ಲಿ ಕಾರ್ಯಾಚರಣೆ ನಡೆಸಿತ್ತಾದರೂ, ಕದನ ವಿರಾಮದ ಬಳಿಕ ವಾಸ್ತವಿಕ ಗಡಿರೇಖೆಯ (LAC) ಉತ್ತರಕ್ಕೆ ಹಿಂದಿರುಗಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...