ಚಾಕೊಲೇಟ್ ಕದ್ದಿರಬಹುದೆಂದು ಶಂಕಿಸಿ 12 ವರ್ಷದ ಮಗಳಿಗೆ ಕೋಲಿನಿಂದ ಹೊಡೆದು ಕೊಂದ ತಂದೆ

Date:

ಚಾಕೊಲೇಟ್ ಕದ್ದಿರಬಹುದೆಂದು ಶಂಕಿಸಿ ತಂದೆಯೇ ತನ್ನ 12 ವರ್ಷದ ಮಗಳಿಗೆ ಕೋಲಿನಿಂದ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ನರೋರಾದ ರತನ್‌ಪುರ ಗ್ರಾಮದಲ್ಲಿ ನಡೆದಿದೆ.

- Advertisement -

ನಿಮ್ಮ ಮಗಳು ಪೂಜಾ ಹಣ ನೀಡದೆಯೇ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವರು ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ತಂದೆ ಪುಷ್ಪೇಂದ್ರ ಸಂಜೆಯ ವೇಳೆ ಮದ್ಯಪಾನ ಮಾಡಿ ಮನೆಗೆ ಬಂದು ಕೋಲಿನಿಂದ ಮಗಳಿಗೆ ಹೊಡೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ರಾತ್ರಿಯಿಡೀ ತಲೆಕೆಳಗಾಗಿ ನೇತುಹಾಕಿ ಬಾಲಕಿಯನ್ನು ಕೊಂದ ವಿಕೃತ ತಂದೆ

ಈ ಬಗ್ಗೆ ಆರೋಪಿಯ ಪತ್ನಿ ದೂರು ನೀಡಿದ್ದು, ನಮ್ಮ ಮಗಳ ಮೇಲೆ ಆತ ಕೋಲಿನಿಂದ ಹೊಡೆಯುವಾಗ ನಾನು ತಡೆಯಲು ಹೋದೆ. ನನಗೂ ಹಲ್ಲೆ ನಡೆಸಿದರು ಎಂದು ಹೇಳಿದ್ದಾರೆ.

ಇನ್ನು ಮಗಳಿಗೆ ತಂದೆ ಕ್ರೂರವಾಗಿ ಥಳಿಸಿದ್ದು, ಪೂಜಾ ತಲೆಗೆ ಗಂಭೀರವಾದ ಗಾಯವಾಗಿ ಆಕೆ ಪ್ರಜ್ಞಾಹೀನಳಾಗಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಬದಲಾಗಿ ತಂದೆ ಆಕೆಯನ್ನು ಮತ್ತು ತನ್ನ ಪತ್ನಿಯನ್ನು ಮನೆಯೊಳಗೆ ಕೂಡುಹಾಕಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ತಾಯಿ ನೆರೆಹೊರೆಯವರನ್ನು ಕರೆದಿದ್ದು, ಬಳಿಕ ಬಾಗಿಲು ತೆಗೆದು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ದೇಹದಲ್ಲಿ 10ರಿಂದ 12 ಗಾಯಗಳು ಕಂಡುಬಂದಿದೆ. ತಲೆಬುರುಡೆಗೆ ತೀವ್ರವಾದ ಏಟಾಗಿರುವುದೂ ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ.

ಇದೇ ರೀತಿಯ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲೂ ನಡೆದಿದೆ. ಸಂಬಂಧಿಕರ ಮನೆಯಿಂದ ಹಣ ಕಳ್ಳತನ ಮಾಡಿದ್ದಾಳೆ ಎಂಬ ಶಂಕೆಯ ಮೇಲೆ, ತಂದೆಯೊಬ್ಬ ತನ್ನ 10 ವರ್ಷದ ಮಗಳನ್ನು ರಾತ್ರಿಯಿಡೀ ತಲೆಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ್ದು, ಆಕೆ ಮೃತಪಟ್ಟಿದ್ದಾಳೆ. ಬಾಲಕಿಯ ತಂದೆ ದಾದು ಅಲಿಯಾಸ್ ನಾನಾ ಯಮಗರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...