ಗಣೇಶ ಪೂಜೆಯಲ್ಲಿ ಪ್ರಧಾನಿಗೆ ಆಹ್ವಾನ: ಮೌನ ಮುರಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

Date:

ತಮ್ಮ ಮನೆಯ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೌನ ಮುರಿದಿದ್ದಾರೆ.

- Advertisement -

ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಅವರು, ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಲ್ಲಿ ಸಾಕಷ್ಟು ಪ್ರಬುದ್ಧತೆ ಇದೆ. ಕಾರ್ಯನಿರ್ವಾಹಕ ಮುಖ್ಯಸ್ಥರಲ್ಲಿ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಚರ್ಚಿಸಲಾಗಿಲ್ಲ. ಪ್ರೋಟೋಕಾಲ್‌ ತುಂಬ ಕಟ್ಟುನಿಟ್ಟಾಗಿರುತ್ತವೆ. ರಾಜಕೀಯ ಕಾರ್ಯನಿರ್ವಾಹಕ ಮುಖ್ಯಸ್ಥರೊಂದಿಗೆ ನ್ಯಾಯಾಂಗದ ಯಾವುದೇ ವಿಷಯಗಳನ್ನು ಚರ್ಚಿಸಲಾಗಿಲ್ಲ. ನಮಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತ ಕರ್ತವ್ಯಗಳ ಬಗ್ಗೆ ತಿಳಿದಿದೆ. ಅವರಿಗೂ ರಾಜಕೀಯ ನಡವಳಿಕೆಗಳ ಬಗ್ಗೆ ಅರಿವಿದೆ. ಸ್ವಾಯತ್ತ ನ್ಯಾಯಾಂಗದ ಮುಖ್ಯ ನ್ಯಾಯಮೂರ್ತಿ ಅಥವಾ ನ್ಯಾಯಮೂರ್ತಿ ಒಳಗೊಂಡಂತೆ ಯಾವುದೇ ನ್ಯಾಯಾಧೀಶರು ಯಾವುದೇ ಬೆದರಿಕೆಗೆ ಒಳಗಾಗುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ರಾಜ್ಯಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ವಾಡಿಕೆ. ಹಾಗೆಯೇ ಇದು ಕೂಡ. ರಾಜಕೀಯದಲ್ಲಿಯೂ ಕೂಡ ನ್ಯಾಯಾಂಗಕ್ಕೆ ಹೆಚ್ಚಿನ ಗೌರವವಿದೆ. ನ್ಯಾಯಾಂಗ ಮತ್ತು ಸರ್ಕಾರದ ನಡುವೆ ಸುಗಮವಾಗಿ ಕಾರ್ಯಗಳು ಸಾಗಲು ಸಭೆಗಳು ಅಗತ್ಯವಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ನಾವು ರಾಜ್ಯದ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಬೇಕು. ಏಕೆಂದರೆ ಬಜೆಟ್ ಒದಗಿಸುವವರು ಅವರು. ನ್ಯಾಯಾಂಗಕ್ಕೆ ಬಜೆಟ್ ಒದಗಿಸುವವರು ಅವರೇ ವಿನಾ: ನ್ಯಾಯಾಧೀಶರಲ್ಲ. ನಾವು ಭೇಟಿಯಾಗದೇ ಪತ್ರಗಳ ಮೇಲೆ ಮಾತ್ರ ಅವಲಂಬಿತವಾಗಿದ್ದರೆ ನಮ್ಮ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು.

ನ.10ರಂದು ನಿವೃತ್ತಿ ಹೊಂದಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ದೆಹಲಿ ನಿವಾಸಕ್ಕೆ ಸೆಪ್ಟೆಂಬರ್‌ನಲ್ಲಿ ಗಣೇಶ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದರು. ಈ ಭೇಟಿಗೆ ಸಂಬಂಧಿಸಿದಂತೆ ವಿಪಕ್ಷಗಳು ಟೀಕೆ ಮಾಡಿದ್ದವು.

ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ಪ್ರಧಾನಿಯವರು ಉನ್ನತ ವ್ಯಕ್ತಿಗಳು. ಒಬ್ಬ ಹಾಲಿ ಸಿಜೆಐ ಮನೆಗೆ ಪ್ರಧಾನಿಯೊಬ್ಬರು ಭೇಟಿ ನೀಡುವುದು ಸರಿಯೇ? ಇದು ನ್ಯಾಯಾಂಗಕ್ಕೆ ಧಕ್ಕೆ ತಂದಹಾಗಲ್ಲವೇ? ಎಂದು ವಿಪಕ್ಷಗಳು ಕಿಡಿಕಾರಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...