ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ

Date:

ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವರು ನವಂಬರ್‌ 10, 2024 ರಂದು ನಿವೃತ್ತರಾಗಲಿದ್ದು, ಅವರ ಮುಂದಿನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರದ ಅನುಮೋದನೆಯ ಮೇರೆಗೆ ಖನ್ನಾ ಅವರು 51ನೇ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

- Advertisement -

ಡಿ ವೈ ಚಂದ್ರಚೂಡ್‌ ಅವರು ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರನ್ನು ಮುಂದಿನ ತಮ್ಮ ಉತ್ತರಾಧಿಕಾರಿ ಎಂದು ಶಿಫಾರಸ್ಸು ಮಾಡಿದ್ದಾರೆ. ಸಂಜೀವ್‌ ಖನ್ನಾ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಮೇ 13, 2025ರವರೆಗೆ ಇರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿದ್ದ ಸಂಜೀವ್‌ ಖನ್ನಾ ಅವರು ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿತ್ತು. 1983ರಲ್ಲಿ ವಕೀಲರಾಗಿ ದೆಹಲಿಯಲ್ಲಿ ವೃತ್ತಿ ಆರಂಭಿಸಿದ ಖನ್ನಾ ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿಯ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳಂತಹ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಸಂಜೀವ್‌ ಖನ್ನಾ ಅವರು ಪ್ರಸ್ತುತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.

ಸಂವಿಧಾನದ 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ತೀರ್ಪು ಮತ್ತು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಪಡಿಸಿದ ಸಾಂವಿಧಾನಿಕ ಪೀಠಗಳ ಭಾಗವಾಗಿ ಸಂಜೀವ್‌ ಖನ್ನಾ ತೀರ್ಪು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...