ಪ್ರಚಾರಕ್ಕಾಗಿ ಪತ್ರ ಬರೆಯಬೇಡಿ: ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧ್ಯಕ್ಷನ ವಿರುದ್ಧ ಸಿಜೆಐ ಗರಂ

Date:

ಚುನಾವಣಾ ಬಾಂಡ್‌ ನಿಷೇಧಿಸಿ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದ ಸುಪ್ರೀಂಕೋರ್ಟ್ ವಕೀಲರ ಸಂಘದ ಅಧ್ಯಕ್ಷನ ವಿರುದ್ಧ ಮುಖ್ಯ ನ್ಯಾಯಮೂರ್ತಿ ಗರಂ ಆದ ಘಟನೆ ಇಂದು ಕೋರ್ಟ್ ಕಲಾಪದ ವೇಳೆ ನಡೆದಿದೆ.

- Advertisement -

ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಸೋಮವಾರ ಮತ್ತೆ ವಿಚಾರಣೆ ಕೈಗೆತ್ತಿಕೊಂಡಿದ್ದ ವೇಳೆ ಸುಪ್ರೀಂ ಕೋರ್ಟ್‌ನಲ್ಲಿ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ವಕೀಲರ ಸಂಘದ ಅಧ್ಯಕ್ಷ(ಎಸ್‌ಸಿಬಿಎ) ಅಧ್ಯಕ್ಷ ಡಾ. ಆದೀಶ್ ಸಿ. ಅಗರವಾಲ್, ರಾಷ್ಟ್ರಪತಿ ಸೇರಿದಂತೆ ಸಿಜೆಐ ಡಿವೈ ಚಂದ್ರಚೂಡ್ ಅವರಿಗೂ ಪತ್ರ ಬರೆದಿದ್ದರು. ಅಲ್ಲದೇ, ಸ್ವಯಂ ಪ್ರೇರಿತ ಮರುಪರಿಶೀಲನಾ ಅರ್ಜಿಯನ್ನು ಕೂಡ ಹಾಕಿದ್ದರು.

ಇಂದು ನಡೆಯುತ್ತಿದ್ದ ಕಲಾಪದ ವೇಳೆ ಹಾಜರಾದ ಆದೀಶ್ ಸಿ. ಅಗರವಾಲ್, ತನ್ನ ಅರ್ಜಿಯನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಈ ವೇಳೆ ಗರಂ ಆದ ಸುಪ್ರಿಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, “ನೀವು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು. ಅಲ್ಲದೇ, ನೀವು ಸುಪ್ರೀಂ ಕೋರ್ಟ್‌ನ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರು. ನೀವು ಪತ್ರ ಬರೆದಿದ್ದನ್ನು ನಾನು ಗಮನಿಸಿದ್ದೇನೆ. ಇಲ್ಲಿ ಏನೆಲ್ಲ ಕಾರ್ಯವಿಧಾನ ನಡೆದಿದೆ ಎಂಬುದು ನಿಮಗೂ ತಿಳಿದಿದೆ. ನೀವು ಪತ್ರ ಬರೆದಿರುವುದು ಪ್ರಚಾರಕ್ಕೆಂದು ನಮಗೆ ಗೊತ್ತಿದೆ. ಈ ಬಗ್ಗೆ ನಾನೇನೂ ಹೆಚ್ಚು ಹೇಳುವುದಿಲ್ಲ. ನನ್ನನ್ನು ಹೆಚ್ಚೇನೂ ಹೇಳುವಂತೆ ಮಾಡಬೇಡಿ. ಅದರಿಂದ ನಿಮಗೂ ಕೂಡ ಅಸಹ್ಯ ಎನಿಸಬಹುದು” ಎಂದು ಹೇಳುವ ಮೂಲಕ ಅವರ ಅರ್ಜಿಯನ್ನು ಮೂಲೆಗೆ ತಳ್ಳಿದರು.

ರಾಷ್ಟ್ರಪತಿಗೆ ಪತ್ರ ಬರೆದಿದ್ದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧ್ಯಕ್ಷ

ರಾಜಕೀಯ ಪಕ್ಷಗಳಿಗೆ ವ್ಯಕ್ತಿಗಳು ಮತ್ತು ಸಂಸ್ಥೆಗಳು ನೀಡುವ ದೇಣಿಗೆ ಮತ್ತು ಈ ರೀತಿ ಹಣ ನೀಡಿದ ಮಂದಿಯ ಹೆಸರು ಮತ್ತು ಅವರು ನೀಡಿದ ಮೊತ್ತವನ್ನು ಗೌಪ್ಯವಾಗಿಡುವ ಕೇಂದ್ರ ಸರ್ಕಾರದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಕಳೆದ ಫೆ.15ರಂದು ರದ್ದುಗೊಳಿಸುವ ಮೂಲಕ ಐತಿಹಾಸಿಕ ತೀರ್ಪು ನೀಡಿತ್ತು. ಈ ತೀರ್ಪಿನ ವೇಳೆ ಸುಪ್ರೀಂಕೋರ್ಟ್, ಇದು ‘ಅಸಂವಿಧಾನಿಕ’ ಎಂದು ಕೂಡ ಉಲ್ಲೇಖಿಸಿತ್ತು. ಅಲ್ಲದೇ, ಎಲ್ಲ ವಿವರಗಳನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿತ್ತು.

supreme court 1

ಈ ತೀರ್ಪಿನ ಬಳಿಕ, ಈ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ಅಧ್ಯಕ್ಷ ಆದೀಶ್ ಸಿ. ಅಗರವಾಲ್, ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅಲ್ಲದೇ, ಸಿಜೆಐ ಅವರಿಗೂ ಪತ್ರವನ್ನು ಕಳುಹಿಸಿದ್ದರು.

ಈ ಪತ್ರದಲ್ಲಿ, ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಾರ್ಪೊರೇಟ್ ಸಂಸ್ಥೆಗಳು, ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸುವುದರಿಂದ ಅವರು ಬಲಿಪಶುಗಳಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು.

“ದೇಣಿಗೆ ನೀಡಿದವರ ಹೆಸರು ಮತ್ತು ಅವರು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಮೊತ್ತವನ್ನು ಬಹಿರಂಗಪಡಿಸಿದರೆ, ಅವರಿಂದ ಕಡಿಮೆ ದೇಣಿಗೆ ಪಡೆದ ಪಕ್ಷಗಳು ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ದೇಣಿಗೆ ಪಡೆಯುವಾಗ ಹೆಸರು ಬಹಿರಂಗಪಡಿಸುವುದಿಲ್ಲ ಎಂಬ ಮಾತು ಕೊಡಲಾಗಿತ್ತು. ಹೆಸರು ಬಹಿರಂಗಪಡಿಸಿದರೆ ವಚನ ಭಂಗ ಮಾಡಿದಂತೆ ಆಗುತ್ತದೆ” ಎಂದಿದ್ದರು.

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ | ಯಾವುದನ್ನೂ ಮುಚ್ಚಿಡದೆ ಎಲ್ಲ ಮಾಹಿತಿ ಬಹಿರಂಗಗೊಳಿಸಿ: SBIಗೆ ಸುಪ್ರೀಂ ಕೋರ್ಟ್‌ ತಪರಾಕಿ

ಇಡೀ ವಾದ ಪ್ರತಿವಾದ ಪ್ರಕ್ರಿಯೆಯನ್ನು ಮತ್ತೊಮ್ಮೆ ಅಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು. ಹಾಗಾದಲ್ಲಿ ‘ದೇಶದ ಸಂಸತ್ತು, ರಾಜಕೀಯ ಪಕ್ಷಗಳು, ಕಾರ್ಪೊರೇಟ್ ಸಂಸ್ಥೆಗಳು ಮತ್ತು ಸಾಮಾನ್ಯ ಪ್ರಜೆಗಳಿಗೆ’ ಪರಿಪೂರ್ಣ ನ್ಯಾಯ ದೊರೆತಂತೆ ಆಗಲಿದೆ ಎಂದು ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...