ಯೋಗಿಯನ್ನು ಹಾಡಿ ಹೊಗಳಿದ ಮೇಘವಾಲ್; ಈ ಬಗ್ಗೆ ನ.24ರ ನಂತರ ಮಾತಾಡುತ್ತೇನೆ ಎಂದ ಸಿಜೆಐ

Date:

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಶನಿವಾರ ಉತ್ತರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಅಲ್ಲಿ ಮಾತನಾಡುತ್ತಾ, “ಯೋಗಿ ಅವರು ಪ್ರಭಾವಶಾಲಿ. ಪ್ರಯಾಗ್‌ರಾಜ್ ಭೂಮಿ ಶಕ್ತಿಶಾಲಿ ಜನರಿಗೆ ಸೇರಿದೆ” ಎಂದಿದ್ದಾರೆ. ಹಾಗೆಯೇ ಈ ಬಗ್ಗೆ ನವೆಂಬರ್‌ 24ರ ನಂತರ ಮಾತಾಡುತ್ತೇನೆ ಎಂದು ಹೇಳಿ ಕುತೂಹಲ ಹುಟ್ಟಿಸಿದ್ದಾರೆ.

- Advertisement -

ನ್ಯಾಯಮೂರ್ತಿ ಗವಾಯಿ ಅವರು ಶನಿವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹೊಸ ವಕೀಲರ ಕೊಠಡಿಗಳು ಮತ್ತು ಬಹು ಹಂತದ ಪಾರ್ಕಿಂಗ್ ಸೌಲಭ್ಯವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ (ಪ್ರಭಾರ) ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಮತ್ತು ಇತರರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮುಂದಿನ ನೂತನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗವಾಯಿ: ಸಿಜೆಐ ಖನ್ನಾ ಶಿಫಾರಸ್ಸು

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು, “ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಿಎಂ ಯೋಗಿ ಅವರು ದೇಶದ ಅತ್ಯಂತ ಶಕ್ತಿಶಾಲಿ ಮತ್ತು ಕಠಿಣ ಪರಿಶ್ರಮಿ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಹಾಗಾಗಿ ನಾನು ಇದರ ಬಗ್ಗೆ ಮಾತನಾಡಲು ಬಯಸುತ್ತೇನೆ. ಯೋಗಿ ಅವರು ಪ್ರಭಾವಿಗಳು. ಪ್ರಯಾಗ್‌ರಾಜ್ ಭೂಮಿ ಶಕ್ತಿಶಾಲಿ ಜನರಿಗೆ ಸೇರಿದೆ” ಎಂದು ಹೇಳಿದರು.

ಇನ್ನು, “ಇಂದು ಕೆಲವು ವಿಷಯಗಳನ್ನು ನಾನು ಹೇಳಲು ಬಯಸುವುದಿಲ್ಲ. ಆದರೆ ನವೆಂಬರ್ 24ರ ನಂತರ ನನ್ನ ಅಭಿಪ್ರಾಯಗಳನ್ನು ತಿಳಿಸುತ್ತೇನೆ” ಎಂದರು. ಸಿಜೆಐ ಈ ವರ್ಷ ನವೆಂಬರ್ 24ರಂದು ನಿವೃತ್ತರಾಗಲಿದ್ದಾರೆ.

ಈ ಕಾರ್ಯಕ್ರಮದಲ್ಲೇ ಡಾ. ಬಿ ಆರ್‌ ಅಂಬೇಡ್ಕರ್ ಅವರನ್ನು ಸಿಜೆಐ ನೆನೆದರು. “ಸದ್ಯ ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇದೆ. ಈ ಸಮಸ್ಯೆಯನ್ನು ನಾವು ಪರಿಹರಿಸದೆಯೇ ಪ್ರಜಾಪ್ರಭುತ್ವವನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಎಚ್ಚರಿಸಿದ್ದರು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...