ಹೈಕೋರ್ಟ್ ಕೊಲಿಜಿಯಂಗಿಂತ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೇಲಲ್ಲ: ಸಿಜೆಐ ಬಿ ಆರ್‌ ಗವಾಯಿ

Date:

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಕೊಲಿಜಿಯಂ – ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ಶನಿವಾರ ಅಭಿಪ್ರಾಯಪಟ್ಟರು.

- Advertisement -

ಸುಪ್ರೀಂ ಕೋರ್ಟ್ ಬಾರ್‌ ಅಸೋಸಿಯೇಷನ್‌ (ಎಸ್‌ಸಿಬಿಎ) 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಸಿಬಿಎ ಅಧ್ಯಕ್ಷ ವಿಕಾಸ್‌ ಸಿಂಗ್‌ ಅವರು, ‘ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡುವ ವಕೀಲರನ್ನೂ ಪರಿಗಣಿಸಿ’ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆಗ ಸಿಜೆಐ ಗವಾಯಿ ಅವರು, ‘ನ್ಯಾಯಮೂರ್ತಿಗಳ ನೇಮಕಕ್ಕೆ ನಿರ್ದಿಷ್ಟ ಹೆಸರು ಶಿಫಾರಸು ಮಾಡುವಂತೆ ಹೈಕೋರ್ಟ್‌ ಕೊಲಿಜಿಯಂಗೆ, ಸುಪ್ರೀಂ ಕೋರ್ಟ್ ಕೊಲಿಜಿಯಂ ಆದೇಶ ಮಾಡುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಹೈಕೋರ್ಟ್‌ ಕೊಲಿಜಿಯಂ ಮೊದಲಿಗೆ ನಿರ್ಧಾರ ಕೈಗೊಳ್ಳುತ್ತದೆ. ಹೈಕೋರ್ಟ್‌ ಕೊಲಿಜಿಯಂಗೆ ನಾವು ಕೆಲವು ಹೆಸರುಗಳನ್ನು ಶಿಫಾರಸು ಮಾಡುತ್ತೇವೆ ಮತ್ತು ಅವುಗಳನ್ನು ಪರಿಗಣಿಸುವಂತೆ ಮನವಿ ಮಾಡುತ್ತೇವೆ. ಅಂತಿಮವಾಗಿ ಹೈಕೋರ್ಟ್‌ ಕೊಲಿಜಿಯಂ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಸುಪ್ರೀಂ ಕೋರ್ಟ್‌ಗೆ ಕಳುಹಿಸುತ್ತದೆ’ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

ಸಂಜೀವ್‌ ಖನ್ನಾ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆಗಿದ್ದಾಗ, ಅಭ್ಯರ್ಥಿಗಳೊಂದಿಗೆ ಸಂದರ್ಶನ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ಅಭ್ಯರ್ಥಿಗಳೊಂದಿಗೆ 10 ನಿಮಿಷ, 15 ನಿಮಿಷ ಅಥವಾ ಅರ್ಧ ತಾಸು ಸಂವಾದ ನಡೆಸಿದಾಗ ಸಮಾಜದ ಸೇವೆ ಸಲ್ಲಿಸಲು ಅವರು ಯೋಗ್ಯರೇ ಎಂಬುದನ್ನು ಪರಿಶೀಲಿಸಬಹುದು ಎಂದು ಅವರು ಹೇಳಿದರು.

ಸ್ವಾತಂತ್ರ್ಯೋತ್ಸವನ್ನು ಉಲ್ಲೇಖಿಸಿ, ಸ್ವಾತಂತ್ರ್ಯವು ರಾಜಕೀಯ ಚಳವಳಿ ಅಷ್ಟೇ ಅಲ್ಲ, ನೈತಿಕ ಮತ್ತು ಕಾನೂನಾತ್ಮಕ ಹೋರಾಟವೂ ಆಗಿತ್ತು. ಅಸಂಖ್ಯಾತ ವಕೀಲರು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ದೇಶದ ಇತಿಹಾಸವು ತಿಳಿಸಿಕೊಡುತ್ತದೆ ಎಂದು ಹೇಳಿದರು.

ರವೀಂದ್ರನಾಥ ಟ್ಯಾಗೋರ್‌, ಮಹಾತ್ಮ ಗಾಂಧಿ, ಬಿ ಆರ್‌ ಅಂಬೇಡ್ಕರ್‌, ಮೌಲಾನಾ ಅಬುಲ್ ಕಲಾಮ್ ಆಜಾದ್‌ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರನ್ನು ಅವರು ಸ್ಮರಿಸಿದರು. ದುರ್ಬಲರ ಸ್ವಾತಂತ್ರ್ಯವನ್ನು ವಿಸ್ತರಿಸುವ ಮತ್ತು ಅವರ ಹಕ್ಕುಗಳನ್ನು ರಕ್ಷಿಸುವ ಮೂಲಕ ನಾವು ಕಾನೂನನ್ನು ವ್ಯಾಖ್ಯಾನಿಸಿ, ಬಲಪಡಿಸಬೇಕಾಗಿದೆ. ಆಗ ಮಾತ್ರ ಟ್ಯಾಗೋರ್‌ ಅವರ ಪ್ರಾರ್ಥನೆ, ಮಹಾತ್ಮ ಗಾಂಧಿ ಅವರ ಸ್ವರಾಜ್ಯ, ಅಂಬೇಡ್ಕರ್‌ ಅವರ ಪ್ರಜಾಪ್ರಭುತ್ವ ಚಿಂತನೆ ಫಲಿಸುತ್ತದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...