ಪತ್ರಕರ್ತ ಸೌರವ್ ದಾಸ್ ಮುಖ್ಯ ವಕ್ತಾರ; ಇನ್ನಿಬ್ಬರು ವಕ್ತಾರರನ್ನು ನೇಮಿಸಿದ ಸಿಜೆಪಿ

Date:

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕೆಲವು ದಿನಗಳ ಮೊದಲು, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಬುಧವಾರ ತನ್ನ ಮುಖ್ಯ ವಕ್ತಾರರು ಮತ್ತು ವಕ್ತಾರರನ್ನು ನೇಮಿಸಿದೆ.

- Advertisement -

ಈ ಬಗ್ಗೆ ಅಭಿಜೀತ್ ದೀಪ್ಕೆ ಸ್ಥಾಪಿಸಿದ ಸಿಜೆಪಿ, ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದೆ. ತನಿಖಾ ಪತ್ರಕರ್ತ ಸೌರವ್ ದಾಸ್ ತನ್ನ ಮುಖ್ಯ ವಕ್ತಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜಕೀಯ ಸಂಶೋಧಕ, ಚಲನಚಿತ್ರ ನಿರ್ಮಾಪಕ ವಿಜೇತಾ ದಹಿಯಾ ಮತ್ತು ಮಾಜಿ ನಿರ್ವಹಣಾ ಸಲಹೆಗಾರ ಅಶುತೋಷ್ ರಂಕಾ ಅವರನ್ನು ವಕ್ತಾರರನ್ನಾಗಿ ನೇಮಿಸುವುದಾಗಿ ಸಿಜೆಪಿ ಪೋಸ್ಟ್‌ನಲ್ಲಿ ತಿಳಿಸಿದೆ. “ದೇಶದ ರಾಜಕೀಯ ಸಂವಾದವನ್ನು ಬದಲಾಯಿಸಲು ಸಿಜೆಪಿ ಬದ್ಧವಾಗಿದೆ. ಇದನ್ನು ಹೊಸ ಪೀಳಿಗೆಯ ನಾಯಕರು ಮುನ್ನಡೆಸುತ್ತಾರೆ” ಎಂದೂ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ನೀಟ್ ಸೋರಿಕೆ: ಜೂ.6ರಂದು ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಭಾಗಿ

ಇತ್ತೀಚಿನ ವಾರಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿರುವ ವಿಡಂಬನಾತ್ಮಕ ರಾಜಕೀಯ ಸಂಘಟನೆ ಕಾಕ್ರೋಚ್ ಜನತಾ ಪಾರ್ಟಿಯು ಜೂನ್ 6 ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ನಡೆಸುವುದಾಗಿ ಘೋಷಿಸಿದೆ. ಶಿಕ್ಷಣ ವ್ಯವಸ್ಥೆಯ ಕಾರ್ಯವೈಖರಿ ಮತ್ತು ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿರುವ ನಡುವೆ ಶಿಕ್ಷಣ ಸಚಿವರ ರಾಜೀನಾಮೆಗೆ ಸಿಜೆಪಿ ಒತ್ತಾಯಿಸಿದೆ. ಈ ನಡುವೆ ಈಗ ಮುಖ್ಯ ವಕ್ತಾರರು ಮತ್ತು ವಕ್ತಾರರ ಘೋಷಣೆ ಮಾಡಲಾಗಿದೆ.

ಸೌರವ್ ದಾಸ್ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಹಲವಾರು ವರ್ಷಗಳ ಕಾಲ ನಿರ್ಣಾಯಕ ಕಾನೂನು, ನ್ಯಾಯಾಂಗ ಮತ್ತು ಸಾಮಾಜಿಕ ವಿಷಯಗಳ ಕುರಿತು ತನಿಖೆ, ವಿಶ್ಲೇಷಣೆ ಮತ್ತು ವರದಿ ಮಾಡಿದ್ದಾರೆ. 2025ರ ನವೆಂಬರ್‌ನಲ್ಲಿ ಇಂಡಿಯಾ ಗೇಟ್‌ನಲ್ಲಿ ನಡೆದ ಮಾಲಿನ್ಯ ವಿರೋಧಿ ಪ್ರತಿಭಟನೆಗಳನ್ನು ಮುನ್ನಡೆಸಿದ ವ್ಯಕ್ತಿಗಳಲ್ಲಿ ದಾಸ್ ಕೂಡ ಒಬ್ಬರು.

ಇನ್ನು ತಮ್ಮನ್ನು ಮುಖ್ಯ ವಕ್ತಾರರನ್ನಾಗಿ ನೇಮಿಸಿರುವ ಬಗ್ಗೆ ದಾಸ್ ಸಂತಸ ವ್ಯಕ್ತಪಡಿಸಿದ್ದಾರೆ. “ಕಾಕ್ರೋಚ್ ಜನತಾ ಪಾರ್ಟಿಯ ಮುಖ್ಯ ವಕ್ತಾರನಾಗುವುದು ನನಗೆ ತುಂಬಾ ಸಂತೋಷ ತಂದಿದೆ. ದೇಶದ ಯುವಕರು ಭವಿಷ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅವರನ್ನು ಅಪಹಾಸ್ಯ ಮಾಡಲಾಗುತ್ತಿದೆ. ತುಚ್ಛವಾಗಿ ಕಾಣಲಾಗುತ್ತಿದೆ. ಇವೆಲ್ಲವನ್ನು ಬದಲಾಯಿಸುವ ಕ್ಷಣ ಬಂದಿದೆ. ಈಗ ನಾವು ಮಾತನಾಡುತ್ತೇವೆ. ದೇಶದ ಭವಿಷ್ಯವನ್ನು ನಾವೇ ಬರೆಯುತ್ತೇವೇ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಜೂನ್ 6ರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಸಂಜೆ 5:15ಕ್ಕೆ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಿಜೆಪಿ ಪತ್ರಿಕಾಗೋಷ್ಠಿ ನಡೆಸಲಿದೆ. ಈ ವೇಳೆ ಪ್ರತಿಭಟನೆಯ ಕುರಿತು ವಕ್ತಾರರಾದ ಸೌರವ್ ದಾಸ್, ವಿಜೇತಾ ದಹಿಯಾ, ಅಶುತೋಷ್ ರಂಕಾ ಮಾತನಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...