ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಜಂತರ್‌ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆರಂಭ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಆರಂಭಿಸಿದೆ. ಸಾವಿರಾರು ಸಿಜೆಪಿ ಬೆಂಬಲಿಗರು ಜಂತರ್‌ ಮಂತರ್‌ನಲ್ಲಿ ಸೇರಿದ್ದು, ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ವಿಭಿನ್ನ ಪೋಸ್ಟರ್‌ಗಳನ್ನು ಹಿಡಿದಿದ್ದಾರೆ. ಘೋಷಣೆಗಳನ್ನು ಕೂಗಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಸಿಜೆಪಿ ಪೋಸ್ಟ್ ಮಾಡಿದೆ. “ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಲೇಬೇಕು. ಶಿಕ್ಷಣ ಸಚಿವರನ್ನು ನಾವು ಮತ ಹಾಕಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿದ್ದೇವೆ. ನಮ್ಮ ತೆರಿಗೆಯಿಂದ ಅವರಿಗೆ ಸಂಬಳ ಸಿಗುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಭಾರತಕ್ಕೆ ಬಂದಿಳಿದ ಅಭಿಜೀತ್ ದೀಪ್ಕೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ

“ಅವರ ಅಧಿಕಾರಾವಧಿಯಲ್ಲಿ ಲಕ್ಷಾಂತರ ಯುವಕರ ಭವಿಷ್ಯ ಕತ್ತಲೆಯಲ್ಲಿ ತುಂಬಿದೆ. ಕಾಕ್ರೋಚ್‌ಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ” ಎಂದು ಕಾಕ್ರೋಚ್ ಇಸ್ ಬ್ಯಾಕ್ ಎಕ್ಸ್‌ ಖಾತೆಯಿಂದ ಪೋಸ್ಟ್ ಮಾಡಲಾಗಿದೆ.

ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಯೊಬ್ಬರು ಮಾತನಾಡಿದ್ದು, “ಪೋಷಕರ ಮಾತು ಮೀರಿ ನಾನು ಇಲ್ಲಿ ಬಂದು ಸೇರಿದ್ದೇನೆ. ಈಗ ನಾನು ಭಾವುಕಳಾಗಿದ್ದೇನೆ. ಯಾಕೆಂದರೆ ಶಿಕ್ಷಣ ನನ್ನ ಹಕ್ಕು ಎಂದು ನನ್ನ ಪೋಷಕರಿಗೆ ನಾನು ಹೇಳಿದೆ. ಇದು ನಮ್ಮ ಮೂಲಭೂತ ಹಕ್ಕು” ಎಂದು ತಿಳಿಸಿದ್ದಾರೆ.

ಇನ್ನು ಸಿಜೆಪಿ ಪ್ರತಿಭಟನೆಯಲ್ಲಿ ಸೇರಿದವರು ವಿಡಿಯೋ, ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕಾಕ್ರೋಚ್ ಇಸ್ ಬ್ಯಾಕ್ ಖಾತೆಯನ್ನು ಟ್ಯಾಗ್ ಮಾಡುವಂತೆಯೂ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಲಾಗಿದೆ. “ಕಾಕ್ರೋಚ್ ಪಾರ್ಟಿ ಜಿಂದಾಬಾದ್! ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಜಂತರ್ ಮಂತರ್‌ಗೆ ಆಗಮಿಸಲು ಪ್ರಾರಂಭಿಸಿದ್ದಾರೆ. ನೀವೂ ಜಂತರ್ ಮಂತರ್‌ನಲ್ಲಿದ್ದೀರಾ? #cjpprotest ಎಂದು ಹ್ಯಾಷ್‌ಟ್ಯಾಗ್ ಹಾಕಿ ನಿಮ್ಮ ಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಂಡು ನಮ್ಮನ್ನು ಟ್ಯಾಗ್ ಮಾಡಿ” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...