ವಾಂಗ್ಚುಕ್ ಉಪವಾಸ ಬೆಂಬಲಿಸಿ ಜುಲೈ 20ಕ್ಕೆ ಸಂಸತ್ ಚಲೋ: CJP ಕರೆ

Date:

ಸೋನಂ ವಾಂಗ್ಚುಕ್ ಅವರನ್ನು ಬೆಂಬಲಿಸಲು ಮತ್ತು ಅವರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು, CJP (ಕಾಕ್ರೋಚ್ ಜನತಾ ಪಾರ್ಟಿ)ಯು ಜುಲೈ 20ರಂದು ಸಂಸತ್ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. “ವಾಂಗ್ಚುಕ್ ಅವರನ್ನು ಉಳಿಸಲು ಇದು ನಮ್ಮ ಕೊನೆಯ ಪ್ರಯತ್ನ” ಎಂದು CJP ವಕ್ತಾರ ಸೌರವ್ ದಾಸ್ ಹೇಳಿದ್ದಾರೆ.

- Advertisement -

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಮತ್ತು ನೀಟ್ (NEET) ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರು ವಾರ ಪೂರೈಸಿದೆ. ಈ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಯ ರಾಷ್ಟ್ರೀಯ ವಕ್ತಾರ ಸೌರವ್ ದಾಸ್ ದೇಶದ ನಾಗರಿಕರಿಗೆ ಬರೆದಿರುವ ಬಹಿರಂಗ ಪತ್ರವೊಂದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

“ನಾವು ಈಗಲೂ ಎದ್ದು ನಿಲ್ಲದಿದ್ದರೆ, ಸೋನಂ ವಾಂಗ್ಚುಕ್ ಅವರು ಭಾರತಕ್ಕಾಗಿ ಏನು ಮಾಡಿದರು ಎಂದು ಇತಿಹಾಸ ಕೇಳುವುದಿಲ್ಲ; ಬದಲಿಗೆ ಸೋನಂ ವಾಂಗ್ಚುಕ್ ಅವರಿಗೆ ಅಗತ್ಯವಿದ್ದಾಗ ಭಾರತ ಏನು ಮಾಡಿತು ಎಂದು ಇತಿಹಾಸ ಕೇಳುತ್ತದೆ,” ಎಂದು ಸೌರವ್ ದಾಸ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಂಗ್ಚುಕ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಾಸ್, “ಮ್ಯಾಗ್ಸೆಸೆ ಪ್ರಶಸ್ತಿಯಂತಹ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾದ ಇವರು, ಆರಾಮದಾಯಕ ಜೀವನವನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು. ಆದರೆ, ಇಂದಿನ ಯುವಕರು ಮತ್ತು ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಭ್ರಷ್ಟ ಶಿಕ್ಷಣ ವ್ಯವಸ್ಥೆಯಿಂದ ಬಲಿಯಾದ ವಿದ್ಯಾರ್ಥಿಗಳಿಗಾಗಿ ಅವರು ಉಪವಾಸ ಕುಳಿತಿದ್ದಾರೆ,” ಎಂದಿದ್ದಾರೆ.

ಇದನ್ನೂ ಓದಿ: ಬದ್ರಿನಾಥದಲ್ಲೂ ದೇಣಿಗೆ ಲೂಟಿ: ದೇವಸ್ಥಾನದ ಉದ್ಯೋಗಿ ಬಂಧನ

ಸಮಾಜದಲ್ಲಿ ಮೌನ ಮತ್ತು ನಿರ್ಲಕ್ಷ್ಯವನ್ನು ಸಹಜವಾಗಿಸಿಕೊಳ್ಳುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ದಾಸ್, “ನಾವು ಎಲ್ಲಿಯೋ ದಾರಿ ತಪ್ಪಿದ್ದೇವೆ. ಸಿಟ್ಟು ಬರಬೇಕಾದ ಕಡೆ ಮೌನ ವಹಿಸುತ್ತಿದ್ದೇವೆ, ಕರುಣೆ ಇರಬೇಕಾದ ಕಡೆ ನಿರ್ಲಕ್ಷ್ಯ ತೋರುತ್ತಿದ್ದೇವೆ. ಎಲ್ಲವನ್ನೂ ಸುಮ್ಮನೆ ನೋಡುವ ಪ್ರೇಕ್ಷಕರಾಗಿದ್ದೇವೆ. ಯಾರೋ ಒಬ್ಬರು ಮಾತನಾಡುತ್ತಾರೆ, ಯಾರೋ ಒಬ್ಬರು ಕ್ರಮ ಕೈಗೊಳ್ಳುತ್ತಾರೆ ಎಂದು ನಾವೇ ಸಮಾಧಾನ ಮಾಡಿಕೊಳ್ಳುತ್ತಿದ್ದೇವೆ,” ಎಂದು ಕಿಡಿಕಾರಿದ್ದಾರೆ.

ವಾಂಗ್ಚುಕ್ ಅವರಂತಹ ವ್ಯಕ್ತಿತ್ವದ ವ್ಯಕ್ತಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಕಿವಿಗೆ ಹಾಕಲು ಉಪವಾಸ ಸತ್ಯಾಗ್ರಹ ನಡೆಸಬೇಕಾಗಿರುವುದು ದುರಂತ ಎಂದು ಅವರು ವಿಷಾದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...