ಇಂದು ಸರ್ಕಾರ–ಸಿಜೆಪಿ ಮಾತುಕತೆ; ಕಾಕ್ರೋಚ್‌ಗಳ ಬೇಡಿಕೆಗೆ ಇಂದಾದರೂ ಒಪ್ಪುವುದೇ ಕೇಂದ್ರ?

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳ ವಿರುದ್ಧ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ಗಳ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವೆ ಇಂದು (ಶುಕ್ರವಾರ) ಸಂವಿಧಾನ ಕ್ಲಬ್‌ನಲ್ಲಿ ಮಹತ್ವದ ಮಾತುಕತೆ ನಡೆಯಲಿದೆ. “ಸರ್ಕಾರದೊಂದಿಗೆ ಮಾತುಕತೆ‌ ನಡೆಸುತ್ತೇವೆ. ನಮ್ಮ ಪ್ರಮುಖ ಬೇಡಿಕೆಗಳಿಂದ ಯಾವುದೇ‌ಕಾರಣಕ್ಕೂ ಹಿಂದೆ ಸರಿಯುವುದಿಲ್ಲ” ಎಂದು ಸಿಜೆಪಿ ಸ್ಪಷ್ಟಪಡಿಸಿದೆ.

- Advertisement -

ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸುವುದನ್ನು ಮುಂದುವರಿಸಲಾಗುವುದು ಎಂದು ಸಿಜೆಪಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, “ಸರ್ಕಾರದಿಂದ ಮಾತುಕತೆಗೆ ಆಹ್ವಾನ ಬಂದಿದೆ. ನಾವು ಕೇಳಿದಂತೆ ತಟಸ್ಥ ಸ್ಥಳದಲ್ಲಿ ಸಭೆ ನಡೆಸಲು ಸರ್ಕಾರ ಒಪ್ಪಿಕೊಂಡಿರುವುದು ಸಂತೋಷದ ಸಂಗತಿ. ಈ ಉದ್ದೇಶಕ್ಕಾಗಿ ಸಂವಿಧಾನ ಕ್ಲಬ್ ಆಯ್ಕೆ ಮಾಡಲಾಗಿದೆ,” ಎಂದು ಹೇಳಿದ್ದಾರೆ.

ಮತ್ತೊಬ್ಬ ವಕ್ತಾರೆ ವೈಷ್ಣವಿ ಗೌರ್ ಮಾತನಾಡಿ, “ಮೊದಲ ದಿನದಿಂದಲೂ ನಾವು ಮುಂದಿಟ್ಟಿರುವ ಬೇಡಿಕೆಗಳನ್ನೇ ಸಭೆಯಲ್ಲಿ ಪುನರುಚ್ಚರಿಸಲಾಗುವುದು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಿರಪರಾಧಿಗಳ ವಿರುದ್ಧ ದಾಖಲಿಸಿರುವ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರು ಮೆದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಾಂಗ್ಚುಕ್, “ಹಲವು ಷರತ್ತುಗಳ ಕುರಿತು ಸುದೀರ್ಘ ಮಾತುಕತೆ ನಡೆದ ನಂತರ ಮತ್ತು ದೇಶದಲ್ಲಿ ಹಿಂಸಾಚಾರ ಉಂಟಾಗುವ ಸಾಧ್ಯತೆಯನ್ನು ಮನಗಂಡು ಉಪವಾಸವನ್ನು ಅಂತ್ಯಗೊಳಿಸಿದ್ದೇನೆ. ಮಾತುಕತೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಷರತ್ತುಗಳನ್ನು ಶೀಘ್ರದಲ್ಲೇ ಪ್ರತ್ಯೇಕ ವಿಡಿಯೋ ಮೂಲಕ ವಿವರಿಸುತ್ತೇನೆ” ಎಂದು ತಿಳಿಸಿದ್ದಾರೆ.

“ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ನಮ್ಮನ್ನು ಭೇಟಿಯಾಗಿ ಅಥವಾ ಪತ್ರ ಬರೆದು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು. ಎಂದು ಅವರು ಉಲ್ಲೇಖಿಸಿದ್ದಾರೆ.

ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದ ಬಳಿಕ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ, “ಸೋನಮ್ ವಾಂಗ್ಚುಕ್ ಅವರ ಜೀವ ಈ ದೇಶಕ್ಕೆ ಅಮೂಲ್ಯ. ತಮ್ಮ ಜೀವವನ್ನೇ ಪಣಕ್ಕಿಟ್ಟು ಇಡೀ ರಾಷ್ಟ್ರದ ಮನಸ್ಸನ್ನು ಎಚ್ಚರಗೊಳಿಸುವ ಕೆಲಸ ಮಾಡಿದ್ದಾರೆ. ಅವರು ಉಪವಾಸ ಅಂತ್ಯಗೊಳಿಸಿರುವುದು ನಮಗೆ ಸಮಾಧಾನ ತಂದಿದೆ. ಅವರ ಧೈರ್ಯ ಮತ್ತು ತ್ಯಾಗಕ್ಕೆ ನಾವು ಕೃತಜ್ಞರಾಗಿದ್ದೇವೆ,” ಎಂದು ಹೇಳಿದ್ದಾರೆ.

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿಯ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ದಿಪ್ಕೆ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ತಮ್ಮ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...