ತಲೆಬುರುಡೆ ಒಡೆದರೂ ಜೈಲಿಗೆ ಹೋಗಿಲ್ಲ ಎಂದ ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಸಿಜೆಪಿ ಆಗ್ರಹ; ದೆಹಲಿ ಪೊಲೀಸ್ ಠಾಣೆಗೆ ಮಾರ್ಚ್

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿ ನಾಯಕಿಯೊಬ್ಬರ ತಂದೆಯ ಮೇಲೆ ಹಲ್ಲೆ ನಡೆಸಿ ಅವರ ತಲೆಬುರುಡೆಯನ್ನು ಒಡೆದರೂ ನನಗೆ ಜೈಲು ಆಗಲಿಲ್ಲ. ಬಿಜೆಪಿ ನಾಯಕರ ಆಶೀರ್ವಾದ ನನ್ನ ಮೇಲಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡ ಹಿಂದುತ್ವ ಕಾರ್ಯಕರ್ತ ಸ್ವತಂತ್ರ ಭಾರದ್ವಾಜ್‌ನನ್ನು ತಕ್ಷಣವೇ ಬಂಧಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಗ್ರಹಿಸಿದೆ. ಸಿಜೆಪಿ ಕಾರ್ಯಕರ್ತರು, ಬೆಂಬಲಿಗರು ಶುಕ್ರವಾರ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಬೃಹತ್ ಮಾರ್ಚ್ ನಡೆಸಿದ್ದಾರೆ.

- Advertisement -

ಕಳೆದ ಜುಲೈ 20 ರಂದು ಜಂತರ್ ಮಂತರ್‌ನಲ್ಲಿ ಸಿಜೆಪಿ ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಿಶು ಆಜಾದ್ ಎಂಬ ವಿದ್ಯಾರ್ಥಿ ನಾಯಕಿಯ ತಂದೆ ಸಂಜಯ್ ಕುಮಾರ್ ಅವರ ಮೇಲೆ ಹಲ್ಲೆ ನಡೆದಿತ್ತು. ಈ ದಾಳಿಯಲ್ಲಿ ಸಂಜಯ್ ಕುಮಾರ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನೂ ಓದಿ: ಒಬ್ಬನ ತಲೆಬುರುಡೆ ಒಡೆದರೂ ಜೈಲಿಗೆ ಹೋಗಿಲ್ಲ, ಬಿಜೆಪಿ ‘ಆಶೀರ್ವಾದ’ದ ಬಲ ಎಂದ ಹಿಂದುತ್ವ ಕಾರ್ಯಕರ್ತ; ವಿಡಿಯೋ ವೈರಲ್

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಂದರ್ಶನವೊಂದರ ವಿಡಿಯೋ ತುಣುಕು ವೈರಲ್ ಆಗಿದೆ. ಅದರಲ್ಲಿ ಸ್ವತಂತ್ರ ಭಾರದ್ವಾಜ್ ಎಂಬ ಹಿಂದುತ್ವ ಕಾರ್ಯಕರ್ತ, “ನಾನೇ ಆತನ ತಲೆಯನ್ನು ಒಡೆದು ಹಾಕಿದೆ. 60 ಹೊಳಿಗೆ ಮಾಡಬೇಕಾಯಿತು. ಕೊಲೆ ಯತ್ನ (ಸೆಕ್ಷನ್ 307) ಪ್ರಕರಣ ದಾಖಲಾಗಬೇಕಿದ್ದರೂ ನಾನು ಜೈಲಿಗೆ ಹೋಗಿಲ್ಲ. ಬಿಜೆಪಿ ಬೆಂಬಲದಿಂದಾಗಿ ಹೊರಗೇ ಓಡಾಡುತ್ತಿದ್ದೇನೆ. ” ಎಂದು ಬಹಿರಂಗವಾಗಿ ಹೇಳಿಕೊಂಡಿದ್ದನು.

“ನನಗೆ ಹನುಮಂತ ದೇವರ ಆಶೀರ್ವಾದವಿದೆ. ಅಲ್ಲದೆ, ಕಪಿಲ್ ಮಿಶ್ರಾ ನನ್ನ ಅಣ್ಣನಂತೆ. ಕಪಿಲ್ ಮಿಶ್ರಾ ಅವರಿಂದ ಕರೆ ಬಂದ ಕೂಡಲೇ ನನ್ನನ್ನು ಬಿಡುಗಡೆ ಮಾಡಲಾಯಿತು. ಕಪಿಲ್ ಮಿಶ್ರಾ ನನ್ನ ಅಣ್ಣ, ಚಿರಾಗ್ ಪಾಸ್ವಾನ್ ನನ್ನ ಅಣ್ಣ. ನಿಮಗೆ ಯಾವ ನಾಯಕ ಗೊತ್ತು ಹೇಳಿ? ನಿಮಗೆ ಮೋದಿ ಜಿ ಗೊತ್ತಾ? ಮೋದಿ ಜಿ ಕೂಡಾ ನನ್ನ ಅಣ್ಣ. ನನಗೆ ಎಲ್ಲರ ಬೆಂಬಲವಿದೆ,” ಎಂದು ಭಾರದ್ವಾಜ್ ಹೇಳಿಕೊಂಡಿದ್ದಾನೆ. ಈ ವಿಡಿಯೋಯೊ ಹೊರಬಿದ್ದ ಬೆನ್ನಲ್ಲೇ ಸಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಜೆಪಿ ವಕ್ತಾರ ಸೌರವ್ ದಾಸ್ ಮತ್ತು ಸಹ-ಸಂಚಾಲಕ ಅಶುತೋಷ್ ರಂಕಾ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಆರೋಪಿ ಸ್ವತಂತ್ರ ಭಾರದ್ವಾಜ್ ವಿರುದ್ಧ ಕೊಲೆ ಯತ್ನ (Section 307) ಹಾಗೂ ದಲಿತ ಕುಟುಂಬದ ಮೇಲೆ ನಡೆದ ದಾಳಿಯಾದ್ದರಿಂದ ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಕಾಯ್ದೆಯಡಿಯಲ್ಲಿ ಹೊಸದಾಗಿ ಗಂಭೀರ ಪ್ರಕರಣ ದಾಖಲಿಸಿ, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ದೆಹಲಿ ಪೊಲೀಸರನ್ನು ಒತ್ತಾಯಿಸಲಾಗಿದೆ. ದೆಹಲಿ ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ನಾಯಕರು ಆರೋಪಿಸಿದ್ದಾರೆ.

ಈ ನಡುವೆ ದೆಹಲಿ ಪೊಲೀಸರು ಹಲ್ಲೆ ತೀವ್ರವಾಗಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಗಲಾಟೆಯ ಸಂದರ್ಭದಲ್ಲಿ ಸಂಜಯ್ ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ದೂರಿನನ್ವಯ ಈಗಾಗಲೇ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಠಾಣೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...