ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾಂತುಕ್ ಪಿಂಪ್ರಿ ಗ್ರಾಮದಲ್ಲಿ ವಾಸವಾಗಿದ್ದ 85 ವರ್ಷದ ಸಾವಿತ್ರಿಬಾಯಿ ದೀಪ್ಕೆ ಶನಿವಾರ ಕೊನೆಯುಸಿರೆಳೆದಿದ್ದಾರೆ.

- Advertisement -

ಸಾವಿತ್ರಿಬಾಯಿ ದೀಪ್ಕೆ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳು ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ದೆಹಲಿಯಲ್ಲಿ ನಿಗದಿಯಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಿಮಾನದಲ್ಲೇ ವಶಕ್ಕೆ ಪಡೆದಿದ್ದಾರೆ. ಅವರ ಬಂಧನವಾದ ಕೆಲವೇ ಗಂಟೆಗಳಲ್ಲಿ ಈ ದುಃಖಕರ ಘಟನೆ ಜರುಗಿದೆ.

ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಕುಟುಂಬದ ಸದಸ್ಯರು ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ದೀಪ್ಕೆ ಅವರು ಪೊಲೀಸ್‌ ವಶದಲ್ಲಿದ್ದು, ಅವರನ್ನು ಪೊಲೀಸರು ಯಾವಾಗ ಬಿಡುಗಡೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಆದ್ದರಿಂದ, ತಮ್ಮ ಅಜ್ಜಿಯ ಅಂತಿಮ ಸಂಸ್ಕಾರದಲ್ಲಿ ದೀಪ್ಕೆ ಭಾಗವಹಿಸಲು ಸಾಧ್ಯವಾಗುದೇ ಎಂಬ ಪ್ರಶ್ನೆ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...