‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ‘ಲೆಹರಾ ದೋ ತಿರಂಗಾ’ ತ್ರಿವರ್ಣ ಧ್ವಜ ಮೆರವಣಿಗೆ ಆರಂಭವಾಗುವ ಕೆಲವೇ ಸಮಯದ ಮೊದಲು ಈ ಬಂಧನ ನಡೆದಿದೆ.

- Advertisement -

ದೆಹಲಿಯ ಕನಾಟ್ ಪ್ಲೇಸ್ ವ್ಯಾಪ್ತಿಯಲ್ಲಿ ಬಿಎನ್‌ಎಸ್‌ಎಸ್ ವಿಭಾಗ 163 (ಹಳೆಯ 144) ಜಾರಿಯಲ್ಲಿದ್ದು, ಸಾರ್ವಜನಿಕ ಶಾಂತಿಗೆ ಭಂಗ ತರದಂತೆ ದೆಹಲಿ ಪೋಲೀಸ್ ಕಾಯ್ದೆಯಡಿ ದೀಪ್ಕೆ ಅವರಿಗೆ ನೋಟಿಸ್ ನೀಡಲಾಗಿತ್ತು. ಅದಾಗ್ಯೂ, ಪ್ರತಿಭಟನೆಗೆ ಹೊರಟಿದ್ದ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಿಜೆಪಿ ನಾಯಕರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ​ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಈ ವೇಳೆ ಸಿಜೆಪಿ ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಇತ್ತೀಚೆಗೆ ದೆಹಲಿ ಪೊಲೀಸರು ಬಂಧಿಸಿ ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿದ್ದರು. ಅನುಮತಿಯಿಲ್ಲದೆ ಅತಿಕ್ರಮಣ ಮಾಡಿದ್ದರೆಂಬ ಆರೋಪ, ಶಾಂತಿ ಬಾಂಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ 5 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಈ ಬಂಧನವನ್ನು ವಿರೋಧಿಸಿ ಮತ್ತು ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೇಶವ್ಯಾಪಿ ‘ಲೆಹರಾ ದೋ ತಿರಂಗಾ’ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದರು.

ಇದಕ್ಕೂ ಮೊದಲು, ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಿಜೆಪಿ ನಾಯಕರೊಂದಿಗೆ ಅಭಿಜೀತ್ ದೀಪ್ಕೆ ಅವರನ್ನೂ ಪೊಲೀಸರು ವಿಮಾನದ ಒಳಗಡೆಯಿಂದಲೇ ವಶಕ್ಕೆ ಪಡೆದಿದ್ದರು. ಆ ಸಮಯದಲ್ಲಿ ಒಂದು ವರ್ಷದವರೆಗೆ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವುದಿಲ್ಲ ಎಂಬ ‘ಶಾಂತಿ ಬಾಂಡ್’ಗೆ ಸಹಿ ಹಾಕಿಸಿಕೊಂಡು ಅವರನ್ನು ಬಿಡುಗಡೆ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ರಷ್ಯಾದಲ್ಲಿ 7 ತೀವ್ರತೆಯ ಭೂಕಂಪ; ಜಪಾನ್‌ನಲ್ಲಿ 9.9 ತೀವ್ರತೆಯ ತಪ್ಪು ಎಚ್ಚರಿಕೆ!

ರಷ್ಯಾದ ದೂರಪ್ರಾಚ್ಯದ ಕಮ್ಚಟ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.0 ತೀವ್ರತೆಯ ಭೂಕಂಪ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...