ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

Date:

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 2ರಂದು ನಡೆಸಲಿರುವ ಪ್ರತಿಭಟನೆಗೆ ಲಡಾಖ್‌ನ ಖ್ಯಾತ ಪರಿಸರ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಬೆಂಬಲ ಸೂಚಿಸಿದ್ದಾರೆ.

- Advertisement -

ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು CJP ಮುಂಬೈನಿಂದ ದೇಶವ್ಯಾಪಿ ಆರಂಭಿಸಲು ಉದ್ದೇಶಿಸಿರುವ ಪ್ರತಿಭಟನೆಗೆ ಬೆಂಬಲ ನೀಡಿದ ಅವರು, ತಾವು ಈ ಹೋರಾಟವನ್ನು “ಖಂಡಿತವಾಗಿಯೂ ಬೆಂಬಲಿಸುವುದಾಗಿ” ಹೇಳಿದ್ದಾರೆ. ಆದರೆ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಖುದ್ದಾಗಿ ಉಪಸ್ಥಿತರಿರಲು ಸಾಧ್ಯವಾಗದಿರಬಹುದು ಎಂದೂ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ಶಿಕ್ಷಣ ಸಚಿವರ ರಾಜೀನಾಮೆ ಪಡೆದ ‘ಕಾಕ್ರೋಚ್’ ಪಡೆಯಿಂದ ಚುನಾವಣಾ ಆಯೋಗಕ್ಕೆ ಎಚ್ಚರಿಕೆ; ತೀವ್ರ ಚಳವಳಿಗೆ ಸಿಜೆಪಿ ಸಜ್ಜು

ದೇಶದಲ್ಲಿ ಚುನಾವಣಾ ಪ್ರಕ್ರಿಯೆ ಮತ್ತು ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಡೆಯುವ ಯಾವುದೇ ಪ್ರಯತ್ನಗಳು ಬೆಂಬಲಕ್ಕೆ ಅರ್ಹವಾಗಿವೆ ಎಂದು ಸೋನಮ್ ವಾಂಗ್‌ಚುಕ್ ತಿಳಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಗೆ ಸಂಬಂಧಿಸಿದ ನಿರ್ಧಾರಗಳಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಂದ ಬೆನ್ನಲ್ಲೇ ಸಿಇಸಿ ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು ರಾಜೀನಾಮೆಯನ್ನು ಸಿಜೆಪಿ ಆಗ್ರಹಿಸಿದೆ.

ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ವಾಂಗ್‌ಚುಕ್, ದೇಶದ ಸಾಂವಿಧಾನಿಕ ಸಂಸ್ಥೆಗಳಲ್ಲಿ ಹೊಣೆಗಾರಿಕೆಯನ್ನು ಕೋರಿ ಅನೇಕ ಸಮರ್ಥ ಶಕ್ತಿಗಳು ಮತ್ತು ಸಾರ್ವಜನಿಕ ಧ್ವನಿಗಳು ಮುಂದೆ ಬರಬೇಕಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಲಡಾಖ್‌ಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಮಾತುಕತೆಗಳ ವಿಳಂಬ ಮತ್ತು ನ್ಯಾಯಾಂಗ ತನಿಖೆಯ ವರದಿಗಳ ಕುರಿತಾಗಿಯೂ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....