ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗೆ ನೋಟಿಸ್; ಮ್ಯಾಜಿಸ್ಟ್ರೇಟ್‌ಗೆ ಎಷ್ಟು ಧೈರ್ಯ: ಸುಪ್ರೀಂ ಪ್ರಶ್ನೆ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಿದ ಗ್ರೇಟರ್ ನೋಯ್ಡಾದ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬನಿಗೆ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುನ್ನೆಚ್ಚರಿಕೆ ನೋಟಿಸ್ ಜಾರಿ ಮಾಡಿರುವ ಕ್ರಮವನ್ನು ಸುಪ್ರೀಂ ಕೋರ್ಟ್ ಅತ್ಯಂತ ಕಠಿಣ ಶಬ್ದಗಳಲ್ಲಿ ಖಂಡಿಸಿದೆ. “ಸುಪ್ರೀಂ ಕೋರ್ಟ್ ಆದೇಶವಿದ್ದರೂ ಮ್ಯಾಜಿಸ್ಟ್ರೇಟ್ ಒಬ್ಬರು ವಿದ್ಯಾರ್ಥಿಗೆ ನೋಟಿಸ್ ನೀಡಲು ಹೇಗೆ ಧೈರ್ಯ ಮಾಡಿದರು?” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ನೇತೃತ್ವದ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಗೌತಮ್ ಬುದ್ಧ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬರಿಗೆ ಗ್ರೇಟರ್ ನೋಯ್ಡಾದ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು. ನೋಯ್ಡಾ ಪೊಲೀಸರ ವರದಿಯನ್ನಾಧರಿಸಿ, ಶಾಂತಿ ಕಾಯ್ದುಕೊಳ್ಳಲು ಭದ್ರತಾ ಬಾಂಡ್ ಏಕೆ ಸಲ್ಲಿಸಬಾರದು ಎಂದು ಪ್ರಶ್ನಿಸಿ ಈ ನೋಟಿಸ್ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನೂ ಓದಿ: ಸಿಜೆಪಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ತನಿಖೆ ಕೋರಿ ಅರ್ಜಿ: ಕೇಂದ್ರ, ಸಿಬಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ವಿದ್ಯಾರ್ಥಿಯ ಪರ ವಾದ ಮಂಡಿಸಿದ ಹಿರಿಯ ವಕೀಲರು, “ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಅಥವಾ ದಂಡನಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಹೀಗಿದ್ದರೂ ಪೊಲೀಸರ ವರದಿ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ನೋಟಿಸ್ ನೀಡಿರುವುದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಹುಟ್ಟುಹಾಕುತ್ತದೆ” ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಸುಪ್ರೀಂ ಕೋರ್ಟ್ ಈಗಾಗಲೇ ನೋಂದಾಯಿತ ಎಫ್‌ಐಆರ್‌ಗಳನ್ನು ರದ್ದುಗೊಳಿಸಿ, ಭವಿಷ್ಯದಲ್ಲಿ ಯಾವುದೇ ಕಠಿಣ ಕ್ರಮ ಜರುಗಿಸದಂತೆ ನಿರ್ಬಂಧ ವಿಧಿಸಿರುವಾಗ ಈ ರೀತಿ ನೋಟಿಸ್ ನೀಡಿರುವುದು ನ್ಯಾಯಾಂಗ ನಿಂದನೆಗೆ ಸಮಾನ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನಮ್ಮ ದೇಶದ ಯುವಕರ ಮತ್ತು ವಿದ್ಯಾರ್ಥಿಗಳ ವಿರುದ್ಧ ಇಂತಹ ಕ್ರಮಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ ಪೀಠ, ಈ ಕುರಿತು ವಿವರಣೆ ನೀಡುವಂತೆ ಗ್ರೇಟರ್ ನೋಯ್ಡಾ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್‌ಗೆ ಸಮನ್ಸ್/ವಿವರಣೆ ಕೇಳಲು ಸೂಚಿಸಿದೆ.

ಇನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಂಬ ವಿಡಂಬನಾತ್ಮಕ ಪಕ್ಷ ಹುಟ್ಟಿಕೊಂಡಿದ್ದೇ ಸಿಜೆಐ ಹೇಳಿಕೆಯೊಂದರ ಬಳಿಕ. “ಕೆಲಸವಿಲ್ಲದ ಕೆಲವು ಯುವಕರು ಜಿರಳೆಗಳಂತೆ ಇದ್ದಾರೆ. ಉದ್ಯೋಗ ಸಿಗದಿದ್ದಾಗ ಅವರು ಮಾಧ್ಯಮ, ಸಾಮಾಜಿಕ ಮಾಧ್ಯಮ ಅಥವಾ ಆರ್‌ಟಿಐ ಕಾರ್ಯಕರ್ತರಾಗಿ ಬದಲಾಗಿ ಇಡೀ ವ್ಯವಸ್ಥೆಯ ಮೇಲೆಯೇ ದಾಳಿ ಮಾಡಲು ಪ್ರಾರಂಭಿಸುತ್ತಾರೆ” ಎಂದು ಹೇಳಿದ್ದರು. ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ನಡುವೆ ಅಭಿಜೀತ್ ದೀಪ್ಕೆ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ ಎಂಬ ಎಕ್ಸ್‌, ಇನ್‌ಸ್ಟಾಗ್ರಾಂ ಪೋಸ್ಟ್ ಲಕ್ಷಾಂತರ ಫಾಲೋವರ್ಸ್‌ಗಳನ್ನು ಪಡೆದುಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...