ಯುವಶಕ್ತಿಗೆ ಬೆಚ್ಚಿಬಿದ್ದ ಮೋದಿ ಸರ್ಕಾರ: ‘ನೀಟ್’ ಚರ್ಚೆಗೆ ಸಮ್ಮತಿ

Date:

ದೆಹಲಿಯ ಬೀದಿಗಳಲ್ಲಿ ನ್ಯಾಯ ಕೇಳಿ ಬಂದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಪೊಲೀಸ್ ದೌರ್ಜನ್ಯ ಎಸಗಿದ ಕೇಂದ್ರ ಸರ್ಕಾರ, ಕೊನೆಗೂ ಜನಾಕ್ರೋಶಕ್ಕೆ ಮಣಿದಿದೆ. ‘ನೀಟ್’ ಪರೀಕ್ಷೆಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಸರ್ವಪ್ರಯತ್ನ ನಡೆಸುತ್ತಿದ್ದ ಸರ್ಕಾರ, ದೆಹಲಿಯಾದ್ಯಂತ ಪ್ರತಿಭಟನೆಯ ಕಿಚ್ಚು ವ್ಯಾಪಿಸುತ್ತಿದ್ದಂತೆ ಅನಿವಾರ್ಯವಾಗಿ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚಿಸಲು ತಲೆಬಾಗಿದೆ.

- Advertisement -

ಸರ್ಕಾರದ ಈ ಸರ್ವಾಧಿಕಾರಿ ಮತ್ತು ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರೇ ದಿಢೀರ್ ಧರಣಿಗೆ ಕುಳಿತರು. ಈ ಅನಿರೀಕ್ಷಿತ ನಡೆಯಿಂದ ನಡುಗಿದ ಪ್ರಧಾನಿ ಕಚೇರಿ (PMO), ತರಾತುರಿಯಲ್ಲಿ ಸಚಿವ ಜಿತೇಂದ್ರ ಸಿಂಗ್ ಹಾಗೂ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರನ್ನು ಸ್ಥಳಕ್ಕೆ ಕಳುಹಿಸಿ ಸಂಧಾನಕ್ಕೆ ದುಂಬಾಲು ಬಿತ್ತು. ವಿಪಕ್ಷ ನಾಯಕನ ಧ್ವನಿಯನ್ನು ಅಡಗಿಸಲು ಪೊಲೀಸರನ್ನು ಬಳಸಿ ರಾಹುಲ್ ಗಾಂಧಿ ಅವರನ್ನು ಬಲವಂತವಾಗಿ ಎಳೆದುಕೊಂಡು ಹೋದ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರದ ದಮನಕಾರಿ ನೀತಿಯನ್ನು ಜಗಜ್ಜಾಹೀರು ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ” ಎಂಬ ಕುಂಟುನೆಪವೊಡ್ಡಿ ರಾಹುಲ್ ಗಾಂಧಿ ಅವರನ್ನು ಅಲ್ಲಿಂದ ಕಳುಹಿಸಲು ಯತ್ನಿಸಿದ ಸಚಿವ ಜಿತೇಂದ್ರ ಸಿಂಗ್, ‘ನೀಟ್’ ವಿವಾದವನ್ನು ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಕೇಳಿಕೊಡರು. ಆದರೆ, ಈ ಬೂಟಾಟಿಕೆಯ ಭರವಸೆಗೆ ಸೊಪ್ಪು ಹಾಕದ ರಾಹುಲ್ ಗಾಂಧಿ, ಕೇವಲ ಚರ್ಚೆ ಸಾಲದು, ಹಗರಣದ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದು ಸರ್ಕಾರದ ನಿದ್ದೆಗೆಡಿಸಿದ್ದಾರೆ.

ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತು ಹೋರಾಟಗಾರರನ್ನು ಹತ್ತಿಕ್ಕಲು ಕುತಂತ್ರ ರೂಪಿಸಿರುವ ಸರ್ಕಾರಿ ಮೂಲಗಳು, ಈ ಪ್ರಜಾಸತ್ತಾತ್ಮಕ ಹೋರಾಟವನ್ನು ಬಾಂಗ್ಲಾದೇಶ ಮತ್ತು ನೇಪಾಳದ ಹಿಂಸಾತ್ಮಕ ದಂಗೆಗಳಿಗೆ ಹೋಲಿಸುವ ಮೂಲಕ ಜನರ ದಿಕ್ಕುತಪ್ಪಿಸಲು ಯತ್ನಿಸುತ್ತಿವೆ. “ಪ್ರಧಾನಿ ನಿವಾಸದ ಮುಂದಿನ ಪ್ರತಿಭಟನೆ ಆತಂಕಕಾರಿ ಮತ್ತು ಪ್ರಜಾಪ್ರಭುತ್ವಕ್ಕೆ ಕಂಟಕ” ಎಂದು ಸರ್ಕಾರದ ಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳು, ವಾಸ್ತವದಲ್ಲಿ ಜನಾಕ್ರೋಶದಿಂದ ತಮ್ಮ ಕುರ್ಚಿ ಅಲುಗಾಡುತ್ತಿರುವ ಬಗ್ಗೆ ಅವರಿಗಿರುವ ತೀವ್ರ ಭೀತಿಯನ್ನು ಎತ್ತಿ ತೋರಿಸುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...