CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

Date:

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರೊಂದಿಗೆ ಪಕ್ಷದ ನಾಯಕರಾದ ಡೆರೆಕ್ ಓಬ್ರಿಯಾನ್, ದೋಲಾ ಸೇನ್ ಸೇರಿದಂತೆ ಇತರರನ್ನೂ ವಶಕ್ಕೆ ಪಡೆಯಲಾಗಿದೆ.

- Advertisement -

ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೇಹಾ ಬೋರಾ, ಸಿಪಿಐ(ಎಂಎಲ್) ಲಿಬರೇಷನ್ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ, ವಕೀಲ ಪ್ರಶಾಂತ್ ಭೂಷಣ್ ಹಾಗೂ ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಅವರನ್ನೂ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದೆಹಲಿಯ ಐಎನ್‌ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಖಾನ್ ಮಾರ್ಕೆಟ್ ಮತ್ತು ಕನ್ನಾಟ್ ಪ್ಲೇಸ್ ಸೇರಿದಂತೆ ಹಲವು ಪ್ರಮುಖ ಮಾರುಕಟ್ಟೆಗಳನ್ನು ಬಂದ್‌ ಮಾಡಲಾಗಿದೆ. ಖಾನ್ ಮಾರ್ಕೆಟ್ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಂಜೀವ್ ಮೆಹ್ರಾ ಅವರ ಪ್ರಕಾರ, ಪ್ರತಿಭಟನಾಕಾರರನ್ನು ಪೊಲೀಸರು ಸಮೀಪದಲ್ಲೇ ತಡೆದರೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಬಹುದು ಎಂಬ ಆತಂಕದಿಂದ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದ್ದರು ಎನ್ನಲಾಗಿದೆ. ಅಂಗಡಿಗಳು ಮುಚ್ಚಿದ್ದರೂ ಬಾಡಿಗೆ, ನೌಕರರ ವೇತನ ಸೇರಿದಂತೆ ಇತರ ವೆಚ್ಚಗಳನ್ನು ಭರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: CJP ಪ್ರತಿಭಟನೆ | ಸಾವಿರಾರು ಪ್ರತಿಭಟನಾಕಾರರು ವಶಕ್ಕೆ; ಜಂತರ್‌ ಮಂತರ್‌ಗೆ ಮರಳಲು ಒಡನಾಡಿಗಳಿಗೆ ನೇಹಾ ಬೋರಾ ಕರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಹುಮನಾಬಾದ್‌ | ಒಗ್ಗಟ್ಟಿನಿಂದ ಹೂಗಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಸಿದ್ದಲಿಂಗಪ್ಪ ಪಾಟೀಲ

ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ...

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...