CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರೊಂದಿಗೆ ಪಕ್ಷದ ನಾಯಕರಾದ ಡೆರೆಕ್ ಓಬ್ರಿಯಾನ್, ದೋಲಾ ಸೇನ್ ಸೇರಿದಂತೆ ಇತರರನ್ನೂ ವಶಕ್ಕೆ ಪಡೆಯಲಾಗಿದೆ.
ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೇಹಾ ಬೋರಾ, ಸಿಪಿಐ(ಎಂಎಲ್) ಲಿಬರೇಷನ್ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ, ವಕೀಲ ಪ್ರಶಾಂತ್ ಭೂಷಣ್ ಹಾಗೂ ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಅವರನ್ನೂ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದೆಹಲಿಯ ಐಎನ್‌ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಖಾನ್ ಮಾರ್ಕೆಟ್ ಮತ್ತು ಕನ್ನಾಟ್ ಪ್ಲೇಸ್ ಸೇರಿದಂತೆ ಹಲವು ಪ್ರಮುಖ ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆ. ಖಾನ್ ಮಾರ್ಕೆಟ್ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಂಜೀವ್ ಮೆಹ್ರಾ ಅವರ ಪ್ರಕಾರ, ಪ್ರತಿಭಟನಾಕಾರರನ್ನು ಪೊಲೀಸರು ಸಮೀಪದಲ್ಲೇ ತಡೆದರೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಬಹುದು ಎಂಬ ಆತಂಕದಿಂದ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದ್ದರು ಎನ್ನಲಾಗಿದೆ. ಅಂಗಡಿಗಳು ಮುಚ್ಚಿದ್ದರೂ ಬಾಡಿಗೆ, ನೌಕರರ ವೇತನ ಸೇರಿದಂತೆ ಇತರ ವೆಚ್ಚಗಳನ್ನು ಭರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: CJP ಪ್ರತಿಭಟನೆ | ಸಾವಿರಾರು ಪ್ರತಿಭಟನಾಕಾರರು ವಶಕ್ಕೆ; ಜಂತರ್ ಮಂತರ್‌ಗೆ ಮರಳಲು ಒಡನಾಡಿಗಳಿಗೆ ನೇಹಾ ಬೋರಾ ಕರೆ





