ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

Date:

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು ಮತದಾರರ ಪಟ್ಟಿ ಅಕ್ರಮ ಹಾಗೂ ಚುನಾವಣಾ ಪ್ರಕ್ರಿಯೆಯ ಲೋಪಗಳನ್ನು ವಿರೋಧಿಸಿ ನವದೆಹಲಿಯ ಪ್ರತಿಷ್ಠಿತ ಜಂತರ್ ಮಂತರ್‌ನಲ್ಲಿ ಗಾಂಧಿ ಜಯಂತಿಯಾದ ಇಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಈ ನಡುವೆ ದೆಹಲಿ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದು ಈ ಭಾಗದಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

- Advertisement -

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಇಂಡಿಯಾ ಒಕ್ಕೂಟ, ಪ್ರಮುಖ ವಿರೋಧ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಜಂಟಿಯಾಗಿ ಈ ಪ್ರತಿಭಟನಾ ಕರೆಯನ್ನು ನೀಡಿದ್ದವು. ಆದರೆ ಈ ಪ್ರತಿಭಟನೆ ಅನುಮತಿಯಿಲ್ಲ ಎಂದು ದೆಹಲಿ ಡಿಸಿಪಿ ಸಚಿನ್ ಶರ್ಮಾ ಹೇಳಿದ್ದಾರೆ. ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಜಾರಿಯಲ್ಲಿದೆ. ಅನಧಿಕೃತ ಧರಣಿ, ಪ್ರತಿಭಟನೆ ಅಥವಾ ಪ್ರದರ್ಶನಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಜನರು ಕಾನೂನನ್ನು ಪಾಲಿಸುವಂತೆ ಹಾಗೂ ಪೊಲೀಸರಿಗೆ ಸಹಕರಿಸುವಂತೆ ಶರ್ಮಾ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಇದನ್ನೂ ಓದಿ: ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಈ ಹಿಂದೆ ನೀಟ್ ಅಕ್ರಮಗಳ ವಿರುದ್ಧ ಧರಣಿ ನಡೆಸಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದ್ದ ಸಿಜೆಪಿಯೂ ಈಗ ಗ್ಯಾನೇಶ್ ಕುಮಾರ್ ಅವರ ಅಕ್ರಮಗಳ ವಿರುದ್ಧ ಬೀದಿಗಿಳಿಯುತ್ತಿರುವುದರಿಂದ ದೆಹಲಿ ಪೊಲೀಸರು ಎಂದಿನಂತೆ ಪ್ರತಿಭಟನೆ ಹತ್ತಿಕ್ಕುವ ಯತ್ನಕ್ಕೆ ಇಳಿದಿದ್ದಾರೆ. ಮುನ್ನೆಚ್ಚರಿಕೆಯಾಗಿ ಇಡೀ ಜಂತರ್ ಮಂತರ್ ಮತ್ತು ದೆಹಲಿ ಎಲೆಕ್ಷನ್ ಕಮಿಷನ್ ಕಚೇರಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್‌ಗೆ ಒಳಪಡಿಸಲಾಗಿದೆ.

ದೆಹಲಿ ಪೊಲೀಸರು ಜಂತರ್ ಮಂತರ್ ಸುತ್ತಮುತ್ತ ಬ್ಯಾರಿಕೇಡ್‌‌ಗಳನ್ನು ಅಳವಡಿಸಿದೆ. ಪ್ರತಿಭಟನಾಕಾರರನ್ನು ಕಚೇರಿ ಸಂಕೀರ್ಣದತ್ತ ಪ್ರವೇಶಿಸದಂತೆ ತಡೆಯಲು ಹೆಚ್ಚುವರಿ ಪೊಲೀಸ್ ತುಕಡಿಗಳು ಮತ್ತು ಬಿಎಸ್ಎಫ್ ಬಲವನ್ನು ನಿಯೋಜಿಸಲಾಗಿದೆ. ಪ್ರದೇಶಕ್ಕೆ ಭೇಟಿ ನೀಡುವವರ ಮತ್ತು ವಾಹನಗಳ ತೀವ್ರ ತಪಾಸಣೆ ನಡೆಯುತ್ತಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಹಾಗೂ ಡ್ರೋನ್ ಕಣ್ಣಾವಲು ಇಡಲಾಗಿದೆ. 11 ದೆಹಲಿ ಮೆಟ್ರೋ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ.

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ಕರೆ ನೀಡಿತ್ತು. ಮುಂಬೈ ಪೊಲೀಸರು ಈ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ. ಮುಂಬೈ ಹೈಕೋರ್ಟ್ ಆದೇಶದ ಪ್ರಕಾರ ಶಿವಾಜಿ ಪಾರ್ಕ್ ಪ್ರಶಾಂತ ವಲಯ ಆಗಿರುವುದರಿಂದ ಮತ್ತು ಟ್ರಾಫಿಕ್ ಹಾಗೂ ಆಸ್ಪತ್ರೆಗಳಿಗೆ ತೊಂದರೆಯಾಗುವ ಕಾರಣ ನೀಡಿ ಪ್ರತಿಭಟನಾಕಾರರನ್ನು ಆಜಾದ್ ಮೈದಾನಕ್ಕೆ ಹೋಗುವಂತೆ ಸೂಚಿಸಿದ್ದಾರೆ. ಅನುಮತಿ ಸಿಗದಿದ್ದರೂ ಶಿವಾಜಿ ಪಾರ್ಕ್‌ನ ಗೇಟ್ ನಂಬರ್ 6 ರ ಬಳಿ ಪ್ರತಿಭಟನೆ ನಡೆಸಿಯೇ ಸೀರುತ್ತೇವೆ ಎಂದು ಸಿಜೆಪಿ ನಾಯಕರು ತಿಳಿಸಿದ್ದಾರೆ. ಒಂದು ವೇಳೆ ಪೊಲೀಸರು ತಡೆದರೆ ‘ಜೈಲ್ ಭರೋ ಆಂದೋಲನ’ ಮಾಡುವುದಾಗಿ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ ನಿನ್ನೆ ತಡರಾತ್ರಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಂಧನ ಮಾಡಲಾಗಿದೆ. ಕೈಯಲ್ಲಿ ಪ್ಲಕ್‌ಕಾರ್ಡ್ ಹಿಡಿದಿದ್ದರು, ಆದ್ದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಮುಖ್ಯ ಚುನಾವಣೆ ಆಯುಕ್ತ ಗ್ಯಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಪ್ರಸ್ತುತ ಜಾರಿಯಲ್ಲಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, 2025 ಜನವರಿಯ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು. 2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಿ, ನಾಗರಿಕ ಸಮಾಜದ ಭಾಗವಹಿಸುವಿಕೆಯೊಂದಿಗೆ ಪಾರದರ್ಶಕ ನೇಮಕಾತಿ ನಿಯಮ ರೂಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...