ಸಂತ್ರಸ್ತ ಕಾರ್ಯಕರ್ತರ ಬೆನ್ನಿಗೆ ನಿಂತ ಸಿಜೆಪಿ: ಉಚಿತ ಕಾನೂನು ನೆರವಿಗೆ ಡಿಜಿಟಲ್ ಪ್ಲಾಟ್‌ಫಾರ್ಮ್ ಚಾಲನೆ

Date:

ಯುವಜನರ ಮತ್ತು ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಕಾರ್ಯಕರ್ತರು, ಬೆಂಬಲಿಗರು ಮತ್ತು ಸ್ವಯಂಸೇವಕರಿಗೆ ಉಚಿತವಾಗಿ ಕಾನೂನು ನೆರವು ನೀಡುವ ಉದ್ದೇಶದಿಂದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ದೇಶಾದ್ಯಂತ ಹೊಸ ಡಿಜಿಟಲ್ ಕಾನೂನು ನೆರವು ವೇದಿಕೆಯನ್ನು (Legal Aid Platform) ಚಾಲನೆಗೊಳಿಸಿದೆ.

- Advertisement -

ಪ್ರತಿಭಟನೆ ಅಥವಾ ಸಾಮಾಜಿಕ ಹೋರಾಟಗಳ ಸಂದರ್ಭದಲ್ಲಿ ಕಾರ್ಯಕರ್ತರು ಎದುರಿಸುವ ಕಿರುಕುಳ, ದೌರ್ಜನ್ಯ ಹಾಗೂ ಕಾನೂನು ತೊಡಕುಗಳನ್ನು ಎದುರಿಸಲು ಈ ವೇದಿಕೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿರಲಿದೆ ಎಂದು ಸಂಘಟನೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಸಿಜೆಪಿ ಚಳವಳಿ: ಭಾರತೀಯ ಮುಸ್ಲಿಂ ಸಮಾಜ ಕಲಿಯಬೇಕಾದ ಪಾಠವೇನು?

ಈ ಕುರಿತು ಮಾಹಿತಿ ನೀಡಿರುವ ಸಿಜೆಪಿಯ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್, “ನಮ್ಮ ಯಾವುದೇ ಕಾರ್ಯಕರ್ತರು ಅಥವಾ ಬೆಂಬಲಿಗರು ಕಾನೂನು ಹೋರಾಟದಲ್ಲಿ ಒಂಟಿಯಾಗಬಾರದು ಎನ್ನುವ ಉದ್ದೇಶದಿಂದ ಈ ದೇಶವ್ಯಾಪಿ ನೆಟ್‌ವರ್ಕ್ ರೂಪಿಸಲಾಗಿದೆ” ಎಂದು ಹೇಳಿದ್ದಾರೆ.

ಹೋರಾಟಗಾರರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಾನೂನು ಸಹಾಯ ಒದಗಿಸಲು ವಕೀಲರನ್ನು ಈ ವೇದಿಕೆಗೆ ಉಚಿತವಾಗಿ ಸೇರ್ಪಡೆಗೊಳ್ಳುವಂತೆ ಸಂಘಟನೆ ಆಹ್ವಾನಿಸಿದೆ.

ಸಂಕಷ್ಟದಲ್ಲಿರುವ ಬೆಂಬಲಿಗರು ತಮ್ಮ ಹೆಸರು, ಸಮಸ್ಯೆಯ ವಿವರ ಹಾಗೂ ಸ್ಥಳವನ್ನು ದಾಖಲಿಸುವ ಮೂಲಕ ವೇದಿಕೆಯಲ್ಲಿ ಸಲ್ಲಿಕೆ ಮಾಡಬಹುದು. ಆಯಾ ಪ್ರದೇಶದ ಪರಿಶೀಲಿತ ವಕೀಲರನ್ನು ಈ ವ್ಯವಸ್ಥೆಯ ಮೂಲಕ ನೇರವಾಗಿ ಸಂಪರ್ಕಿಸಲಾಗುತ್ತದೆ.

ಕಾರ್ಯಕರ್ತರನ್ನು ಬಂಧಿಸಿದಾಗ ಅಥವಾ ವಶಕ್ಕೆ ಪಡೆದಾಗ ತಕ್ಷಣ ನೆರವು ನೀಡಲು ‘ಎಮರ್ಜೆನ್ಸಿ ಆಪ್ಷನ್’ ಹಾಗೂ ವಾಟ್ಸಾಪ್ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಈ ಆಯ್ಕೆ ಬಳಸಿದ ತಕ್ಷಣ ಸಿಜೆಪಿಯ ಕಾನೂನು ತಂಡ ಮತ್ತು ಲಭ್ಯವಿರುವ ವಕೀಲರಿಗೆ ಸಂದೇಶ ರವಾನೆಯಾಗುತ್ತದೆ.

ಬಳಕೆದಾರರು ಬಯಸುವವರೆಗೆ ಅವರ ಗುರುತು ಗೌಪ್ಯವಾಗಿರುತ್ತದೆ. ಸಂವಹನ ಹಾಗೂ ದಾಖಲೆಗಳನ್ನು ಎನ್‌ಕ್ರಿಪ್ಟ್ ಮಾಡಲಾದ ಸುರಕ್ಷಿತ ವ್ಯವಸ್ಥೆಯಲ್ಲಿ ಸಂಗ್ರಹಿಸಲಾಗುತ್ತದೆ. ದೇಶದ ವಿವಿಧ ಭಾಗಗಳ ಜನರು ಇದನ್ನು ಸುಲಭವಾಗಿ ಬಳಸಲು ಹಲವು ಭಾರತೀಯ ಭಾಷೆಗಳಲ್ಲಿ ಈ ಸೇವೆ ಲಭ್ಯವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...