ಸೆಪ್ಟೆಂಬರ್‌ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್‌ ಪ್ರಧಾನ ಕಚೇರಿವರೆಗೆ ಸಿಜೆಪಿ ಪಾದಯಾತ್ರೆ

Date:

ಜುಲೈ 25ರಂದು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯುವಾಗ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ), ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಬೃಹತ್ ಯುವ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿರುವುದಾಗಿ ಘೋಷಿಸಿದೆ.

- Advertisement -

​ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮತ್ತು ಯುವಜನರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವ ಭರವಸೆಯನ್ನು ಸರ್ಕಾರ ಈಡೇರಿಸಿಲ್ಲ. ಕೇವಲ ವಿಳಂಬ ನೀತಿಯನ್ನು ಅನುಸರಿಸುವ ಮೂಲಕ ಸರ್ಕಾರ ಯುವಜನತೆಗೆ ನೀಡಿದ್ದ ಮಾತನ್ನು ತಪ್ಪಿದೆ ಎಂದು ಸಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತೀವ್ರವಾಗಿ ಖಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಮೆರವಣಿಗೆಯು ಇಂಡಿಯಾ ಗೇಟ್‌ನಿಂದ ಆರಂಭವಾಗಿ ನವದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಸಾಗಲಿದೆ. ನೀಟ್ (NEET) ಪರೀಕ್ಷೆಯ ಅಕ್ರಮಗಳಿಂದಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತ್ರಸ್ತರು ಈ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ. ಇವರೊಂದಿಗೆ ದೇಶಾದ್ಯಂತದ ವಿದ್ಯಾರ್ಥಿಗಳು, ಯುವ ಸಂಘಟನೆಗಳು ಹಾಗೂ ಯುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

​”ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸದೆ ವಿಳಂಬ ಮಾಡುತ್ತಿರುವುದರಿಂದ, ಅನಿವಾರ್ಯವಾಗಿ ನಾವು ಮತ್ತೆ ಶಾಂತಿಯುತ ಹೋರಾಟವನ್ನು ಆರಂಭಿಸಲು ನಿರ್ಧರಿಸಿದ್ದೇವೆ. ಸರ್ಕಾರವು ನಿಜಕ್ಕೂ ತನ್ನ ಭರವಸೆಗಳನ್ನು ಈಡೇರಿಸುವ ಇಚ್ಛಾಶಕ್ತಿ ಹೊಂದಿದೆಯೇ ಎಂಬ ಬಗ್ಗೆ ನಮಗೆ ಗಂಭೀರ ಅನುಮಾನಗಳಿವೆ” ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

“ಆಗಸ್ಟ್ 18ರಂದು ಸುಪ್ರೀಂ ಕೋರ್ಟ್ ದೇಶಾದ್ಯಂತ ದಾಖಲಾಗಿರುವ ಎಫ್‌ಐಆರ್‌ಗಳ ಪಟ್ಟಿಯನ್ನು ಕೇಳಿದರೂ, ಸರ್ಕಾರ ಈ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಿಲ್ಲ. ಯುವ ಪೀಳಿಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ‘ವಿಶ್ವಾಸಘಾತ’ ಮಾಡಲು ಹೊರಟಿದೆ. ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬಾರದು. ನಾವು ಸದುದ್ದೇಶದಿಂದ ಇಟ್ಟಿದ್ದ ನಂಬಿಕೆಯನ್ನು ಬಳಸಿಕೊಂಡು ನಮ್ಮನ್ನೇ ವಂಚಿಸಲು ಯತ್ನಿಸಿದರೆ ನಾವು ಒಪ್ಪುವುದಿಲ್ಲ” ಎಂದು ಸಿಜೆಪಿ ಎಚ್ಚರಿಸಿದೆ.

ನೀಟ್-ಯುಜಿ 2026ರ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ 37 ದಿನಗಳ ಸುದೀರ್ಘ ಪ್ರತಿಭಟನೆ ನಡೆಸಿತ್ತು. ಇದೇ ವೇಳೆ ಹೋರಾಟಗಾರ ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆನಂತರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಮಾತುಕತೆಯಲ್ಲಿ, ನೀಟ್ ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರ ಮತ್ತು ಎಫ್‌ಐಆರ್ ರದ್ದತಿಯ ಭರವಸೆ ದೊರೆತ ಹಿನ್ನೆಲೆಯಲ್ಲಿ ಜುಲೈ 25ರಂದು ಪ್ರತಿಭಟನೆಯನ್ನು ಹಿಂಪಡೆಯಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...