ದೆಹಲಿ | ಜಂತರ್‌ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ

Date:

Advertisements
  • ಮಹಿಳಾ ಕುಸ್ತಿಪಟುಗಳು ಏಪ್ರಿಲ್‌ 23 ರಿಂದ ಪ್ರತಿಭಟನೆ
  • ಬ್ರಿಜ್‌ ಭೂಷಣ್‌ ವಿರುದ್ಧ ಎರಡು ಪ್ರಕರಣ ದಾಖಲು

ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಬುಧವಾರ (ಮೇ 3) ಘರ್ಷಣೆ ಉಂಟಾಗಿದೆ.

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕುಸ್ತಿಪಟುಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಕೆಲವು ಪೊಲೀಸ್‌ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ನಡುವೆ ಮಾರಾಮಾರಿ ಉಂಟಾಗಿದೆ. ಇದರಿಂದ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಕುಸ್ತಿಪಟುಗಳ ತಲೆಗೆ ಗಂಭೀರ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಎಲ್ಲರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisements

ಘಟನೆಗೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್‌ ಭಾರ್ತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಏಷ್ಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪೊಲೀಸರು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದ ಅಪರಾಧ ನಾವೇನೂ ಮಾಡಿಲ್ಲ. ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಬಹುದು” ಎಂದು ವಿನೇಶ್ ಕಂಬನಿ ಮಿಡಿದರು ಎಂದು ಸುದ್ದಿ ಸಂಸ್ಥೆಯೊಂದು ಉಲ್ಲೇಖಿಸಿದೆ.

ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮಾತನಾಡಿ, ”ನಾನು ಗೆದ್ದ ಎಲ್ಲ ಪದಕಗಳನ್ನು ಸರ್ಕಾರ ಹಿಂದಕ್ಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದರು.

“ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸೋಮನಾಥ್‌ ಭಾರ್ತಿ ಅವರು ತಮ್ಮ ಬೆಂಬಲಿಗರ ಜೊತೆಯಲ್ಲಿ ಅನುಮತಿಯಿಲ್ಲದೇ ಹಾಸಿಗೆ ಹಾಗೂ ಮಂಚಗಳ ಜೊತೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಈ ಕುರಿತು ಪೊಲೀಸ್‌ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಇದರಿಂದ ವಾಗ್ವಾದ ಉಂಟಾಗಿದೆ. ಆಗ ಭಾರ್ತಿ ಅವರ ಬೆಂಬಲಿಗರು ಉದ್ರಿಕ್ತರಾಗಿದ್ದಾರೆ. ಇದರಿಂದ ಘರ್ಷಣೆ ನಡೆಯಿತು” ಎಂದು ದೆಹಲಿ ಉಪ ಪೊಲೀಸ್‌ ಆಯುಕ್ತ (ಡಿಸಿಪಿ) ಪ್ರಣವ್‌ ತಯಾಲ್‌ ಹೇಳಿದರು.

“ಪ್ರತಿಭಟನಾ ಸ್ಥಳದಲ್ಲಿ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರದೇಶದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

ಕುಸ್ತಿಪಟುಗಳು ಹಾಗೂ ಪೊಲೀಸರ ನಡುವಿನ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೋದಲ್ಲಿ ಕೆಲವು ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಕುಡಿದ ಅಮಲಿನಲ್ಲಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಕೆಲವು ಪುರುಷರು ಹಾಸಿಗೆ ಹಾಗೂ ಮಂಚ ತರಲು ಪ್ರಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದನ್ನು ಪ್ರಶ್ನಿಸಿದರು. ಇದರಿಂದ ಆಕ್ರೋಶಗೊಂಡ ಪುರುಷರ ಜೊತೆ ಪ್ರತಿಭಟನಾಕಾರರು ಬೆಂಬಲವಾಗಿ ನಿಂತರು. ಈ ವೇಳೆ ಪ್ರತಿಭಟನಾಕಾರರು ಪೊಲೀಸ್‌ ಸಿಬ್ಬಂದಿ ಮದ್ಯ ಕುಡಿದಿದ್ದಾರೆ ಎಂದು ಆರೋಪಿಸಿದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಮಹಿಳೆ ಹಾಗೂ ಪುರುಷ ಕುಸ್ತಿಪಟುಗಳು ಸೇರಿ ಬ್ರಿಜ್‌ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್‌ 23 ರಿಂದ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬ್ರಿಜ್‌ ಭೂಷಣ್‌ ಉತ್ತರ ಪ್ರದೇಶದ ಬಿಜೆಪಿ ಸಂಸದರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಬ್ರಿಜ್‌ ಭೂಷಣ್‌ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರು ಅಪ್ರಾಪ್ತರಾಗಿದ್ದಾರೆ.

ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪ ಹಿನ್ನೆಲೆ ದೆಹಲಿ ಪೊಲೀಸರು ಏಪ್ರಿಲ್‌ 28 ರಂದು ಬ್ರಿಜ್‌ ಭೂಷಣ್‌ ವಿರುದ್ಧ ಎರಡು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X