ಶನಿವಾರ ಪಶ್ಚಿಮ ಬಂಗಾಳದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಈವರೆಗೆ ಐದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹಾಗೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.
ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ಮೇಲೆ ದಾಳಿ ನಡೆದಿದ್ದು, ಅವರ ಕಾರನ್ನು ಧ್ವಂಸಗೊಳಿಸಲಾಗಿದೆ. ಹಲವು ಪ್ರಾಧ್ಯಾಪಕರ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿ ಸಂಘದ ಚುನಾವಣಾ ದಿನಾಂಕಗಳನ್ನು ಸಚಿವರು ಸ್ಥಳದಲ್ಲೇ ಘೋಷಿಸಬೇಕೆಂದು ಎಡಪಂಥೀಯ ಸಂಘಟನೆಗಳ ವಿದ್ಯಾರ್ಥಿಗಳು ಶನಿವಾರ ಸಂಜೆ ಆಗ್ರಹಿಸಿದ್ದಾರೆ.
ಇದನ್ನು ಓದಿದ್ದೀರಾ? ಷೇರುಪೇಟೆ ವಂಚನೆ | ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸದೆ ತಾನು ಚುನಾವಣೆಯನ್ನು ಘೋಷಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಅದಾದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ ಎಂದು ಹೇಳಲಾಗಿದೆ.
ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಾಹನಗಳ ಮೇಲೆ ಹಾನಿ ಮಾಡಲಾಗಿದೆ. ವಿಶ್ವವಿದ್ಯಾಲಯದ ನೌಕರರ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ.
ಇನ್ನು ವಿದ್ಯಾರ್ಥಿಗಳ ಮೇಲೆಯೂ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಸಚಿವರ ಕಾರಿಗೆ ಸಿಲುಕಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಕೆಪಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಜೆಯು ಮಾಜಿ ಪ್ರಾಧ್ಯಾಪಕ ಮತ್ತು ಮಾಜಿ ಉಪಕುಲಪತಿ ಓಂ ಪ್ರಕಾಶ್ ಮಿಶ್ರಾ ಅವರ ಮೇಲೂ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಜಾತಿ ನಿಂದನೆ | ದಲಿತನಾಗಿದ್ದಕ್ಕೆ ಉದ್ಯೋಗ ಸಿಕ್ಕಿದೆಯೆಂದು ನಿಂದಿಸಿದ್ದ NFI ಅಧಿಕಾರಿಗಳು; ಎಫ್‌ಐಆರ್ ದಾಖಲು
ಈ ಘರ್ಷಣೆಯಲ್ಲಿ ಡಬ್ಲ್ಯೂಬಿಸಿಯುಪಿಎ ಸದಸ್ಯರಾದ ಮೋನೋಜಿತ್ ಮಂಡಲ್ ಮತ್ತು ಸಮೀರ್ ಚಟರ್ಜಿ ಸೇರಿದಂತೆ ಹಲವು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಆದರೆ ಈ ನಡುವೆ ವಿದ್ಯಾರ್ಥಿ ಮುಖಂಡರು ಟಿಎಂಸಿ-ಸಂಬಂಧಿತ ಪ್ರಾಧ್ಯಾಪಕರು ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ವಿದ್ಯಾರ್ಥಿ ಚುನಾವಣೆಗಳು ಯಾವಾಗ ನಡೆಯುತ್ತವೆ ಎಂದು ನಾವು ತಿಳಿದುಕೊಳ್ಳಲು ಬಯಸಿದ್ದೆವು, ಆದರೆ ಟಿಎಂಸಿ ಬೆಂಬಲಿಗರು ನಮ್ಮ ಮೇಲೆ ದಾಳಿ ಮಾಡಿದರು” ಎಂದು ಎಸ್‌ಎಫ್‌ಐ ನಾಯಕರೊಬ್ಬರು ಹೇಳಿದ್ದಾರೆ.
ಇದಾದ ಬಳಿಕ ವಿದ್ಯಾರ್ಥಿಗಳು ಜಾದವ್‌ಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಈ ನಡುವೆ ಎಡಪಂಥೀಯ ವಿದ್ಯಾರ್ಥಿ ಸಂಘಗಳು ಮತ್ತು ತೃಣಮೂಲ ಕಾರ್ಯಕರ್ತರು ವಿಶ್ವವಿದ್ಯಾಲಯದ ಹೊರಗೆ ಪ್ರತ್ಯೇಕ ಮೆರವಣಿಗೆಗಳನ್ನು ನಡೆಸಿದರು.
ಈ ಘರ್ಷಣೆಯನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸೋಮವಾರ ವಿದ್ಯಾರ್ಥಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಈ ಬಗ್ಗೆ ಮಾತುಕತೆ ನಡೆಸಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ.
