ಜಾರ್ಖಂಡ್‌ | ರಾಮನವಮಿ ಧ್ವಜ ಅಪವಿತ್ರ ಆರೋಪ: ಜೆಮ್ಶೆಡ್‌ಪುರದಲ್ಲಿ ಘರ್ಷಣೆ; ನಿಷೇಧಾಜ್ಞೆ ಜಾರಿ

Date:

  • ರಾಮನವಮಿ ಸಂಬಂಧ ಜೆಮ್ಶೆಡ್‌ಪುರದಲ್ಲಿ 2 ಗುಂಪುಗಳ ನಡುವೆ ಗಲಭೆ
  • ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ

ರಾಮನವಮಿ ಉತ್ಸವದ ಆಚರಣೆ ಸಂದರ್ಭದಲ್ಲಿ ತಮ್ಮ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಾರ್ಖಂಡ್‌ನ ಜೆಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಹಿಂದುತ್ವವಾದಿಗಳು ದಾಂಧಲೆ ನಡೆಸಿದ್ದು, ಎರಡು ಗುಂಪುಗಳ ನುಡುವೆ ಭಾನುವಾರ (ಏಪ್ರಿಲ್ 9) ರಾತ್ರಿ ಘರ್ಷಣೆ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಗರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘರ್ಷಣೆ ವೇಳೆ ಎರಡು ಅಂಗಡಿಗಳು ಮತ್ತು ಆಟೊ ರಿಕ್ಷಾಗೆ ಬೆಂಕಿ ಹಚ್ಚಲಾಗಿದೆ. ಉದ್ರಿಕ್ತರು ಪರಸ್ಪರ ಕಲ್ಲುತೂರಾಟ ನಡೆಸಿದ್ದಾರೆ. ಗಲಭೆ ನಿಯಂತ್ರಿಸಲು ಪೊಲೀಸರು ಗಲಭೆಕೋರರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ.

ಕದ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಸ್ತ್ರಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಭದ್ರತೆಗೆ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. “ಈ ಪ್ರದೇಶದಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭದ್ರತೆಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ” ಎಂದು ಉಪ ವಿಭಾಗೀಯ ಅಧಿಕಾರಿ ಪಿಯುಸ್ ಸಿನ್ಹಾ ತಿಳಿಸಿದ್ದಾರೆ.

“ಸಮಾಜ ಘಾತುಕ ಶಕ್ತಿಗಳು ಶಾಂತಿ ಕದಡಲು ಪ್ರಯತ್ನಿಸುತ್ತಿವೆ. ಅವರ ಸಂಚು ವಿಫಲಗೊಳಿಸಲು ನಾಗರಿಕರು ಸಹಕರಿಸಬೇಕು. ಯಾವುದೇ ಪ್ರಚೋದನೆಗೆ ಒಳಗಾಗಬಾರದು” ಎಂದು ಪೂರ್ವ ಸಿಂಗ್ಭೂಮ್ ಜಿಲ್ಲೆಯ ಉಪ ಆಯುಕ್ತ ವಿಜಯ ಜಾಧವ್ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ವಿರೋಧ; ರಿಮೋಟ್ ಮತದಾನ ರದ್ದುಗೊಳಿಸಿದ ಚುನಾವಣಾ ಆಯೋಗ

ರಾಮನವಮಿಯ ಹಿನ್ನೆಲೆಯಲ್ಲಿ ಹಾರಿಸಿದ್ದ ಧ್ವಜಕ್ಕೆ ಕಿಡಿಗೇಡಿಗಳು ಮಾಂಸದ ತುಂಡನ್ನು ಕಟ್ಟಿರುವ ಸುದ್ದಿ ಹರಡಿತ್ತು. ಇದು ಗಲಭೆಗೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770...

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...