ಟಿಪ್ಪು, ಔರಂಗಜೇಬ್ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌: ಕೊಲ್ಲಾಪುರ ಉದ್ವಿಗ್ನ

Date:

Advertisements

ವಿವಾದಾತ್ಮಕ ಆಡಿಯೋ ಹರಿಬಿಟ್ಟಿದ್ದ ಅಪ್ರಾಪ್ತ ಬಾಲಕರು

ಪ್ರತಿಭಟನೆಯಲ್ಲಿ ಕಲ್ಲು ತೂರಿ ದೊಂಬಿ ಎಬ್ಬಿಸಿದ ಕಿಡಿಗೇಡಿಗಳು

ಮೊಘಲ್‌ ದೊರೆ ಔರಂಗ್‌ಜೇಬ್‌ ಮತ್ತು ಟಿಪ್ಪು ಸುಲ್ತಾನ್‌ ಇಬ್ಬರನ್ನೂ ವೈಭವೀಕರಿಸಿ ವಾಟ್ಸಪ್‌ನಲ್ಲಿ ಸ್ಟೆಟಸ್‌ ಹಾಕಿಕೊಂಡಿದ್ದ ಮೂವರು ಅಪ್ರಾಪ್ತ ಬಾಲಕರ ನಡೆಯನ್ನು ವಿರೋಧಿಸಿ ಮಹಾರಷ್ಟ್ರದ ಕೊಲ್ಲಾಪುರದಲ್ಲಿ ಬಲಪಂಥೀಯ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿವೆ. ಶಾಂತಿಯುತವಾಗಿ ಶುರುವಾಗಿದ್ದ ಈ ಪ್ರತಿಭಟನೆ ಕೆಲವೇ ಹೊತ್ತಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

Advertisements

ಕೊಲ್ಲಾಪುರದ ನಿವಾಸಿಗಳಾದ ಮೂವರು ಅಪ್ರಾಪ್ತರು ಮಂಗಳವಾರ ಔರಂಗ್‌ಜೇಬ್‌ ಮತ್ತು ಟಿಪ್ಪುವನ್ನು ವೈಭವೀಕರಿಸುವ ಫೋಟೋಗಳನ್ನು ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಂಚಿಕೊಂಡು ವಿವಾದಾತ್ಮಕ ಆಡಿಯೋವನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಪೋಟೋಗಳು ಮತ್ತು ವಿವಾದಾತ್ಮಕ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಬುಧವಾರ ಕೊಲ್ಲಾಪುರ ಬಂದ್‌ಗೆ ಕರೆ ನೀಡಿವೆ. ವಿಷಯ ತಿಳಿದ ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ‌ ರಾಹುಲ್‌ ರೇಖಾವರ್‌ ಕೂಡ ಕೆಲ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿ ಬಂದ್‌ ಕರೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಅವರ ಪ್ರಯತ್ನ ವಿಫಲವಾಗಿದೆ.

ಬುಧವಾರ ಬೆಳಗ್ಗೆ ಬಲಪಂಥೀಯ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಕೊಲ್ಲಾಪುರದ ಶಿವಾಜಿ ಚೌಕ್‌ ಬಳಿ ಜಮಾಯಿಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ಅಂಗಡಿ-ಮುಂಗಟ್ಟುಗಳನ್ನು ದೋಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಲಾಠಿ ಚಾರ್ಜ್‌ ನಡೆಸಿರುವ ಪೊಲೀಸರು 21ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ಏಕ್‌ನಾಥ್‌ ಶಿಂಧೆ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಜನರು ಶಾತಿಯಿಂದ ವರ್ತಿಸಬೇಕು. ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮರುಕಳಿಸಿದ ಮಣಿಪುರ ಹಿಂಸಾಚಾರ | ಜೂ. 10ರವರೆಗೆ ಅಂತರ್ಜಾಲ ಸೇವೆ ಸ್ಥಗಿತ

ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಮಾತನಾಡಿ, “ಮಹಾರಾಷ್ಟ್ರದಲ್ಲಿ ಔರಂಗ್‌ಜೇಬ್‌ನನ್ನು ವೈಭವೀಕರಿಸುವವರಿಗೆ ಕ್ಷಮೆ ಇಲ್ಲ. ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಶಾಂತಿ-ಸುವ್ಯವಸ್ಥೆಯನ್ನು ಕಾಪಾಡವುದು ನಮ್ಮೆಲ್ಲರ ಜವಾಬ್ದಾರಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು...

ಜಾರ್ಖಂಡ್ | ಭೂಸ್ವಾಧೀನ ವಿವಾದ; ಮಾಜಿ ಸಿಎಂ ಚಂಪೈ ಸೊರೇನ್‌ ಗೃಹಬಂಧನ

ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌...

ಬಿಹಾರದಲ್ಲಿ ಮತದಾರರ ಹಕ್ಕು ಯಾತ್ರೆ | ಬೈಕ್ ಏರಿದ ರಾಹುಲ್ ಗಾಂಧಿ; ಮತ ಕಳವು ವಿರುದ್ಧ ಆಕ್ರೋಶ

ಬಿಹಾರದ ಪೂರ್ನಿಯಾದಲ್ಲಿ ಭಾನುವಾರ ನಡೆದ 'ಮತದಾರರಿಗೆ ಅಧಿಕಾರ ಯಾತ್ರೆ'ಯಲ್ಲಿ ಕಾಂಗ್ರೆಸ್ ನಾಯಕ...

ಉತ್ತರ ಪ್ರದೇಶ | ದಲಿತ ಎಂಜಿನಿಯರ್‌ಗೆ ಶೂನಿಂದ ಹೊಡೆದ ಬಿಜೆಪಿ ಮುಖಂಡನ ಬಂಧನ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್‌ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ...

Download Eedina App Android / iOS

X