ಬಾಲಕಿ ಮೇಲೆ ಸಹಪಾಠಿಗಳು, ವ್ಯಕ್ತಿಯೋರ್ವನಿಂದ ಗ್ಯಾಂಗ್‌ ರೇಪ್: ವಿಡಿಯೋ ಹರಿಬಿಟ್ಟ ದುರುಳರು

Date:

9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಆಕೆಯ ಐವರು ಸಹಪಾಠಿಗಳು ಮತ್ತು ಒಬ್ಬ ವ್ಯಕ್ತಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪರಾಧದ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ದುರುಳರು ಹರಿಬಿಟ್ಟಿದ್ದು, ಇದನ್ನು ನೋಡಿದ ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯ ಐವರು ಸಹಪಾಠಿಗಳಾದ ಅಪ್ರಾಪ್ತ ವಯಸ್ಕರನ್ನು ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ತ್ವರಿತ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

“ಆರೋಪಿಯು ಅಪರಾಧ ಕೃತ್ಯವನ್ನು ಚಿತ್ರೀಕರಿಸಿ ಅದರ ವಿಡಿಯೋವನ್ನು ಇತರರಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಮತ್ತು ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಬೋಲಂಗಿರ್ ಪೊಲೀಸ್ ಮುಖ್ಯಸ್ಥ ಅಭಿಲಾಷ್ ಜಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

“ವಿಡಿಯೋದಲ್ಲಿ ಕಂಡುಬಂದ ಆರು ಆರೋಪಿಗಳನ್ನೂ ನಾವು ಬಂಧಿಸಿದ್ದೇವೆ. ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ವಿಡಿಯೋ ಮತ್ತು ಆರೋಪಗಳು ನಿಜವಾಗಿದೆ. ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಬಾಲಕರು ಅತ್ಯಾಚಾರ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶ ಡಿಯೋರಿಯಾದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳೇ ಅತ್ಯಾಚಾರ ಎಸಗಿದ್ದು ಆಕೆ ಗರ್ಭಿಣಿಯಾದಾಗಲೇ ವಿಷಯ ಬಹಿರಂಗವಾಗಿದೆ. ಬಹುತೇಕ ಪ್ರಕರಣಗಳಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯರು ತಮಗಾದ ದೌರ್ಜನ್ಯವನ್ನು ಹೇಳಲು ಭಯಪಟ್ಟಿರುವುದಿದೆ. ಇನ್ನು ಕೆಲವು ಪ್ರಕರಣಗಳ ದುರುಳರು ವಿಡಿಯೋ ಮಾಡಿಟ್ಟು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿರುವುದೂ ಇದೆ.

ಇದೇ ವರ್ಷದ ಜನವರಿಯಲ್ಲಿ 13 ವರ್ಷದ ಬಾಲಕಿಯ ಮೇಲೆ 14-15 ವರ್ಷದ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳಿಯಲ್ಲಿ ನಡೆದಿತ್ತು. ದೌರ್ಜನ್ಯದ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದರು. ಜನವರಿಯಲ್ಲೇ 6 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಮಧ್ಯಪ್ರದೇಶದಲ್ಲಿ 7 ವರ್ಷದ ಬಾಲಕಿಯನ್ನು 17 ವರ್ಷದ ಸಂಬಂಧಿ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. ಹೀಗೆ ಇತ್ತೀಚೆಗೆ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇವುಗಳ ಬೆಳಕಿಗೆ ಬಂದ ಘಟನೆಗಳಾದರೆ ಇನ್ನೂ ಅದೆಷ್ಟೋ ಪ್ರಕರಣಗಳನ್ನು ಕುಟುಂಬಸ್ಥರೇ ಮುಚ್ಚಿಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...