ಶುದ್ಧ ಗಾಳಿ | ಇಂದೋರ್ ಪ್ರಥಮ; ಬೆಂಗಳೂರು 36ನೇ ಸ್ಥಾನಕ್ಕೆ ಕುಸಿತ

Date:

ದೇಶದಲ್ಲಿ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು ಕುಸಿಯುತ್ತಿದೆ ಎಂಬುದನ್ನು ‘ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮ’ (ಎನ್‌ಸಿಎಪಿ) ವರದಿ ಮತ್ತೊಮ್ಮೆ ಒತ್ತಿ ಹೇಳಿದೆ. 10 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ನಗರಗಳ ಪೈಕಿ ಇಂದೋರ್ ಉತ್ತಮ ಶುದ್ಧ ಗಾಳಿ ಹೊಂದಿರುವ ನಗರವಾಗಿದ್ದು, ಅಗ್ರ ಸ್ಥಾನ ಪಡೆದುಕೊಂಡಿದೆ. ನಮ್ಮ ರಾಜಧಾನಿ ಬೆಂಗಳೂರು 36ನೇ ಸ್ಥಾನಕ್ಕೆ ಕುಸಿದಿದೆ.

- Advertisement -

ಪ್ರತಿ ವರ್ಷವು ಎನ್‌ಸಿಎಪಿ ದೇಶದ ಹಲವಾರು ನಗರಗಳ ಗಾಳಿಯ ಗುಣಮಟ್ಟವನ್ನು ಪರಿಶೀಲಿಸುತ್ತದೆ. ಈ ಪರಿಶೀಲನೆಗಾಗಿ ನಗರಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿಕೊಂಡಿದೆ. ಒಂದು) 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳು; ಎರಡು) 3-10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳು ಹಾಗೂ ಮೂರು) 3 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪಟ್ಟಣಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ 47 ನಗರಗಳನ್ನು ಎನ್‌ಸಿಎಪಿ ಮೊದಲ ವಿಭಾಗದಲ್ಲಿ ಪಟ್ಟಿ ಮಾಡಿದೆ. ಈ ನಗರಗಳ ಪೈಕಿ, ಮಾಯುಮಾಲಿನ್ಯ ತಡೆಗೆ ಭಾರೀ ಪ್ರಯತ್ನಗಳು ಮತ್ತು ಕ್ರಮಗಳನ್ನು ಜಾರಿಗೊಳಿಸಿದ್ದ ಇಂದೋರ್, ಶುದ್ಧ ಗಾಳಿ ಹೊಂದಿರುವ ನಗರವಾಗಿ ಅಗ್ರ ಸ್ಥಾನ ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಮಧ್ಯಪ್ರದೇಶದ ಜಬಲ್‌ಪುರ ಹಾಗೂ ಮೂರನೇ ಸ್ಥಾನದಲ್ಲಿ ಉತ್ತರ ಪ್ರದೇಶದ ಆಗ್ರಾ ಮತ್ತು ಗುಜರಾತ್‌ ಸೂರನ್ ಸ್ಥಾನ ಪಡೆದುಕೊಂಡಿವೆ. 2023ರಲ್ಲಿ 31ನೇ ಸ್ಥಾನದಲ್ಲಿದ್ದ ಬೆಂಗಳೂರು ಈ ವರ್ಷ 36ನೇ ಸ್ಥಾನಕ್ಕೆ ಕುಸಿದಿದೆ.

ಈ ಲೇಖನ ಓದಿದ್ದೀರಾ?: ‘ಆಳಂದ’ ಕ್ಷೇತ್ರದಲ್ಲಿ ಭಾರೀ ಮತ ಕಳ್ಳತನ; ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

3–10 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನಗರಗಳ ವಿಭಾಗದಲ್ಲಿ ಮಹಾರಾಷ್ಟ್ರದ ಅಮರಾವತಿ ಮೊದಲ ಸ್ಥಾನ, ಉತ್ತರ ಪ್ರದೇಶದ ಝಾನ್ಸಿ ಮತ್ತು ಮೊರಾದಾಬಾದ್ ಎರಡನೇ ಸ್ಥಾನ ಹಾಗೂ ರಾಜಸ್ಥಾನದ ಅಲ್ವರ್ ಮೂರನೇ ಸ್ಥಾನ ಪಡೆದುಕೊಂಡಿವೆ.

ಇನ್ನು, 3 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂಗಿರುವ ನಗರಗಳ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಮಧ್ಯಪ್ರದೇಶದ ದೇವಾಸ್, ಎರಡನೇ ಸ್ಥಾನವನ್ನು ಹಿಮಾಚಲ ಪ್ರದೇಶದ ಪರ್ವಾನೋ ಹಾಗೂ ಮೂರನೇ ಸ್ಥಾನವನ್ನು ಒಡಿಶಾದ ಅನುಗುಲ್ ಪಡೆದುಕೊಂಡಿವೆ.

ಗಮನಾರ್ಹವೆಂದರೆ, ಈ ಮೂರೂ ವಿಭಾಗಗಳಲ್ಲಿಯೂ ಕರ್ನಾಟಕದ ಯಾವುದೇ ನಗರ/ಪಟ್ಟಣವು ಶುದ್ಧ ಗಾಳಿ ಹೊಂದಿರುವ ಮೊದಲ 10 ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಕಲವು ನಗರಗಳು ಕೈಗಾರಿಕಾ ಕೇಂದ್ರಗಳಾಗಿವೆ. ಕಲ್ಲಿದ್ದಲು ಗಣಿಗಾರಿಕೆಯನ್ನೂ ಹೊಂದಿವೆ. ಆದರೂ, ವಾಯುಮಾಲಿನ್ಯವನ್ನು ತಡೆಯುವಲ್ಲಿ ಸಫಲವಾಗಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...