ಒಂದೇ ರನ್‌ವೇಯಲ್ಲಿ ಎರಡು ವಿಮಾನ ಟೇಕ್‌ ಆಫ್‌, ಲ್ಯಾಂಡಿಂಗ್; ತಪ್ಪಿದ ಅವಘಡ

Date:

ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆಗುತ್ತಿದ್ದ ಅದೇ ರನ್‌ವೇಯಲ್ಲಿ ಇಂಡಿಗೋ ವಿಮಾನವು ಲ್ಯಾಂಡಿಂಗ್ ಆಗಿದ್ದು ಕ್ಷಣ ಮಾತ್ರದಲ್ಲಿ ಅವಘಡ ತಪ್ಪಿದೆ. ನೂರಾರು ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಒಳಗಾಗಿದ್ದರು.

- Advertisement -

ಒಂದೇ ಕ್ಷಣದಲ್ಲಿ ಒಂದೇ ರನ್‌ವೇಯಲ್ಲಿ ಎರಡು ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕ್‌ ಆಫ್‌ಗೆ ಅನುಮತಿ ನೀಡಿದ ವಿಚಾರದಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು ತನಿಖೆಯನ್ನು ಪ್ರಾರಂಭಿಸಿದೆ. ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ಹುದ್ದೆಯಿಂದ ಕೆಳಗಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಎರಡೂ ವಿಮಾನಗಳು ಒಂದೇ ರನ್‌ವೇಯಲ್ಲಿ ಕಾಣಿಸಿಕೊಂಡಿವೆ. ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಇಂಡಿಗೋ ವಿಮಾನ ಲ್ಯಾಂಡಿಂಗ್ ಆಗಿದೆ. ಇಂಡಿಗೋ ವಿಮಾನ ಇಂದೋರ್‌ನಿಂದ ಮುಂಬೈಗೆ ಬಂದಿಳಿದಿದ್ದು, ಏರ್ ಇಂಡಿಯಾ ವಿಮಾನವು ಕೇರಳದ ತಿರುವನಂತಪುರಕ್ಕೆ ಹಾರಿದೆ.

ಇದನ್ನು ಓದಿದ್ದೀರಾ?  8 ಗಂಟೆಗಳ ಕಾಲ ತಡವಾದ ಏರ್ ಇಂಡಿಯಾ ವಿಮಾನ: ಎಸಿ ಇಲ್ಲದೆ ಪ್ರಯಾಣಿಕರು ಮೂರ್ಛೆ

ಇಂದೋರ್-ಮುಂಬೈ ವಿಮಾನದ ಪೈಲಟ್ ಎಟಿಸಿಯ (ಏರ್ ಟ್ರಾಫಿಕ್ ಕಂಟ್ರೋಲ್‌) ಸೂಚನೆಗಳನ್ನು ಅನುಸರಿಸಿದ್ದಾರೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಕೂಡ ಎಟಿಸಿ ತನ್ನ ವಿಮಾನವನ್ನು ಟೇಕ್-ಆಫ್ ಮಾಡಲು ಅನುಮತಿ ನೀಡಿದೆ ಎಂದು ಹೇಳಿದೆ.

“ಜೂನ್ 8ರಂದು ಇಂದೋರ್‌ನಿಂದ ಇಂಡಿಗೋ ಫ್ಲೈಟ್‌ಗೆ 6E 6053 ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಎಟಿಸಿಯ ಲ್ಯಾಂಡ್ ಕ್ಲಿಯರೆನ್ಸ್ ಲಭ್ಯವಾಗಿದೆ. ಪೈಲಟ್ ಇನ್ ಕಮಾಂಡ್ ಲ್ಯಾಂಡಿಂಗ್ ಸೂಚನೆ ನೀಡಿದ್ದು ಅದನ್ನು ನಾವು ಅನುಸರಿಸಿದ್ದೇವೆ. ಇಂಡಿಗೋದಲ್ಲಿ ಪ್ರಯಾಣಿಕರ ಸುರಕ್ಷತೆ ನಮಗೆ ಅತ್ಯುನ್ನತವಾಗಿದೆ. ಈ ಲ್ಯಾಂಡಿಂಗ್ ಬಗ್ಗೆ ನಾವು ರಿಪೋರ್ಟ್ ಮಾಡಿದ್ದೇವೆ” ಎಂದು ಇಂಡಿಗೋ ತಿಳಿಸಿದೆ.

ಇದನ್ನು ಓದಿದ್ದೀರಾ?  ಕೆನಡಾ | ಟೇಕಾಫ್ ಆಗುತ್ತಿದ್ದಂತೆಯೇ 389 ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ವಿಡಿಯೋ ವೈರಲ್

“ಮುಂಬೈನಿಂದ ತಿರುವನಂತಪುರಕ್ಕೆ AI657 ಜೂನ್ 8ರಂದು ಟೇಕ್-ಆಫ್ ಆಗಲು ಸಿದ್ಧವಾಗಿತ್ತು. ಏರ್ ಇಂಡಿಯಾ ವಿಮಾನ ರನ್‌ವೇಗೆ ಪ್ರವೇಶಿಸಲು ಏರ್ ಟ್ರಾಫಿಕ್ ಕಂಟ್ರೋಲ್‌ ಅನುಮತಿ ನೀಡಿದೆ. ಅದಾದ ಬಳಿಕ ವಿಮಾನವನ್ನು ಟೇಕ್-ಆಫ್ ಮಾಡಲಾಗಿದೆ. ಕ್ಲಿಯರೆನ್ಸ್ ಬಗ್ಗೆ ಅಧಿಕಾರಿಗಳು ನಿಗದಿಪಡಿಸಿದ ಕಾರ್ಯವಿಧಾನಗಳಿಗೆ ಅನುಗುಣವಾಗಿ ತನಿಖೆಯನ್ನು ಪ್ರಾರಂಭಿಸಿದ್ದಾರೆ” ಎಂದು ಏರ್‌ಇಂಡಿಯಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...