ಉತ್ತರಾಖಂಡದಲ್ಲಿ ಮುಂದುವರಿದ ಮೇಘಸ್ಫೋಟ, ಇಂದು ಬೆಳಿಗ್ಗೆ ಏಳು ಜನರು ಕಾಣೆ

Date:

ಉತ್ತರಾಖಂಡದಲ್ಲಿ ಮೇಘಸ್ಫೋಟ ಮುಂದುವರಿದ್ದು, ಚಮೋಲಿ ಜಿಲ್ಲೆಯ ನಂದನಗರದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಉಂಟಾಗಿ ಮನೆಗಳು ಕುಸಿದಿದ್ದು, ಕನಿಷ್ಠ ಏಳು ಜನರು ಕಾಣೆಯಾಗಿದ್ದಾರೆ.

- Advertisement -

ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ ಆರು ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭೂಕುಸಿತ ಸಂಭವಿಸಿದ ಸಮಯದಲ್ಲಿ ಏಳು ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು, ವೈದ್ಯಕೀಯ ತಂಡ ಮತ್ತು ಮೂರು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮೋಖ್ ನದಿಯಲ್ಲಿನ ಪ್ರವಾಹವು ನಂದನಗರ ಪ್ರದೇಶದ ಧುರ್ಮಾ ಗ್ರಾಮದಲ್ಲಿ ಆರು ಮನೆಗಳನ್ನು ನಾಶಪಡಿಸಿದೆ.

ಉತ್ತರಾಖಂಡದಲ್ಲಿ ಅದರಲ್ಲೂ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸುರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ, ಈವರೆಗೂ ಬುಧವಾರದ ವರದಿ ಆಧರಿಸಿ 17 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ವರದಿಯಾಗಿದೆ.

ಸೋಮವಾರ ರಾತ್ರಿಯಿಂದಲೇ ಪ್ರಾರಂಭವಾದ ಸರಣಿ ಮೇಘ ಸ್ಫೋಟಗಳು ಮತ್ತು ನಿರಂತರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಹರಿಯುತ್ತಿವೆ.

25 ರಿಂದ 30 ಸ್ಥಳಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಮನೆಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಸರ್ಕಾರಿ ಆಸ್ತಿಪಾಸ್ತಿಗಳು ಸಹ ಹಾನಿಗೀಡಾಗಿದ್ದು, ಅನೇಕ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿ ನಿರ್ವಹಣೆಗೆ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...