ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ‘ಉಪ ಪ್ರಧಾನಿ’ ಪಟ್ಟ; ಆರ್‌ಎಸ್‌ಎಸ್‌ ಒತ್ತಡ

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಸಂಪುಟಗಳಲ್ಲಿ ಹಿರಿಯ ನಾಯಕರ ಪ್ರಾಬಲ್ಯ ಹೆಚ್ಚಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ, ಬಿಜೆಪಿ ನೇತೃತ್ವದ ಸರ್ಕಾರಗಳಲ್ಲಿ ಹಿರಿಯರು ಮತ್ತು ಯುವ ನಾಯಕರ ನಡುವೆ ಸಮತೋಲನ ತರಬೇಕು. ಯುವಜನರಿಗೆ ಹೆಚ್ಚು ಸ್ಥಾನಗಳನ್ನು ನೀಡಬೇಕು ಎಂದು ಬಿಜೆಪಿ ಮೇಲೆ ಆರ್‌ಎಸ್‌ಎಸ್‌ ಒತ್ತಡ ಹೇರುತ್ತಿದೆ. ಅದಕ್ಕಾಗಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಉಪ ಪ್ರಧಾನಮಂತ್ರಿಯಾಗಿ ನೇಮಿಸಲು ಆರ್‌ಎಸ್‌ಎಸ್‌ ಉತ್ಸಾಹ ತೋರಿದೆ ಎಂದು ತಿಳಿದುಬಂದಿದೆ.

- Advertisement -

‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ನಡೆದ ಬೃಹತ್ ಜೆನ್‌-ಝೀ ಹೋರಾಟದ ಬಳಿಕ ಎಲ್ಲ ಪಕ್ಷಗಳು ತಮ್ಮ ಚಟುವಟಿಕೆಗಳನ್ನು ಯುವಜನರ ಮೇಲೆ ಹೆಚ್ಚು ಕೇಂದ್ರೀಕರಿಸುತ್ತಿವೆ. ಇದೀಗ, ಆಡಳಿತ/ಅಧಿಕಾರದ ಹಂತದಲ್ಲೂ ಯುವಜನರನ್ನು ಒಳಗೊಳ್ಳಲು ಆರ್‌ಎಸ್‌ಎಸ್‌ ತಂತ್ರ ಹೆಣೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ನಾಯಕರು ಸರ್ಕಾರದಲ್ಲಿ ಪ್ರಮುಖ ಸ್ಥಾನಗಳನ್ನು ಹೊಂದಿದ್ದಾರೆ. ಆದರೆ, ಮುಂದಿನ ಪೀಳಿಗೆಯ ನಾಯಕರಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಅಧಿಕಾರ ಹಂಚಿಕೆಯಲ್ಲಿ ಸಮತೋಲನ ತರಬೇಕು ಎಂದು ಸಂಘ ಹೇಳುತ್ತಿದೆ. ಆದಾಗ್ಯೂ, ಯುವಜನರ ಪ್ರತಿಭಟನೆ ಮತ್ತು ಒಳಗೊಳ್ಳುವಿಕೆ ವಿಚಾರದಲ್ಲಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸರ್ಕಾರಗಳ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿವೆ ಎಂಬ ವರದಿಗಳಿವೆ.

ದೆಹಲಿಯಲ್ಲಿ ವಿದ್ಯಾರ್ಥಿ/ಯುವಜನರ ಮೇಲಿನ ದೌರ್ಜನ್ಯದಿಂದಾಗಿ ಬಿಜೆಪಿಯಿಂದ ದೂರ ಸರಿದಿರುವ ಯುವಜನರನ್ನು ಸೆಳೆಯಲು ಮತ್ತು ಯುವಜನರು-ಬಿಜೆಪಿ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಉಪ ಪ್ರಧಾನಮಂತ್ರಿ ಸ್ಥಾನಕ್ಕೆ ಏರಿಸುವ ಪ್ರಸ್ತಾಪವನ್ನೂ ಆರ್‌ಎಸ್‌ಎಸ್‌ ತಂದಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಫಡ್ನವೀಸ್‌ ಅವರ ಆಯ್ಕೆಯಲ್ಲಿ ಸರ್ಕಾರದ ನಿರ್ಧಾರಗಳ ಮೇಲೆ ಸಂಘದ ಪ್ರಭಾವವನ್ನು ಹೆಚ್ಚಿಸುವ ಉದ್ದೇಶವೂ ಇದೆ ಎಂದು ವಿಶ್ಲೇಷಿಸಲಾಗಿದೆ. ಆದರೆ, ಈ ಕುರಿತು ಬಿಜೆಪಿ ಅಥವಾ ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಇನ್ನೂ ಹೊರಬಂದಿಲ್ಲ.

ಈ ಲೇಖನ ಓದಿದ್ದೀರಾ?: ನೈಸ್ ರಸ್ತೆಯ ಟಾಕ್ಸಿಕ್ ಮನರಂಜನೆ

ಇದೆಲ್ಲದರ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯುವಜನರ ನಡುವೆ ಭಾರೀ ಚರ್ಚೆಗಳನ್ನು ನೆಸುತ್ತಿದ್ದಾರೆ. ಸೆಪ್ಟೆಂಬರ್ 2ರಿಂದ ನಾಸಿಕ್‌ನಲ್ಲಿ 10 ದಿನಗಳ ಕಾಲ ನಡೆಯಲಿರುವ ಮಹಾರಾಷ್ಟ್ರ ಕಾಂಗ್ರೆಸ್‌ನ ಜಿಲ್ಲಾ ಅಧ್ಯಕ್ಷರ ಹತ್ತು ದಿನಗಳ ಕಾರ್ಯಾಗಾರದಲ್ಲಿಯೂ ಯುವಜನರನ್ನು ಒಳಗೊಳ್ಳುವ ಕುರಿತು ಅವರು ಮಾತನಾಡಲಿದ್ದಾರೆ.

ವಿಶೇಷವಾಗಿ, ಮಹಾರಾಷ್ಟ್ರದಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಪ್ರಚಾರ-ಪ್ರಭಾವವನ್ನು ಎದುರಿಸಲು ಅಗತ್ಯವಾದ ರಾಜಕೀಯ, ಸೈದ್ಧಾಂತಿಕ ಹಾಗೂ ಸಾಮಾಜಿಕ ವಿಚಾರಗಳ ಕುರಿತು ತರಬೇತಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...