ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತ ಚಾಚಿದ ಸಿಎಂ ಸಿದ್ದರಾಮಯ್ಯ

Date:

Advertisements

ಮುಂಗಾರು ಮಳೆ​ ಅಬ್ಬರ ಹಿಮಾಚಲ ಪ್ರದೇಶದಲ್ಲಿ ಇನ್ನೂ ನಿಂತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ, ಮೇಘಸ್ಫೋಟಗಳಿಂದ ಭೂ ಕುಸಿತ, ಪ್ರವಾಹ ಉಂಟಾಗಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುವ ಮೂಲಕ ಜನ ಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಮಳೆ ಮತ್ತು ಪ್ರವಾಹದಿಂದ ನಲುಗಿರುವ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಮಾಚಲ ಮುಖ್ಯಮಂತ್ರಿ ಸುಖವಿಂದ‌ರ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ. ಅಪಾರ ಆಸ್ತಿ ಹಾನಿ ಸಂಭವಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕದ ಜನರು ನಿಮ್ಮೊಂದಿಗೆ (ಹಿಮಾಚಲದ ಜನರೊಂದಿಗೆ) ನಿಲ್ಲುತ್ತಾರೆ. ಬೆಂಬಲದ ಸಂಕೇತವಾಗಿ, ನಮ್ಮ ಸರ್ಕಾರ ವಿಪತ್ತು ಪರಿಹಾರ ಮತ್ತು ಪುನರ್ವಸತಿಗಾಗಿ ₹5 ಕೋಟಿ ನೆರವು ನೀಡಿದೆ ಎಂದು ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಹಿಮಾಚಲ ಪ್ರದೇಶಕ್ಕೆ ಜೂನ್​ 20ರಿಂದ ಪ್ರವೇಶಿಸಿದ ಮಾನ್ಸೂನ್​ ಮಳೆಗೆ ಇಲ್ಲಿಯವರೆಗೆ ಅಂದರೆ, ಸೆಪ್ಟೆಂಬರ್​ 1ರ ವರೆಗೆ ಉಂಟಾದ ಹಾನಿ ₹3158.04. ಕೋಟಿಯಾಗಿದೆ.

ಹಿಮಾಚಲದಲ್ಲಿ ಮಳೆ ಈ ಬಾರಿ ದೊಡ್ಡ ಪ್ರಮಾದ ಉಂಟುಮಾಡಿದ್ದು, ಭೂ ಕುಸಿತ, ಪ್ರವಾಹದಿಂದ ಜೂನ್ 20ರಿಂದ ಸೆಪ್ಟೆಂಬರ್​ 1ರ ವರೆಗೆ 362 ಮಂದಿ ಸಾವನ್ನಪ್ಪಿದ್ದರೆ, 41 ಮಂದಿ ಕಣ್ಮರೆಯಾಗಿದ್ದು, 385 ಮಂದಿ ಗಾಯಗೊಂಡಿದ್ದಾರೆ. ಮೇಘಸ್ಫೋಟ ಮತ್ತು ಪ್ರವಾಹದಿಂದ 4,196 ಮನೆಗಳಿಗೆ ಹಾನಿಯಾಗಿದೆ. 861 ಕಚ್ಚಾ ಮತ್ತು ಪಕ್ಕಾ ಮನೆಗಳು ಹಾನಿಗೊಂಡಿದ್ದು, 3,335 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರ ಹೊರತಾಗಿ 3,813 ಕೊಟ್ಟಿಗೆಗಳು ಹಾನಿಗೊಂಡಿದ್ದು, 471 ಅಂಗಡಿ ಮತ್ತು ಫ್ಯಾಕ್ಟರಿಗಳು ಹಾಳಾಗಿವೆ.

ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ, ಭೂ ಕುಸಿತದಿಂದಾಗಿ ಲೋಕೋಪಯೋಗಿ ಇಲಾಖೆ ₹1776.12 ಕೋಟಿ ಹಾನಿ ಅನುಭವಿಸಿದೆ. ಇಲ್ಲಿಯವರೆಗೆ ರಾಜ್ಯದ ₹1,281 ರಸ್ತೆಗಳು ಬಂದ್​ ಆಗಿದ್ದು, ಇದರಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳಿವೆ. ಕುಡಿಯುವ ನೀರಿನ ಯೋಜನೆ ಹಾನಿಗೊಂಡ ಪರಿಣಾಮ ಜಲ ಶಕ್ತಿ ಇಲಾಖೆ ಕೂಡ ₹1101.11 ಕೋಟಿ ಮಷ್ಟ ಅನುಭವಿಸಿದೆ. ಇಲ್ಲಿಯವರೆಗೆ 790 ಕುಡಿಯುವ ನೀರಿನ ಯೋಜನೆಗೆ ಅಡ್ಡಿಯಾಗಿದೆ. ಇದರ ಹೊರತಾಗಿ ₹11.45 ಕೋಟಿ ಬೆಳೆ ನಷ್ಟವಾಗಿದ್ದು, ತೋಟಗಾರಿಕೆ ₹27.43 ಕೋಟಿ ನಷ್ಟ ಕಂಡಿದೆ. ವಿದ್ಯುತ್​ ಮಂಡಳಿ ₹139.46 ಕೋಟಿ ನಷ್ಟ ಅನುಭವಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X