ರಾಜ್ಯಪಾಲರ ಸ್ವಾತಂತ್ರ್ಯ ದಿನಾಚರಣೆಗೆ ಸಿಎಂ ಸ್ಟಾಲಿನ್ ಬಹಿಷ್ಕಾರ

Date:

ಆಗಸ್ಟ್‌ 15ರ ಸಂಜೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿಯೂ ರಾಜ್ಯಪಾಲರ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಅಂತೆಯೇ, ತಮಿಳುನಾಡು ರಾಜ್ಯಪಾಲರ ಕಚೇರಿಯಲ್ಲಿಯೂ ಕಾರ್ಯಕ್ರಮ ನಡೆಯಲಿದ್ದು, ಆ ಕಾರ್ಯಕ್ರಮವನ್ನು ಬಹಿಷ್ಕರಸಲು ತಮಿಳು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ಧರಿಸಿದ್ದಾರೆ.

- Advertisement -

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ತಮಿಳುನಾಡು ವಿರೋಧಿ ಧೋರಣೆ ಹೊಂದಿದ್ದಾರೆ. ಅದರಂತೆಯೇ ನಡೆದುಕೊಳ್ಳುತ್ತಿದ್ದಾರೆ ಎಂದು ಆಡಳಿತಾರೂಢ ಡಿಎಂಕೆ ನಿರಂತರವಾಗಿ ಆರೋಪಿಸುತ್ತಲೇ ಇದೆ. ಅದೇ ಕಾರಣಕ್ಕಾಗಿ, ರಾಜ್ಯಪಾಲರ ಕಚೇರಿಯ ಬಳಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಸ್ಟಾಲಿನ್ ಬಹಿಷ್ಕರಿಸುತ್ತಿದ್ದಾರೆ. ಇದು, ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ತೀವ್ರತೆಯನ್ನು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರದ ನಡುವಿನ ಬಿಕ್ಕಟ್ಟು ಆರಂಭವಾಗಿದ್ದು, ದಿ. ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಗೌರವಾರ್ಥವಾಗಿ ಕಲೈನಾರ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ಆದರೆ, ಆ ಮಸೂದೆಗೆ ಸಹಿ ಹಾಕದ ರಾಜ್ಯಪಾಲ ರವಿ ಅವರು ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅಂಗೀಕಾರ ಪಡೆಯಲು ಉಲ್ಲೇಖಿಸಿದ್ದರು. ಇದನ್ನು, ಡಿಎಂಕೆ ಸರ್ಕಾರವು ರಾಜ್ಯಪಾಲರ ನಡೆ ವಿಳಂಬ ಧೋರಣೆ ಮತ್ತು ರಾಜ್ಯದ ಶಾಸಕಾಂಗ ಅಧಿಕಾರವನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಕೃತ್ಯವೆಂದು ಟೀಕಿಸಿತ್ತು.

ಮಾತ್ರವಲ್ಲದೆ, ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮಸೂದೆಗಳ ಅಂಗೀಕಾರಕ್ಕೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಮೂರು ತಿಂಗಳ ಸಮಯದ ಗಡುವು ವಿಧಿಸಿತ್ತು.

ಈ ಲೇಖನ ಓದಿದ್ದೀರಾ?: ಕ್ಯೂಬಾ ಕ್ರಾಂತಿಯ ಕಿಡಿ, ಬಂಡವಾಳಿಗರ ದುಸ್ವಪ್ನ ಫಿಡೆಲ್ ಕ್ಯಾಸ್ಟ್ರೋ

ಇನ್ನು, ಇತ್ತೀಚಿನ ಅಂಶವಾಗಿ, ರಾಜ್ಯಪಾಲ ರವಿ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಸಾಧನೆಗಳನ್ನು ವ್ಯಾಪಕವಾಗಿ ಶ್ಲಾಘಿಸಿದ್ದಾರೆ. ಆದರೆ, ತಮಿಳುನಾಡು ಸರ್ಕಾರ ಅಥವಾ ಸ್ಟಾಲಿನ್ ಬಗ್ಗೆ ಯಾವುದೇ ಸಕಾರಾತ್ಮಕ ಅಂಶಗಳನ್ನು ಉಲ್ಲೇಖಿಸಿಲ್ಲ ಎಂಬುದು ಕಂಡುಬಂದಿದೆ.

ಈ ಎಲ್ಲ ಕಾರಣಗಳಿಗಾಗಿ, ಮುಖ್ಯಮಂತ್ರಿ ಸ್ಟಾಲಿನ್ ಅವರು ರಾಜ್ಯಪಾಲರ ಕಚೇರಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗದೆ, ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಆದಾಗ್ಯೂ, ಸ್ಟಾಲಿನ್ ಅವರ ಬಹಿಷ್ಕಾರ ನಿರ್ಧಾರದ ಕುರಿತು ರಾಜ್ಯಪಾಲರ ಕಚೇರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...