ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

Date:

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ನಾಯಕ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣಾ ಹಾಗೂ ಅಳಿಯ ಪಿ.ಎ. ಮೊಹಮ್ಮದ್ ರಿಯಾಸ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

- Advertisement -

​ವಕೀಲ ಕೆ.ಎಂ. ಶಾಜಹಾನ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ. ಬದರುದ್ದೀನ್ ಅವರಿದ್ದ ಪೀಠವು ಈ ಮಹತ್ವದ ನಿರ್ದೇಶನ ನೀಡಿದೆ. ಈ ಹಿಂದೆ ಅರ್ಜಿದಾರರು ಇದೇ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ರಾಜ್ಯ ಪೊಲೀಸ್ ಮುಖ್ಯಸ್ಥರು ಹಾಗೂ ವಿಜಿಲೆನ್ಸ್ ನಿರ್ದೇಶಕರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

​ಪಿಣರಾಯಿ ವಿಜಯನ್ ಅವರು ಉದ್ದೇಶಪೂರ್ವಕವಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಮತ್ತು ಪುತ್ರಿ ಟಿ. ವೀಣಾ ಹಾಗೂ ಅಳಿಯ ಮೊಹಮ್ಮದ್ ರಿಯಾಸ್ ಅಕ್ರಮ ಹಣ ವರ್ಗಾವಣೆಯಲ್ಲಿ (ಮನಿ ಲಾಂಡರಿಂಗ್) ತೊಡಗಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಜೊತೆಗೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಇವರಿಗೆ ಕುಮ್ಮಕ್ಕು ನೀಡಿದ ದೂರಿನ ಕುರಿತು ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು.

​ಈ ತಿಂಗಳ ಆರಂಭದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೀಡಿದ್ದ ಮಾಹಿತಿಯನ್ನು ಪರಿಶೀಲಿಸಿದ್ದ ಹೈಕೋರ್ಟ್, ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆ ನಡೆಸಬೇಕೆಂಬ ನಿಯಮವನ್ನು ಪ್ರಕರಣದ ಆಧಾರದ ಮೇಲೆ ವಿಶ್ಲೇಷಿಸಬೇಕು ಎಂದು ಹೇಳಿತ್ತು. ಭ್ರಷ್ಟಾಚಾರದ ಆರೋಪಗಳಲ್ಲಿ ‘ಇಡಿ’ ನೀಡುವ ವರದಿಯು, ಪ್ರಾಥಮಿಕ ತನಿಖೆಗೆ ಅಧಿಕೃತ ಪರ್ಯಾಯವಾಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

​ರಾಜ್ಯ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಫಲರಾದಾಗ ಇಡಿ ಏಕೆ ಅದನ್ನು ಪ್ರಶ್ನಿಸಲಿಲ್ಲ ಎಂದು ಇದೇ ವೇಳೆ ನ್ಯಾಯಾಲಯವು ಖಾರವಾಗಿ ಪ್ರಶ್ನಿಸಿತು. ಕೇವಲ ಕೇಸ್ ಡೈರಿ ಮಾತ್ರ ನೀಡಲಾಗಿದೆಯೇ ಅಥವಾ ಸಾಕ್ಷಿಗಳ ಹೇಳಿಕೆಗಳನ್ನೂ ಒದಗಿಸಲಾಗಿದೆಯೇ ಎಂದು ಕೇಳಿದ ಹೈಕೋರ್ಟ್‌ಗೆ, ಅಗತ್ಯವಿದ್ದರೆ ಸಾಕ್ಷಿಗಳ ಹೇಳಿಕೆಗಳನ್ನು ಹಾಜರುಪಡಿಸುವುದಾಗಿ ಇಡಿ ಪರ ವಕೀಲರು ಉತ್ತರಿಸಿದರು.

​ಟಿ. ವೀಣಾ ಅವರ ಎಕ್ಸಾಲಾಜಿಕ್ ಕಂಪನಿಯ ಅಕ್ರಮ ಹಣ ವರ್ಗಾವಣೆ ತನಿಖೆ ವೇಳೆ ರಾಜ್ಯ ಪೊಲೀಸರು ತನಿಖೆ ಮಾಡಬೇಕಾದ ಕೆಲವೊಂದು ಪ್ರಮುಖ ಅಪರಾಧಗಳ (ಪ್ರೆಡಿಕೇಟ್ ಅಫೆನ್ಸ್) ಸುಳಿವು ಸಿಕ್ಕಿತ್ತು. ಆ ಮಾಹಿತಿಯನ್ನು ರಾಜ್ಯ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿತ್ತು. ಹೀಗಾಗಿ, ಪ್ರಾಥಮಿಕ ತನಿಖೆಯ ಅಗತ್ಯವಿಲ್ಲದೆ ಪೊಲೀಸರು ಕೂಡಲೇ ಎಫ್‌ಐಆರ್ ದಾಖಲಿಸಬೇಕಿತ್ತು ಎಂದು ಇಡಿ ವಾದ ಮಂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...

ಭಾರತೀಯ ಐಟಿ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ ಸಂಕಷ್ಟ; TCS, Wipro ಸೇರಿ ಹಲವು ಕಂಪನಿಗಳಿಗೆ ಅಮೆರಿಕ ನಿರ್ಬಂಧ

ಭಾರತೀಯ ಐಟಿ ವೃತ್ತಿಪರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಸರ್ಕಾರ TCS,...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ; ಮೋದಿ ಸರ್ಕಾರಕ್ಕೆ ಕೇರಳದ ಪೆಟ್ಟು

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...