ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

Date:

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ ನಡುವಿನ ಅಕ್ರಮ ಹಣಕಾಸು ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ಸುಪ್ರೀಂ ಕೋರ್ಟ್ ಬುಧವಾರ ಏಳು ದಿನಗಳ ತಡೆಯಾಜ್ಞೆ ನೀಡಿದೆ.

- Advertisement -

​ವಿಜಯನ್ ಅವರಲ್ಲದೆ ಅವರ ಪುತ್ರಿ ವೀಣಾ ಟಿ. ಮತ್ತು ಅಳಿಯ ಹಾಗೂ ಮಾಜಿ ಸಚಿವ ಮುಹಮ್ಮದ್ ರಿಯಾಸ್ ವಿರುದ್ಧವೂ ಕೇರಳದ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ (VACB) ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಗ್ಚಿ ಮತ್ತು ವಿ. ಮೋಹನಾ ಅವರಿದ್ದ ರಜಾಕಾಲದ ಪೀಠವು, ಅರ್ಜಿದಾರರು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಹಾಗೂ ಕಾನೂನಿನ ಪ್ರಕಾರ ಮಧ್ಯಂತರ ರಿಲೀಫ್ ಪಡೆಯಲು ಅನುಕೂಲವಾಗುವಂತೆ ತನಿಖೆಗೆ ಈ ತಾತ್ಕಾಲಿಕ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

​”ನಾವು ಹೈಕೋರ್ಟ್ ಆದೇಶವನ್ನು ಬದಿಗೊತ್ತಿ, ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡುತ್ತಿದ್ದೇವೆ. ಅಲ್ಲಿಯವರೆಗೆ ಎಫ್‌ಐಆರ್ ಕುರಿತ ಮುಂದಿನ ತನಿಖೆಯನ್ನು 7 ದಿನಗಳ ಮಟ್ಟಿಗೆ ತಡೆಹಿಡಿಯಲಾಗಿದೆ” ಎಂದು ಸುಪ್ರೀಂ ಕೋರ್ಟ್ ಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪಿಣರಾಯಿ ವಿಜಯನ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಪುತ್ರಿ ವೀಣಾ ಒಡೆತನದ ಐಟಿ ಕಂಪನಿ ‘ಎಕ್ಸಾಲಾಜಿಕ್ ಸಲ್ಯೂಷನ್ಸ್’ಗೆ ಕೊಚ್ಚಿ ಮೂಲದ ಸಿಎಂಆರ್‌ಎಲ್ ಕಂಪನಿಯು ‘ಸಲಹಾ ಶುಲ್ಕ’ದ ಹೆಸರಿನಲ್ಲಿ ₹3.28 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಾವತಿಸಿದೆ ಎಂಬ ಗಂಭೀರ ಆರೋಪವಿದೆ. ಈ ಕುರಿತು ಜಾರಿ ನಿರ್ದೇಶನಾಲಯ (ED) ನೀಡಿದ ವರದಿ ಹಾಗೂ ಶಿಫಾರಸಿನ ಆಧಾರದ ಮೇಲೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಕ್ಟೋಬರ್ 9 ರಂದು ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠವು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶಿಸಿತ್ತು.

​ಈ ಆದೇಶವನ್ನು ಪ್ರಶ್ನಿಸಿ ವಿಜಯನ್ ಮತ್ತು ಇತರರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿದ್ದರಾದರೂ, ಅದನ್ನು ವಜಾಗೊಳಿಸಲಾಗಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

​ಸುಪ್ರೀಂ ಕೋರ್ಟ್‌ನಲ್ಲಿ ವಿಜಯನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, “ಹೈಕೋರ್ಟ್ ಆದೇಶದಂತೆ ಇದೀಗ ಏಕಾಏಕಿ ಎಫ್‌ಐಆರ್ ದಾಖಲಾಗಿರುವುದರಿಂದ 82 ವರ್ಷದ ವಯೋವೃದ್ಧರಿಗೆ (ವಿಜಯನ್) ಬಂಧನದ ಭೀತಿ ಎದುರಾಗಿದೆ. ಅವರಿಗೆ ರಕ್ಷಣೆ ನೀಡಬೇಕು” ಎಂದು ವಾದಿಸಿದ್ದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್, ಕೇವಲ ಏಕಸದಸ್ಯ ಪೀಠದ ನಿರ್ದೇಶನದ ಮೇರೆಗೆ ತನಿಖೆ ಆರಂಭಿಸುವ ಪ್ರಕ್ರಿಯೆಯ ಬಗ್ಗೆ ತಾಂತ್ರಿಕ ಪ್ರಶ್ನೆಗಳನ್ನು ಎತ್ತಿ, ಪ್ರಕರಣವನ್ನು ಮರಳಿ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲು ಅರ್ಜಿದಾರರಿಗೆ ಕಾಲಾವಕಾಶ ಒದಗಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಯುವ ದಸರಾದಲ್ಲಿ ನಟ ರವಿಚಂದ್ರನ್‌ರ ಭಕ್ತಿ‌ಪ್ರಧಾನ ಗೀತೆ, ಸಾಧು ಕೋಕಿಲರ ಸಂಗೀತ ಸಂಜೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುವ ದಸರಾದಲ್ಲಿ ಯುವ ದಸರಾ ಕಾರ್ಯಕ್ರಮದ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...