ಮತ್ತೆ ದುಬಾರಿಯಾದ ಸಿಎನ್‌ಜಿ: ಯಾವೆಲ್ಲ ನಗರಗಳಲ್ಲಿ ಹೊಸ ದರ ಅನ್ವಯ?

Date:

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲದ (LNG) ವೆಚ್ಚ ಹೆಚ್ಚುತ್ತಿರುವ ನಡುವೆ ದೇಶದ ಪ್ರಮುಖ ನಗರಗಳಲ್ಲಿ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರದಲ್ಲಿ ಹೆಚ್ಚಳವಾಗಿದೆ. ಪ್ರಮುಖ ನಗರ ಅನಿಲ ವಿತರಣಾ ಸಂಸ್ಥೆಯಾದ ಇಂದಿರಾಗಾಂಧಿ ಗ್ಯಾಸ್ ಲಿಮಿಟೆಡ್ (IGL) ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ₹3.89 ರಷ್ಟು ಹೆಚ್ಚಿಸಿದೆ. ಪರಿಷ್ಕೃತ ನೂತನ ದರಗಳು ಶನಿವಾರ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿವೆ. ಆದರೆ ಕೆಲವು ನಗರಗಳಲ್ಲಿ ದರ ಸ್ಥಿರವಾಗಿದೆ.

- Advertisement -

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದಿಂದಾಗಿ ಹಡಗುಗಳ ಸಂಚಾರಕ್ಕೆ ಅಡಚಣೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಎಲ್‌ಎನ್‌ಜಿ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಹೀಗಾಗಿ ಅನಿಲ ಖರೀದಿ ವೆಚ್ಚ ಹೆಚ್ಚಾಗಿದ್ದು, ಆ ಹೊರೆಯನ್ನು ಸರಿದೂಗಿಸಲು ಸಂಸ್ಥೆಯು ಈ ದರ ಪರಿಷ್ಕರಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಐಜಿಎಲ್ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಕಚ್ಚಾ ತೈಲ ದರ ಕುಸಿತವಾದರೂ ಪೆಟ್ರೋಲ್, ಡಿಸೇಲ್ ಬೆಲೆ ಯಾಕೆ ಇಳಿಸಿಲ್ಲ: ಖರ್ಗೆ ಪ್ರಶ್ನೆ

ಈ ನಡುವೆ ಬೆಲೆ ಕಡಿಮೆಯಾದಾಗ ಗ್ರಾಹಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಿಲ್ಲ ಎಂಬ ಆರೋಪಗಳೂ ಇವೆ. ಸಂಘರ್ಷವು ಸುಮಾರು ಆರು ತಿಂಗಳಿನಿಂದ ಮುಂದುವರೆದಿದೆ. ಈಗ ಕಚ್ಚಾ ತೈಲದ ಬೆಲೆಗಳು ಬ್ಯಾರೆಲ್‌ಗೆ $90 ಕ್ಕಿಂತ ಹೆಚ್ಚಾಗಿದೆ. ಆದರೆ ಆರಂಭದಲ್ಲಿ ಪ್ರತಿ ಬ್ಯಾರೆಲ್‌ಗೆ $126ಕ್ಕೂ ಅಧಿಕವಾಗಿತ್ತು. ಆ ವೇಳೆ ದರ ಏರಿಕೆ ಮಾಡಿದ್ದು ಇನ್ನೂ ಕಡಿಮೆ ಮಾಡಲಾಗಿಲ್ಲ. ನಿರಂತರವಾಗಿ ದರ ಏರಿಸಲಾಗುತ್ತಿದೆ.

ಪ್ರಮುಖ ನಗರಗಳ ಇಂದಿನ ಪರಿಷ್ಕೃತ ಸಿಎನ್‌ಜಿ ದರಗಳು (ಪ್ರತಿ ಕೆಜಿಗೆ)

ನಗರದರ (₹)ಹೊಸ ದರ (₹)
ಬೆಂಗಳೂರು₹97.00-₹102.50₹97.00-₹102.50
ದೆಹಲಿ₹83.09₹86.98
ನೋಯ್ಡಾ ಮತ್ತು ಗಾಜಿಯಾಬಾದ್₹91.70₹95.59
ಗುರುಗ್ರಾಮ₹88.12₹92.01
ಮುಂಬೈ₹86.00₹86.00

ಇಂಧನ ದರ ಏರಿಕೆಯಿಂದಾಗಿ ಆಟೋ ರಿಕ್ಷಾ, ಟ್ಯಾಕ್ಸಿಗಳು, ಆಪ್ ಆಧಾರಿತ ಕ್ಯಾಬ್ ಸೇವೆಗಳು ಹಾಗೂ ವಾಣಿಜ್ಯ ಸರಕು ಸಾಗಣೆ ವಾಹನಗಳ ನಿರ್ವಹಣಾ ವೆಚ್ಚ ಅಧಿಕವಾಗಲಿದೆ. ಇದರಿಂದ ಸಾರ್ವಜನಿಕ ಸಾರಿಗೆ ದರ ಮತ್ತು ನಿತ್ಯಬಳಕೆಯ ವಸ್ತುಗಳ ಸಾಗಣೆ ವೆಚ್ಚ ಹೆಚ್ಚಾಗುವ ಆತಂಕ ಸಾರ್ವಜನಿಕರಲ್ಲಿ ಎದುರಾಗಿದೆ.

ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಸೇವೆ ಒದಗಿಸುತ್ತದೆ. ಬೆಂಗಳೂರಿನಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ಈ ಎರಡು ನಗರಗಳಲ್ಲಿ ಸಿಎನ್‌ಜಿ ಬೆಲೆ ಏರಿಕೆಯಾಗಿಲ್ಲ. ಬೆಂಗಳೂರಿನಲ್ಲಿ ಮಾರ್ಚ್-ಮೇ ಅವಧಿಯಲ್ಲಿ ಹಂತ-ಹಂತವಾಗಿ ದರ ಏರಿಕೆಯಾಗಿ ಈಗಾಗಲೇ ₹97.00 ರಿಂದ ₹102.50 ರಷ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...