ಚುನಾವಣೆ ಮುಗಿಯುತ್ತಿದ್ದಂತೆ ದೇಶದ ಹಲವೆಡೆ ಸಿಎನ್​ಜಿ ದರ ಏರಿಕೆ

Date:

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡೇ ದಿನಗಳ ನಂತರ, ಮುಂಬೈ ಮತ್ತು ಇತರ ಹಲವಾರು ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಕೆಜಿಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಮುಂಬೈ ಸೇರಿದಂತೆ ದೇಶದ ಹಲವೆಡೆ ಸಿಎನ್​ಜಿ ದರ ಏರಿಕೆ ಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಕಾರಣದಿಂದ ದೆಹಲಿಗೆ ವಿನಾಯಿತಿ ನೀಡಲಾಗಿದೆ.

- Advertisement -

ಸತತ ಎರಡನೇ ತಿಂಗಳಲ್ಲಿ ಕೂಡ ಅಗ್ಗದ ಗ್ಯಾಸ್ ಪೂರೈಕೆ ಕಡಿತಗೊಂಡ ಹಿನ್ನೆಲೆಯಲ್ಲಿ ಸಿಎನ್‌ಜಿ ಬೆಲೆ ಏರಿಕೆ ಮಾಡುವಂತೆ ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (ಐಜಿಎಲ್) ಮತ್ತು ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್‌ನ ಪ್ರಸ್ತಾಪವನ್ನು ಕೇಂದ್ರ ಮೊದಲು ತಳ್ಳಿ ಹಾಕಿತ್ತು. ಬೆಂಗಳೂರಿನಲ್ಲಿ ಸಿಎನ್​ಜಿ ದರ ಪ್ರತಿ ಕೆಜಿಗೆ 86.85 ರೂ.ನಷ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ನೋಯ್ಡಾ, ಗ್ರೇಟರ್ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಇತರ ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಹೆಚ್ಚಿಸಲಾಗಿದೆ. ಆದರೆ ದೆಹಲಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅಲ್ಲಿ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿರುವ ಕಾರಣ ಏರಿಕೆ ಮಾಡಲಾಗಿಲ್ಲ ಎನ್ನಲಾಗಿದೆ. ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಎನ್‌ಜಿ ಬೆಲೆಯನ್ನು ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿದೆ.

ಎಂಜಿಎಲ್ ನವೆಂಬರ್ 22 ರಿಂದ ಜಾರಿಗೆ ಬರುವಂತೆ ಮುಂಬೈನಲ್ಲಿ ಸಿಎನ್‌ಜಿ ಬೆಲೆಗಳನ್ನು ಕೆಜಿಗೆ 2 ರೂ.ಗೆ 77 ರೂ.ಗೆ ಏರಿಸಿತು. ಇತರ ನಗರ ಅನಿಲ ಚಿಲ್ಲರೆ ವ್ಯಾಪಾರಿಗಳು ಸಹ ಸಿಎನ್‌ಜಿ ಬೆಲೆಗಳನ್ನು ಹೆಚ್ಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ದೆಹಲಿಯಲ್ಲಿ ಸಿಎನ್‌ಜಿ ದರಗಳು ಕೆಜಿಗೆ 75.09 ರೂಗಳಲ್ಲಿ ಬದಲಾಗದೆ ಉಳಿದಿದೆ. ಗ್ರೇಟರ್ ನೋಯ್ಡಾ ಮತ್ತು ಘಾಜಿಯಾಬಾದ್‌ನಲ್ಲಿ ರೂ 81.70 ಮತ್ತು ಗುರುಗ್ರಾಮದಲ್ಲಿ ಕೆಜಿಗೆ 82.12 ರೂ. ಗೆ ಏರಿಕೆಯಾಗಿದೆ. 2022ರಲ್ಲಿ ಐಜಿಎಲ್ ದೆಹಲಿಯಲ್ಲಿ ಬೆಲೆಗಳನ್ನು ಪರಿಷ್ಕರಿಸಿತ್ತು. ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ಸಿಎನ್‌ಜಿ ಬೆಲೆಗಳನ್ನು ಪರಿಷ್ಕರಿಸಬಹುದು ಎಂದು ಹೇಳಲಾಗುತ್ತಿದೆ.

ಗ್ಯಾಸ್ ಬೆಲೆಯಲ್ಲಿ ಹೆಚ್ಚಳವಾದ ನಂತರ, ಈ ನಗರಗಳಲ್ಲಿ ಆಟೋ ದರಗಳು ಮತ್ತು ಟ್ಯಾಕ್ಸಿ ದರಗಳು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಕಾನ್ಪುರ, ಹಮೀರ್‌ಪುರ, ಫತೇಪುರ್, ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ, ಕರ್ನಾಲ್, ಕೈತಾಲ್, ಮುಜಾಫರ್‌ನಗರ, ಮೀರತ್, ಶಾಮ್ಲಿ, ಮಹೋಬಾ, ಬಂದಾ, ಅಜ್ಮೀರ್, ಪಾಲಿ ಸೇರಿದಂತೆ ಹಲವು ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಹೆಚ್ಚಿಸಲಾಗಿದೆ.

ಕಾನ್ಪುರ, ಹಮೀರ್‌ಪುರ, ಫತೇಪುರ್‌ನಲ್ಲಿ ಐಜಿಎಲ್ ಸಿಎನ್‌ಜಿ ಬೆಲೆಯನ್ನು ಕೆಜಿಗೆ 4 ರೂ.ಗಳಷ್ಟು ಹೆಚ್ಚಿಸಿದೆ. ನೋಯ್ಡಾ, ಗ್ರೇಟರ್ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ, ಕರ್ನಾಲ್ ಮತ್ತು ಕೈತಾಲ್‌ನಲ್ಲಿ ಕಂಪನಿಯು ಸಿಎನ್‌ಜಿ ಬೆಲೆಯನ್ನು ಕೆಜಿಗೆ 2 ರೂ. ಇದಲ್ಲದೇ ಮುಜಾಫರ್‌ನಗರ, ಮೀರತ್, ಶಾಮ್ಲಿ, ಮಹೋಬಾ, ಬಂದಾ, ಚಿತ್ರಕೂಟದಲ್ಲಿ ಪ್ರತಿ ಕೆಜಿಗೆ 3 ರೂಪಾಯಿ ಏರಿಕೆಯಾಗಿದೆ. ಇದಲ್ಲದೇ ಇಂದಿನಿಂದ ಅಜ್ಮೀರ್, ಪಾಲಿ ಮತ್ತು ರಾಜ್‌ಸಮಂದ್‌ನಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 1.5 ರೂಪಾಯಿಗಳಷ್ಟು ದುಬಾರಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ವಿಮಾನ ಇಂಧನ ತೆರಿಗೆ ಇಳಿಸಿದ ತಮಿಳುನಾಡು ಸಿಎಂ ವಿಜಯ್‌

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಿಮಾನಯಾನ ಸಂಸ್ಥೆಗಳಿಗೆ...