ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

Date:

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.

- Advertisement -

ನಿಜವಾಗಿ 8-10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಆದರೆ ಆ ಮಾಹಿತಿ ಮುಚ್ಚಿಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಲಾವೃತವಾಗಿರುವ ದೆಹಲಿ ಬೀದಿಯಲ್ಲಿ ಯುಪಿಎಸ್‌ಸಿ ಆಕಾಂಕ್ಷಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.

ಶನಿವಾರ ಸಂಜೆ 7 ಗಂಟೆ ಸುಮಾರಿಗೆ, ದೆಹಲಿ ಅಗ್ನಿಶಾಮಕ ದಳಕ್ಕೆ ನೆಲಮಾಳಿಗೆಯಲ್ಲಿ ಪ್ರವಾಹದ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆಗಾಗಿ ಐದು ಅಗ್ನಿಶಾಮಕ ಟೆಂಡರ್‌ಗಳನ್ನು ನಿಯೋಜಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಡೈವರ್‌ಗಳನ್ನು ಸಹ ನಿಯೋಜಿಸಲಾಗಿತ್ತು. ಆದರೆ ಕೋಚಿಂಗ್ ಸೆಂಟರ್‌ನ ಅಧ್ಯಾಪಕರೊಬ್ಬರು ಅಗ್ನಿಶಾಮಕದ ಬದಲಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಡೈವರ್‌ಗಳಿಗೆ ಅಧಿಕ ಆದ್ಯತೆ ನೀಡಬೇಕಾಗಿತ್ತು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಬಾಗಲಕೋಟೆ | ಗ್ರಾಮ ಜಲಾವೃತ, ಜಮೀನು ಮುಳುಗಡೆ; ತಮ್ಮೂರು ಬಿಡಲು ಗ್ರಾಮಸ್ಥರ ನಕಾರ

ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಬ್ಬರೂ ಮಹಿಳೆಯರಾಗಿದ್ದಾರೆ. ಮೊದಲು ರಾತ್ರಿ 10:30ಕ್ಕೆ ಒಬ್ಬರ ಮೃತದೇಹವನ್ನು ಮತ್ತು ನಂತರ ರಾತ್ರಿ 11:20ಕ್ಕೆ ಮತ್ತೋರ್ವ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಡಿಎಫ್‌ಎಸ್ ಅಧಿಕಾರಿಗಳ ಪ್ರಕಾರ ಇನ್ನೋರ್ವ ವ್ಯಕ್ತಿಯ ಹುಡುಕಾಟ ನಡೆಯುತ್ತಿದೆ.

ಶನಿವಾರ ರಾತ್ರಿ ಸ್ಥಳದಲ್ಲಿದ್ದ ವಿದ್ಯಾರ್ಥಿಗಳ ಪ್ರಕಾರ, ನೆಲಮಾಳಿಗೆಯಲ್ಲಿ ಕೋಚಿಂಗ್ ಸೆಂಟರ್‌ನ ಗ್ರಂಥಾಲಯವಿದೆ. ಅಲ್ಲಿ ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೋಗುತ್ತಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ನೆಲಮಾಳಿಗೆಯು ಸುಮಾರು 10-12 ಅಡಿಗಳಷ್ಟು ನೀರಿನಿಂದ ತುಂಬಿದೆ. ಆದ್ದರಿಂದ ವಿದ್ಯಾರ್ಥಿಗಳು ಪಾರಾಗಲು ಯಾವುದೇ ಅವಕಾಶ ಇರಲಿಲ್ಲ.

ಇನ್ನು ಓಲ್ಡ್ ರಾಜಿಂದರ್ ನಗರದಲ್ಲಿ ಸಂಜೆ 5.30ರಿಂದ ರಾತ್ರಿ 8.30ರ ನಡುವೆ 31.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಈ ಘಟನೆ ಬೆನ್ನಲ್ಲೇ ಆಡಳಿತಾರೂಢ ಎಎಪಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಘಟನೆಗೆ ಪ್ರದೇಶದ ಶಾಸಕರ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ. ಈ ನಡುವೆ ವಿದ್ಯಾರ್ಥಿಗಳು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

“ಈ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಇಲ್ಲಿನ ನೆಲಮಾಳಿಗೆ ತೆರೆದಿರುವ ಇವುಗಳೆಲ್ಲವೂ ಕಾನೂನುಬಾಹಿರವಾಗಿ ನಡೆಯುತ್ತಿದ್ದು, ಯಾವುದೇ ಸುರಕ್ಷತಾ ಕ್ರಮಗಳಿಲ್ಲ. ಆದ್ದರಿಂದ ಇವೆಲ್ಲವನ್ನೂ ತಡೆದು ಕ್ರಮಕೈಗೊಳ್ಳಬೇಕು” ಎಂದು ಯುಪಿಎಸ್‌ಸಿ ಆಕಾಂಕ್ಷಿ ಆಗ್ರಹಿಸಿದ್ದಾರೆ.

“ನಿಜವಾದ ಮೃತರ ಸಂಖ್ಯೆಯನ್ನು ಹೇಳಬೇಕು. 8-10 ಜನರು ಸಾವನ್ನಪ್ಪಿದ್ದಾರೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...