‘ನಿಮ್ಮ ಬಾಯ್‌ಫ್ರೆಂಡ್‌ಗೆ ರಾಜೀನಾಮೆ ಕೊಡಲು ಹೇಳಿ’; ಮೆಲೋನಿ ಪೋಸ್ಟ್‌ಗೆ ರಾಖಿ ಸಾವಂತ್ ಕಾಮೆಂಟ್ ವೈರಲ್

Date:

ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ  ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಪೋಸ್ಟ್‌ವೊಂದಕ್ಕೆ ಅವರು ಕಮೆಂಟ್‌ ಮಾಡಿದ್ದಾರೆ. ಕಮೆಂಟ್‌ನಲ್ಲಿ ಮೋದಿಯನ್ನು ಉದ್ದೇಶಿಸಿ, “ದಯವಿಟ್ಟು ನಿಮ್ಮ ಬಾಯ್‌ಫ್ರೆಂಡ್‌ಗೆ ರಾಜೀನಾಮೆ ಕೊಡಲು ಹೇಳಿ” ಎಂದು ಬರೆದಿದ್ದಾರೆ. ಈ ಕಾಮೆಂಟ್ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ರಾಖಿ ಸಾವಂತ್ ನಿರಂತರವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಪ್ರತಿಭಟನಾಕಾರರ ಪರವಾಗಿ ಹಲವು ಪೋಸ್ಟ್‌ಗಳು ಮತ್ತು ವಿಡಿಯೊಗಳನ್ನು ಹಂಚಿಕೊಂಡಿರುವ ರಾಖಿ, ‘ವಿದ್ಯಾರ್ಥಿಗಳ ಬೇಡಿಕೆಗಳಿಗೆ ತಮ್ಮ ಬೆಂಬಲವಿದೆ’ ಎಂದು ಹೇಳಿದ್ದಾರೆ. ಅಲ್ಲದೆ, ಶೀಘ್ರವೇ ಜಂತರ್‌ ಮಂತರ್‌ಗೆ ಭೇಟಿ ನೀಡುವುದಾಗಿಯೂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

 ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಅವರು ಪದೇ ಪದೇ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. “ನೀಟ್ ಹಗರಣದ ಕುರಿತು ಸರ್ಕಾರ ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಮಾಧ್ಯಮಗಳ ಪಾತ್ರದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ರಾಖಿ ಸಾವಂತ್, ಕೆಲವು ವಾಹಿನಿಗಳನ್ನು ‘ಗೋದಿ ಮೀಡಿಯಾ’ ಎಂದು ಟೀಕಿಸಿದ್ದು, ವಿದ್ಯಾರ್ಥಿಗಳ ಹೋರಾಟಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...