ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆಗೆ ಕೊಲೆ ಬೆದರಿಕೆ: ಇನ್‌ಸ್ಟಾ ಹ್ಯಾಕ್

Date:

ರಾಜಕೀಯ ವಿಡಂಬನಾತ್ಮಕ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸ್ಥಾಪಕ ಅಭಿಜಿತ್ ದೀಪ್ಕೆಗೆ ಇತ್ತೀಚೆಗೆ ನಿರಂತರವಾಗಿ ಕೊಲೆ ಬೆದರಿಕೆಗಳು ಬರುತ್ತಿವೆ. ಈ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಅಮೆರಿಕದಲ್ಲಿದ್ದರೂ ಕೊಲ್ಲುವುದಾಗಿ ದುಷ್ಕರ್ಮಿಗಳು ಅವರಿಗೆ ವಾಟ್ಸಾಪ್‌ ಮೂಲಕ ಸಂದೇಶಗಳನ್ನು ಕಳುಹಿಸಿದ್ದಾರೆ.

- Advertisement -

ಇನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯನ್ನೂ ಹ್ಯಾಕ್ ಮಾಡಲಾಗಿದೆ ಎಂದು ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಈಗಾಗಲೇ ಅವರ ಎಕ್ಸ್‌ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಇದೀಗ ಇನ್‌ಸ್ಟಾಗ್ರಾಂ ಖಾತೆಯನ್ನೂ ಹ್ಯಾಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನು ಓದಿದ್ದೀರಾ? ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ಡಿಪ್ಕೆ ಬಂಧನದ ಭೀತಿಯಲ್ಲಿ ಪೋಷಕರು

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ವ್ಯವಸ್ಥೆಯನ್ನು ಪ್ರಶ್ನಿಸುವ ನಿರುದ್ಯೋಗಿಗಳನ್ನು ಜಿರಳೆಗಳು (ಕಾಕ್ರೋಚ್‌) ಎಂದು ಕರೆದ ಬಳಿಕ ಈ ವಿಡಂಬನಾತ್ಮಕ ‘ಕಾಕ್ರೋಚ್ ಜನತಾ ಪಾರ್ಟಿ’ ಹುಟ್ಟಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ನಾನೂ ‘ಕಾಕ್ರೋಚ್’ ಎಂದು ಯುವ ಜನರು ಹೇಳಿಕೊಳ್ಳುತ್ತಿದ್ದಾರೆ. ಈ ನಡುವೆ ಬಿಜೆಪಿಗರು ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆಗೆ ಕೊಲೆ ಬೆದರಿಕೆ ಹಾಕಲು ಶುರು ಮಾಡಿದ್ದಾರೆ.

“ಅಕೌಂಟ್ ಬಂದ್ ಮಾಡು, ಇಲ್ಲದಿದ್ದರೆ ನಿನ್ನನ್ನು ಮುಗಿಸಿಬಿಡುತ್ತೇವೆ” ಮತ್ತು “ಅಮೆರಿಕದಲ್ಲಿದ್ದರೂ ನಿನ್ನನ್ನು ಕೊಲ್ಲಲಾಗುವುದು” ಎಂಬ ಬೆದರಿಕೆ ಸಂದೇಶಗಳು ಬಂದಿವೆ. ಇನ್ನು ಸಾಮಾಜಿಕ ಜಾಲತಾಣ ಖಾತೆಗಳನ್ನು ಮುಚ್ಚಿದರೆ ಹಣ ನೀಡುವುದಾಗಿ ಆಮಿಷ ಒಡ್ಡುವ ಯತ್ನವೂ ನಡೆದಿದೆ. ಬಿಜೆಪಿಗೆ ಸೇರಿಕೊಳ್ಳುವಂತೆ ದುಷ್ಕರ್ಮಿಗಳು ಒತ್ತಡ ಹೇರಿದ್ದಾರೆ.

ತಮಗೆ ಫೋನ್ ಕರೆಗಳು ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಬರುತ್ತಿರುವ ಬೆದರಿಕೆ ಸಂದೇಶಗಳು ಮತ್ತು ವಿಡಿಯೋಗಳನ್ನು ಅಭಿಜಿತ್ ಅವರೇ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಅಭಿಜಿತ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು ಮತ್ತು ಅವರ ಪ್ರೊಫೈಲ್‌ನಿಂದ ಹಳೆಯ ಪೋಸ್ಟ್‌ಗಳನ್ನು ಡಿಲೀಟ್ ಮಾಡಲು ಪ್ರಯತ್ನಿಸಲಾಗಿತ್ತು. ಕೇವಲ ಇನ್‌ಸ್ಟಾಗ್ರಾಂ ಮಾತ್ರವಲ್ಲದೆ, ಅವರ ಇಮೇಲ್ ಮತ್ತು ಇತರ ಡಿಜಿಟಲ್ ಖಾತೆಗಳ ಮೇಲೆಯೂ ಸೈಬರ್ ದಾಳಿ ನಡೆಸಲು ನಿರಂತರ ಯತ್ನಗಳು ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...