ಕಾಕ್ರೋಚ್ ಪಾರ್ಟಿ ಪ್ರತಿಭಟನೆ: ಪರೀಕ್ಷಾ ಅಕ್ರಮಗಳ ವಿರುದ್ಧ ಉಪವಾಸ ಸತ್ಯಾಗ್ರಹ; ಸೋನಮ್ ವಾಂಗ್ಚುಕ್ ಎಚ್ಚರಿಕೆ

Date:

ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಮತ್ತು ಕಳಪೆ ನಿರ್ವಹಣೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯನ್ನು ಆಹೋರಾತ್ರಿ ಧರಣಿಗೆ ಬದಲಾಯಿಸಿರುವ ಸಿಜೆಪಿ, ‘ಪ್ರಧಾನ್ ರಾಜೀನಾಮೆ ಕೊಡುವವರೆಗೂ ನಿರಂತರ ಧರಣಿ ನಡೆಯಲಿದೆ’ ಎಂದು ಘೋಷಿಸಿದೆ.

- Advertisement -

ಇದೇ ಪ್ರತಿಭಟನೆಯಲ್ಲಿ ಮಾತನಾಡಿದ ಲಡಾಖ್‌ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್, “ಶಿಕ್ಷಣ ವ್ಯವಸ್ಥೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸರ್ಕಾರವು ಜೂನ್ 27ರೊಳಗೆ ನೈತಿಕ ಜವಾಬ್ದಾರಿ ಹೊತ್ತುಕೊಳ್ಳಬೇಕು. ಇಲ್ಲದಿದ್ದಾರೆ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಂತರ್ ಮಂತರ್‌ನಲ್ಲಿ ನೆರೆದಿದ್ದ ನೂರಾರು ಪ್ರತಿಭಟನಾಕಾರರು ತಟ್ಟೆ ಮತ್ತು ಚಮಚಗಳನ್ನು ಜೋರಾಗಿ ಬಡಿಯುತ್ತಾ ‘ಗೋ ಪ್ರಧಾನ್ ಗೋ’ (ಪ್ರಧಾನ್ ತೊಲಗಿ) ಎಂದು ಘೋಷಣೆಗಳನ್ನು ಕೂಗಿದ್ದಾರೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮಾತನಾಡಿ, “ನಾವು ಈ ರೀತಿ ತಟ್ಟೆ ಬಡಿಯುವುದರಿಂದ, ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮೇಂದ್ರ ಪ್ರಧಾನ್ ಎಂಬ ಹೆಸರಿನ ವೈರಸ್ಅನ್ನು ಅಧಿಕಾರದಿಂದ ತೊಡೆದು ಹಾಕಲು ಸಹಾಯವಾಗುತ್ತದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಟೆಲಿಗ್ರಾಂ – ಅಪರಾಧಿಗಳ ‘ಡಾರ್ಕ್ ವೆಬ್’ ಎಂದು ಕೇಂದ್ರ ಸರ್ಕಾರ ಹಣೆಪಟ್ಟಿ ಕಟ್ಟುತ್ತಿದೆ ಯಾಕೆ?

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಲಾಗುವ ‘ನೀಟ್-ಯುಜಿ’ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 12 ನೇ ತರಗತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗ (SSC) ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಲೋಪದೋಷಗಳ ವಿರುದ್ಧ ಸಿಜೆಪಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಸೌದಿ ಮೇಲೆ ಹೌತಿ ದಾಳಿ ತೀವ್ರ: ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ

ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಸೇರಿದಂತೆ ಪ್ರಮುಖ ನಗರಗಳ ಮೇಲೆ ಯೆಮೆನ್‌ನ...

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...