ಕಾಕ್ರೋಚ್‌ ಪಾರ್ಟಿ ʼXʼ ಖಾತೆ ನಿರ್ಬಂಧ; ತಕ್ಷಣದ ಮರುಸ್ಥಾಪನೆಗೆ ಡೆಲ್ಲಿ ಹೈಕೋರ್ಟ್ ನಕಾರ‌

Date:

‘ಕಾಕ್ರೋಚ್ ಜನತಾ ಪಾರ್ಟಿ’ಯ X ಖಾತೆಯನ್ನು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು (ಮೇ.29) ಕೇಂದ್ರ ಸರ್ಕಾರ ಮತ್ತು ‘X’ (ಟ್ವಿಟರ್) ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

- Advertisement -

ಆದಾಗ್ಯೂ, ಜಸ್ಟಿಸ್ ಪುರುಷೇಂದ್ರ ಕುಮಾರ್ ಕೌರವ್ ಅವರಿದ್ದ ಏಕಸದಸ್ಯ ಪೀಠವು, ಬ್ಲಾಕ್ ಆಗಿರುವ ಖಾತೆಯನ್ನು ತಕ್ಷಣವೇ ಮರುಸ್ಥಾಪಿಸಲು ನಿರಾಕರಿಸಿದೆ. ಈ ವಿಷಯವು ದೂರಗಾಮಿ ಪರಿಣಾಮ‌ಗಳನ್ನು ಹೊಂದಿರುವುದರಿಂದ, ಸರ್ಕಾರದ ವಾದವನ್ನು ಆಲಿಸಿದ ನಂತರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಕೇಂದ್ರ ಸರ್ಕಾರವು ತನ್ನ ಸಮಗ್ರ ಪ್ರತಿಕ್ರಿಯೆಯನ್ನು ಸಲ್ಲಿಸಿದ ನಂತರ, ಖಾತೆಯನ್ನು ನಿರ್ಬಂಧಿಸಿದ ಆದೇಶದ ಪ್ರತಿಯನ್ನು ಕೋರ್ಟ್ ಮುಂದೆ ಮಂಡಿಸುವಂತೆ ‘X’ ಸಂಸ್ಥೆಗೆ ನಿರ್ದೇಶನ ನೀಡಬೇಕೇ ಎಂಬುದನ್ನು ಪರಿಶೀಲಿಸುವುದಾಗಿ ಕೋರ್ಟ್ ಹೇಳಿದ್ದು, 4 ವಾರಗಳ ಒಳಗಾಗಿ ಉತ್ತರಿಸುವಂತೆ ಕೇಂದ್ರಕ್ಕೆ ಗಡುವು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 6 ಕ್ಕೆ ನಿಗದಿಪಡಿಸಲಾಗಿದೆ.

ಇದೇ ವೇಳೆ, ಐಟಿ ನಿಯಮಗಳ ಪ್ರಕಾರ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಬೇಕಾದ ‘ಪರಿಶೀಲನಾ ಸಮಿತಿ’ಯು ಈ ಬ್ಲಾಕಿಂಗ್ ಆದೇಶದ ಎಲ್ಲಾ ಆಯಾಮಗಳನ್ನು ಪರಿಶೀಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರ ಅಭಿಜೀತ್ ದೀಪ್ಕೆ ಸದ್ಯ ಭಾರತದಲ್ಲಿ ಇಲ್ಲದಿರುವುದರಿಂದ, ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗಲು ವಿನಂತಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ: ʼಎಲ್‌ ನಿನೋʼ ಆತಂಕ: ಮುಂಗಾರು ಬೆಳೆ ರಕ್ಷಣೆಗೆ ಕೇಂದ್ರ ಸಜ್ಜು

ಇಂಟೆಲಿಜೆನ್ಸ್ ಬ್ಯೂರೋ (IB) ನೀಡಿದ ಇನ್‌ಪುಟ್‌ಗಳ ಆಧಾರದ ಮೇಲೆ “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಐಟಿ ಕಾಯ್ದೆ 2000 ರ ಸೆಕ್ಷನ್ 69 (A) ಅಡಿಯಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಿಜೆಪಿ ಖಾತೆಯನ್ನು ನಿರ್ಬಂಧಿಸಲು ‘X’ ಸಂಸ್ಥೆಗೆ ಸೂಚಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಗಾಂಧಿನಗರದಲ್ಲಿ ಬಿಜೆಪಿಗೆ ಜಯ, ಕಾಂಗ್ರೆಸ್‌ ಚೇತರಿಕೆ

ಗುಜರಾತ್‌ನ ಪ್ರತಿಷ್ಠಿತ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಸೇರಿದಂತೆ ವಿವಿಧ ನಗರ...

ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ RSS ನಂಟಿನ SJM ಒತ್ತಾಯ

ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ...

ಗ್ಯಾನೇಶ್‌ ಅಪ್ರೂವರ್ ಆಗಿಬಿಡಿ; ಸುಪ್ರೀಂ ಕೋರ್ಟ್ ಅಂಗಳದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್‌...