ಬಿಜೆಪಿಯನ್ನು ಹಿಂದಿಕ್ಕಿದ ಕೆಲವೇ ಗಂಟೆಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆ ನಿರ್ಬಂಧ

Date:

ಇನ್‌ಸ್ಟಾಗ್ರಾಮ್‌ನಲ್ಲಿ ಆಡಳಿತರೂಢ ಭಾರತೀಯ ಜನತಾ ಪಾರ್ಟಿಯನ್ನು (ಬಿಜೆಪಿ) ಹಿಂದಿಕ್ಕಿ, ಕೇವಲ ಐದು ದಿನಗಳಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಫಾಲೋವರ್ಸ್ ಸಂಪಾದಿಸಿ ಸಂಚಲನ ಮೂಡಿಸಿದ್ದ ಯುವಜನರ ವಿಡಂಬನಾತ್ಮಕ ಆಂದೋಲನ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಎಕ್ಸ್ ಖಾತೆಯನ್ನು ಗುರುವಾರ ಭಾರತದಲ್ಲಿ ನಿರ್ಬಂಧಿಸಲಾಗಿದೆ.

- Advertisement -

​ನಿರುದ್ಯೋಗ ಹಾಗೂ ವ್ಯವಸ್ಥೆಯ ಮೇಲಿನ ಹತಾಶೆಯಿಂದ ಹುಟ್ಟಿಕೊಂಡ ಈ ಡಿಜಿಟಲ್ ಅಭಿಯಾನವು ಅತಿ ಕಡಿಮೆ ಅವಧಿಯಲ್ಲಿ ರಾಷ್ಟ್ರಮಟ್ಟದ ಗಮನ ಸೆಳೆದಿತ್ತು. ​ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಇನ್‌ಸ್ಟಾಗ್ರಾಮ್‌ನಲ್ಲಿ ಬಿಜೆಪಿ ಅಧಿಕೃತ ಖಾತೆಯು 87 ಲಕ್ಷ ಫಾಲೋವರ್ಸ್ ಹೊಂದಿದ್ದರೆ, ಹೊಸದಾಗಿ ಹುಟ್ಟಿಕೊಂಡ ಈ ‘ಕಾಕ್ರೋಚ್ ಜನತಾ ಪಾರ್ಟಿ’ ಕೇವಲ 5 ದಿನಗಳಲ್ಲಿ 1.01 ಕೋಟಿ (10.1 ಮಿಲಿಯನ್) ಫಾಲೋವರ್ಸ್ ಗಡಿ ದಾಟಿತ್ತು. ಸದ್ಯ 1.3 ಕೋಟಿ (13 ಮಿಲಿಯನ್) ಫಾಲೋವರ್ಸ್ ಹೊಂದಿರುವ ಕಾಂಗ್ರೆಸ್ ಮಾತ್ರ ಸಿಜೆಪಿಗಿಂತ ಮುಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಇಷ್ಟೊಂದು ಜನಪ್ರಿಯತೆ ಗಳಿಸಿ ಬಿಜೆಪಿಯನ್ನು ಹಿಂದಿಕ್ಕಿದ ಬೆನ್ನಲ್ಲೇ, ಎಕ್ಸ್ (X) ವೇದಿಕೆಯು ಸಿಜೆಪಿ ಖಾತೆಯನ್ನು ಭಾರತದ ಐಟಿ ನಿಯಮಾವಳಿಗಳ ಅನ್ವಯ “ಭಾರತದಲ್ಲಿ ತಡೆಹಿಡಿಯಲಾಗಿದೆ (Withheld in India)” ಎಂದು ನಿರ್ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? IPL ರೋಚಕ ಘಟ್ಟ: 3 ತಂಡಗಳ ಪ್ಲೇ-ಆಫ್ ಪ್ರವೇಶ,1 ಸ್ಥಾನಕ್ಕಾಗಿ 5 ತಂಡಗಳ ಹಣಾಹಣಿ

ಈ ದಿಢೀರ್ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ಸಂಸ್ಥಾಪಕ, 30 ವರ್ಷದ ಯುವಕ ಅಭಿಜೀತ್ ದಿಪ್ಕೆ, “ನಿರೀಕ್ಷೆಯಂತೆಯೇ ಭಾರತದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಖಾತೆಯನ್ನು ನಿರ್ಬಂಧಿಸಲಾಗಿದೆ,” ಎಂದು ಎಕ್ಸ್‌ನಲ್ಲಿ ಬರೆದುಕೊಂಡು, ನಿರ್ಬಂಧಿತ ಖಾತೆಯ ಸ್ಕ್ರೀನ್-ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕ ವಿಷಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಅಭಿಜೀತ್, ಈ ಹಿಂದೆ ಆಮ್ ಆದ್ಮಿ ಪಾರ್ಟಿಯ ಸಾಮಾಜಿಕ ಜಾಲತಾಣ ವಿಭಾಗದಲ್ಲಿಯೂ ಸ್ವಯಂಸೇವಕನಾಗಿ ಕೆಲಸ ಮಾಡಿದ್ದರು.

“ಇದು ಕೇವಲ ಟ್ರೆಂಡ್ ಅಲ್ಲ, ಯುವಕರ ಹತಾಶೆಯ ನೇರ ಪ್ರತಿರೂಪ” ಎಂದು ದಿಪ್ಕೆ ಪ್ರತಿಪಾದಿಸಿದ್ದರು. ಇದೀಗ ವಾಕ್-ಸ್ವಾತಂತ್ರ್ಯದ ವೇದಿಕೆಯಾಗಿದ್ದ ಈ ಖಾತೆಯನ್ನು ನಿರ್ಬಂಧಿಸಿರುವುದು ಡಿಜಿಟಲ್ ಸೆನ್ಸಾರ್‌ಶಿಪ್ ಹಾಗೂ ಯುವಕರ ಧ್ವನಿಯನ್ನು ಅಡಗಿಸುವ ಪ್ರಯತ್ನ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಒಂದು ಸಣ್ಣ ಮೀಮ್ ಪೇಜ್ ಆಗಿ ಶುರುವಾದ ಈ ಆಂದೋಲನ, ಇಂದು ರಾಷ್ಟ್ರ ರಾಜಕಾರಣದ ಚರ್ಚಾ ವಿಷಯವಾಗಿ ಮಾರ್ಪಟ್ಟಿರುವುದು ಸ್ಪಷ್ಟವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...