ಬಿಸ್ಲೆರಿ ಬಂಗಾಳ ಘಟಕದ ನೀರಿನ ಮಾದರಿಯಲ್ಲಿ ‘ಕೋಲಿಫಾರ್ಮ್’ ಪತ್ತೆ; ಕಾನೂನು ಕ್ರಮಕ್ಕೆ FSSAI ಅನುಮತಿ

Date:

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯ ಪ್ರತಿಷ್ಠಿತ ಕಂಪನಿ ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮತ್ತೊಂದು ಕಾನೂನು ಕ್ರಮಕ್ಕೆ ಅನುಮತಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿರುವ ಬಿಸ್ಲೆರಿ ಉತ್ಪಾದನಾ ಘಟಕದಿಂದ ಸಂಗ್ರಹಿಸಲಾದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯ ಪರೀಕ್ಷೆಯಲ್ಲಿ ವಿಫಲವಾಗಿದೆ. ಅದೇ ಕಾರಣಕ್ಕಾಗಿ ಬಿಸ್ಲೆರಿ ವಿರುದ್ಧ ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

- Advertisement -

ಗೋವಾದ ಘಟಕದ ನೀರಿನ ಮಾದರಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಾರಣಕ್ಕೆ ಕಳೆದ ಭಾನುವಾರವಷ್ಟೇ ಬಿಸ್ಲೆರಿ ವಿರುದ್ಧ ಎಫ್‌ಎಸ್‌ಎಸ್‌ಎಐ ಕಾನೂನು ಕ್ರಮ ಪ್ರಕಟಿಸಿತ್ತು. ಇದೀಗ ಪಶ್ಚಿಮ ಬಂಗಾಳ ಘಟಕದ ನೀರಿಯಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಕಂಪನಿ ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ತೇಲಿಪಾರಾ ಗ್ರಾಮದಲ್ಲಿರುವ ಬಿಸ್ಲೆರಿ ಘಟಕದಿಂದ ಸಂಗ್ರಹಿಸಲಾದ ಕುಡಿಯುವ ನೀರಿನ ಮಾದರಿಯಲ್ಲಿ ಅಪಾಯಕಾರಿ ‘ಕೋಲಿಫಾರ್ಮ್ ಬ್ಯಾಕ್ಟೀರಿಯಾ’ ಇರುವುದು ಪತ್ತೆಯಾಗಿದೆ. ಪ್ರಾಥಮಿಕ ಪ್ರಯೋಗಾಲಯ ಮತ್ತು ರೆಫರಲ್ ಪ್ರಯೋಗಾಲಯಗಳೆರಡೂ ನೀರಿನಲ್ಲಿ ಬ್ಯಾಕ್ಟೀರಿಯಾ ಇರುವುದನ್ನು ದೃಢಪಡಿಸಿವೆ. ನೀರು ಕುಡಿಯಲು ‘ಅಸುರಕ್ಷಿತ’ ಎಂದು ವರದಿ ನೀಡಿವೆ.

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಬಿಸ್ಲೆರಿ ಇಂಟರ್‌ನ್ಯಾಷನಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಎಫ್‌ಎಸ್‌ಎಸ್‌ಎಐ ಅಧಿಕೃತ ಮಂಜೂರಾತಿ ನೀಡಿದೆ. ಆರಂಭಿಕ ಪರೀಕ್ಷೆಯಲ್ಲಿ ನೀರಿನ ಮಾದರಿಯು ನಿಗದಿತ ಬ್ರೋಮೇಟ್ ಮಿತಿಗೆ ಅನುಗುಣವಾಗಿಲ್ಲ ಎಂಬುದು ಕಂಡುಬಂದಿದ್ದರಿಂದ ‘ಆಹಾರ ಸುರಕ್ಷತಾ ಕಾಯ್ದೆ 2006’ರ ಅಡಿಯಲ್ಲಿ ಅದನ್ನು ಅಸುರಕ್ಷಿತ ಎಂದು ಘೋಷಿಸಲಾಗಿತ್ತು. ಈ ವರದಿಯನ್ನು ಪ್ರಶ್ನಿಸಿ ಕಂಪನಿಯು ಮೇಲ್ಮನವಿ ಸಲ್ಲಿಸಿದ ಬಳಿಕ, ಮಾದರಿಯನ್ನು ರೆಫರಲ್ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ನಡೆದ ಪರೀಕ್ಷೆಯಲ್ಲೂ ನೀರಿನಲ್ಲಿ ಪಾಲಿನ್ಯೂಕ್ಲಿಯರ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು (PAHs) ಪತ್ತೆಯಾದ ಕಾರಣಕ್ಕೆ ಆ ಮಾದರಿಯನ್ನು ಅಸುರಕ್ಷಿತವೆಂದು ವರ್ಗೀಕರಿಸಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ಪ್ರಯೋಗಾಲಯದ ಈ ವರದಿಗಳು ಕಾನೂನು ಉಲ್ಲಂಘನೆಯನ್ನು ಸಾಬೀತುಪಡಿಸಿರುವುದರಿಂದ ಆಹಾರ ಸುರಕ್ಷತಾ ಕಾಯ್ದೆಯಡಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಮಾಅತೆ ಇಸ್ಲಾಮೀ ಹಿಂದ್ ತೀವ್ರ ಖಂಡನೆ

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಇತ್ತೀಚೆಗೆ ಆಡಿರುವ ಅವಹೇಳನಕಾರಿ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ...

ಚಿಕ್ಕೋಡಿ |ಜಿಲ್ಲೆ ರಚನೆಗೆ ಸಿಎಂ ಭೇಟಿಯಾಗಿ ಮನವಿ; ಪ್ರಿಯಾಂಕ ಜಾರಕಿಹೊಳಿ

ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಪ್ರತ್ಯೇಕ ಚಿಕ್ಕೋಡಿ ಜಿಲ್ಲೆ ರಚನೆಯ ಬೇಡಿಕೆಗೆ...