ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು ಎಲಾನ್ ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು ಹಾಕಿದೆ.
ಇವಿಎಂ ಹ್ಯಾಕಿಂಗ್ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಎಕ್ಸ್ ಮಾಲೀಕ ಎಲಾನ್ ಮಸ್ಕ್, “ವಿದ್ಯುನ್ಮಾನ ಮತಯಂತ್ರಗಳ ಬಳಕೆಯನ್ನು ನಿಲ್ಲಿಸಬೇಕು. ಇವಿಎಂ ಮಾನವರು ಅಥವಾ ಎಐನಿಂದ ಹ್ಯಾಕ್ ಆಗುವ ಅಪಾಯ ಕಡಿಮೆಯಾಗಿದ್ದರೂ ಕೂಡಾ ಅಪಾಯ ಇನ್ನೂ ಹೆಚ್ಚಾಗಿದೆ” ಎಂದು ಹೇಳಿದ್ದರು.
We should eliminate electronic voting machines. The risk of being hacked by humans or AI, while small, is still too high. https://t.co/PHzJsoXpLh
— Elon Musk (@elonmusk) June 15, 2024
ಎಲಾನ್ ಮಸ್ಕ್‌ರ ಈ ಒಂದು ಪೋಸ್ಟ್ ಭಾರೀ ಸಂಚಲವನ್ನು ಮೂಡಿಸಿದೆ. ಎಲಾನ್ ಮಸ್ಕ್ ಹೇಳಿಕೆಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರುಗಳು ನೀಡಿದ್ದಾರೆ.
ಇದನ್ನು ಓದಿದ್ದೀರಾ? ಹ್ಯಾಕ್ ಆಗುವ ಸಾಧ್ಯತೆ; ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದ ಎಲಾನ್ ಮಸ್ಕ್
ಮಸ್ಕ್ ಟ್ವೀಟ್ ವಿವಾದವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಭಾರತದಲ್ಲಿ ಇವಿಎಂಗಳು ಕಪ್ಪು ಪೆಟ್ಟಿಗೆಯಷ್ಟೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.
ಈ ನಡುವೆ ಭಾರತದ ಚುನಾವಣಾ ಆಯೋಗವು ಎಲಾನ್ ಮಸ್ಕ್ ಅವರಿಗೆ ಸವಾಲು ಹಾಕಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಿ ಎಂದು ಮಸ್ಕ್‌ಗೆ ಆಯೋಗ ಹೇಳಿದೆ.
This is an absurd speculation and an attempt to malign the credibility of Indian elections. We challenge you Mr @elonmusk to come to India and demonstrate the hacking of EVMs used in the greatest election of the world’s largest democracy . https://t.co/6BUxOjAzWd
— Election Commision of India🗯️(parody) (@officeof_nasha) June 16, 2024
“ಇದು ಅಸಂಬದ್ಧ ಊಹಾಪೋಹ ಮತ್ತು ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನವಾಗಿದೆ” ಎಂದು ಚುನಾವಣಾ ಆಯೋಗ ಆರೋಪಿಸಿದೆ.
“ನಾವು ನಿಮಗೆ ಸವಾಲು ಹಾಕುತ್ತೇವೆ, ಎಲಾನ್ ಮಸ್ಕ್ ಅವರೆ ಭಾರತಕ್ಕೆ ಬಂದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಮಹಾನ್ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳ ಹ್ಯಾಕಿಂಗ್ ಹೇಗೆ ಆಗುತ್ತದೆ ಎಂದು ತೋರಿಸಿ” ಎಂದು ಚುನಾವಣಾ ಆಯೋಗ ಸವಾಲೆಸೆದಿದೆ.