ಬಿಜೆಪಿ ಶಾಸಕನಿಂದ ಬೆದರಿಕೆ: ಹೈದರಾಬಾದ್‌ನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ಹಾಸ್ಯ ಕಲಾವಿದ

Date:

ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ನಿಂದ ಬೆದರಿಕೆ ಸ್ವೀಕರಿಸಿದ ನಂತರ ಹಾಸ್ಯ ಕಲಾವಿದ ಡೇನಿಯಲ್‌ ಫರ್ನಾಂಡಿಸ್ ಹೈದರಾಬಾಬ್‌ನಲ್ಲಿ ಹಮ್ಮಿಕೊಂಡಿದ್ದ ತಮ್ಮ ಸ್ಟ್ಯಾಂಡ್‌ ಅಪ್‌ ಕಾಮಿಡಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

- Advertisement -

ಒಂದು ವೇಳೆ ಕಾರ್ಯಕ್ರಮ ಹಮ್ಮಿಕೊಂಡರೆ ದೈಹಿಕವಾಗಿ ಹಲ್ಲೆ ನಡೆಸುವುದಾಗಿ ಬಿಜೆಪಿ ಶಾಸಕ ಬೆದರಿಕೆ ಹಾಕಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಡೇನಿಯಲ್‌ ಫರ್ನಾಂಡಿಸ್ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಎಂಬ ಕಾರಣದಿಂದ ಬಿಜೆಪಿ ಶಾಸಕ ಆಕ್ರೋಶಗೊಂಡಿದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆದ ನಂತರ ಡೇನಿಯಲ್‌ ಅವರು ಇನ್‌ಸ್ಟಾಗ್ರಾಂ ಮೂಲಕ ಕ್ಷಮೆ ಕೇಳಿದ್ದರು. ವಿವಾದಿತ ವಿಡಿಯೋವನ್ನು ಅಳಿಸಿದ ನಂತರವೂ ಅವರು ಬೆದರಿಕೆ ಕರೆಗಳನ್ನು ಸ್ವೀಕರಿಸುತ್ತಿದ್ದಾರೆ.

“ಜನರ ಭಾವನೆಗಳಿಗೆ ಧಕ್ಕೆಯಾದ ಕಾರಣ ನಾನು ವಿವಾದಿತ ವಿಡಿಯೋವನ್ನು ಅಳಿಸಿಹಾಕಿದ್ದೆ. ಆದರೂ ನಾವು ಕರೆಗಳು, ಸಂದೇಶಗಳು ಹಾಗೂ ಇಮೇಲ್‌ಗಳ ಮೂಲಕ ಬೆದರಿಕೆಯನ್ನು ಸ್ವೀಕರಿಸುತ್ತಿದ್ದೇವೆ. ನನ್ನ ಮಾತು ಜೈನ ಸಮುದಾಯವನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ. ನಿಮ್ಮ ಭಾವನೆಗಳಿಗೆ ನೋವಾಗಿರುವುದಕ್ಕೆ ಕ್ಷಮೆಯಾಚಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಂಬೈ ಮೂಲದ ಡೇನಿಯಲ್‌ ಫರ್ನಾಂಡಿಸ್ ಸ್ಟಾಂಡ್‌ ಅಪ್‌ ಕಾಮಿಡಿ ನೀಡುವ ಹಾಸ್ಯ ಕಲಾವಿದರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...