ವಾಣಿಜ್ಯ ಗ್ಯಾಸ್ ದರ 10 ರೂ. ಏರಿಕೆ, ಜೆಟ್ ಇಂಧನ ದರ ಮತ್ತೆ ದುಬಾರಿ

Date:

ದೀಪಾವಳಿ ಹಬ್ಬದ ಹೊಸ್ತಿಲಲ್ಲೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. 19 ಕೆ.ಜಿ. ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು 10 ರೂಪಾಯಿ ಹೆಚ್ಚಿಸಿವೆ. ನವೆಂಬರ್ 1ರಿಂದಲೇ ಈ ಹೊಸ ದರ ಜಾರಿಗೆ ಬಂದಿದ್ದು, ದೆಹಲಿಯಲ್ಲಿ ಇದರ ಬೆಲೆ 2,820 ರೂ.ಗೆ ತಲುಪಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಊಟದ ಬಿಲ್ ದುಬಾರಿಯಾಗುವ ಸಾಧ್ಯತೆಯಿದೆ.

- Advertisement -

​ವಾಣಿಜ್ಯ ಗ್ಯಾಸ್ ದರವು ಇತ್ತೀಚೆಗೆ ಸತತವಾಗಿ ಏರಿಕೆಯಾಗುತ್ತಿದೆ. ಇದಕ್ಕೂ ಮುನ್ನ ಅಕ್ಟೋಬರ್ 1ರಂದು 62.50 ರೂ. ಹಾಗೂ ಸೆಪ್ಟೆಂಬರ್ 1ರಂದು 9.50 ರೂ. ಹೆಚ್ಚಳವಾಗಿತ್ತು. ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಜೂನ್‌ನಲ್ಲಿ ಗರಿಷ್ಠ ಮಟ್ಟ ತಲುಪಿದ್ದ ದರವು, ನಂತರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 183.50 ರೂ. ಮತ್ತು 192 ರೂ.ಗಳಷ್ಟು ಇಳಿಕೆಯಾಗಿ ಗ್ರಾಹಕರಿಗೆ ಕೊಂಚ ನಿರಾಳತೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

​ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 14.2 ಕೆ.ಜಿ. ತೂಕದ ಗೃಹ ಬಳಕೆಯ ಅಡುಗೆ ಅನಿಲದ ಬೆಲೆ 942 ರೂಪಾಯಿಗಳಷ್ಟೇ ಇದ್ದು, ಸಾಮಾನ್ಯ ಜನರಿಗೆ ಹಬ್ಬದ ಸಂದರ್ಭದಲ್ಲಿ ಯಾವುದೇ ಹೆಚ್ಚುವರಿ ಹೊರೆಯಾಗಿಲ್ಲ.

​ಗೃಹ ಬಳಕೆಯ ಗ್ಯಾಸ್ ದರದಂತೆಯೇ, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲೂ ಯಾವುದೇ ಏರಿಳಿತವಾಗಿಲ್ಲ. ಕಳೆದ ಮೇ ತಿಂಗಳಲ್ಲಿ ಇವುಗಳ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಸುಮಾರು 7.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು ಬಿಟ್ಟರೆ, ಪ್ರಸ್ತುತ ವಾಹನ ಸವಾರರಿಗೆ ತೈಲ ಕಂಪನಿಗಳು ಯಾವುದೇ ಹೊಸ ಹೊರೆ ವಿಧಿಸಿಲ್ಲ.

​ಅಡುಗೆ ಅನಿಲದ ಜೊತೆಗೆ, ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್) ದರವನ್ನು ಕೂಡ ಪ್ರತಿ ಲೀಟರ್‌ಗೆ 1.37 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ನೂತನ ದರ 138.50 ರೂ.ಗೆ ತಲುಪಿದೆ. ಇದು ಸತತ ನಾಲ್ಕನೇ ತಿಂಗಳ ದರ ಏರಿಕೆಯಾಗಿದ್ದು, ವಿಮಾನಯಾನ ಕಂಪನಿಗಳ ನಿರ್ವಹಣಾ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಲಿದೆ.

​ಜಾಗತಿಕ ಮಾರುಕಟ್ಟೆಯಲ್ಲಿನ ತೈಲ ದರದ ಏರಿಳಿತಗಳು ಹಾಗೂ ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯವನ್ನು ಆಧರಿಸಿ ಪ್ರತಿ ತಿಂಗಳ 1ರಂದು ಎಲ್‌ಪಿಜಿ ಮತ್ತು ಎಟಿಎಫ್ ದರಗಳನ್ನು ಪರಿಷ್ಕರಿಸಲಾಗುತ್ತದೆ. ಅಲ್ಲದೆ, ಸ್ಥಳೀಯ ಮೌಲ್ಯವರ್ಧಿತ ತೆರಿಗೆಗಳು (ವ್ಯಾಟ್) ಸೇರ್ಪಡೆಯಾಗುವುದರಿಂದ ರಾಜ್ಯದಿಂದ ರಾಜ್ಯಕ್ಕೆ ಈ ದರಗಳಲ್ಲಿ ತುಸು ವ್ಯತ್ಯಾಸವಿರುತ್ತದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇಂಡಿಯಾ’ ಬೃಹತ್ ರ್ಯಾಲಿ ಮೇಲೆ ಮೋದಿ ಸರ್ಕಾರದ ಕಣ್ಣು; 4,000 ಪೊಲೀಸರು, 200 ಸಿಸಿಟಿವಿ ಕ್ಯಾಮೆರಾಗಳ ನಿಯೋಜನೆ!

ಚುನಾವಣಾ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಕೃಷಿರಂಗ | ರಾಜ್ಯೋತ್ಸವದ ನೆಪದಲ್ಲಿ ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಆರಂಭದ ಸವಿನೆನಪುಗಳು

ಮಂಗಳೂರಿನಲ್ಲಿ 1841ರಲ್ಲಿ ಮೊಟ್ಟಮೊದಲಿಗೆ ಆರಂಭವಾದ ಬಾಸೆಲ್ ಮಿಷನ್ ಮತ್ತು ಟ್ರಾಕ್ಟ್ ಡೆಪಾಸಿಟರಿ...

ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ...